ಆರಿಗ್ಯಾತಕೆ ಮೊರೆಯಿಡಲಿ
ಸಾರಿದವರನ ಪೊರೆವ ಶ್ರೀರಮಣ ನೀನಿರಲು ಪ
ಬೆಳಸಿಗೊಬ್ಬನ ಕೇಳೆ ಮಳೆಗೆ ಮತ್ತೊಬ್ಬನೆ
ಅಳತಿಗೆ ಇನ್ನೊಬ್ಬನೆ ಹಾಗೆವೆ
ವಳತಿಗೊಬ್ಬರು ದೊರೆಗಳೆ ಮ್ಯಾಲೆನ್ನ
ಪ್ರಳಯಕೆ ಮತ್ತೊಬ್ಬನೆ ಪರಿಪರಿ
ಖಳರ ಮಾತುಗಳೇ ಸ್ವಾಮಿ 1
ಆಕಾಲ ನೀನೆವೆ ಈ ಕಾಲದಲಿ ನೀನೆ
ಸಾಕುವನು ಇನ್ನೊಬ್ಬನೆ ಸ್ಥಿರವಾಗಿ
ತಾಕು ತಗಲಿಲ್ಲದೆಲೆ ಬೊಮ್ಮಾದಿ
ಲೋಕಪತಿಗಳ ಒಡಿಯನೇ ಈ ವ್ಯಾಳ್ಯ
ಲೋಕರನ ಕಾಯಬೇಕೊ ಸ್ವಾಮಿ 2
ಕಾಸು ಒಬ್ಬರಿಗಿಲ್ಲ ಲೇಸು ತೋರದಲೇವೆ
ದೇಶಕೊಬ್ಬರು ಪೋದರೋ ಪೊಟ್ಟಿಗೆ
ಕೂಸುಗಳ ಮಾರುಂಡರೋ ಈ ಜನರ
ಕ್ಲೇಶಬಡಸದಲೆ ಪೊರಿಯೊ ಕರುಣದಲಿ
ವಾಸುದೇವವಿಠಲ ಸ್ವಾಮಿ 3