ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಹಣೆಯ ಬರಹಕೆ ಎಂಥಾ ಗಂಡ ದೊರೆತನೇಎನ್ನ ಮನವೆಂಬ ಗಂಡನ ಪರಿಯ ಪೇಳುವೆನೆ ಪ ಅಡಕಿಲಿಗಳನೆಲ್ಲವ ಹುಡುಕುವನೇಅಡುಗೆಯ ಮಡಕೆಯನೆಲ್ಲ ಒಡೆದನೇಗುಡುಗುಟ್ಟುತ ಯಾವಾಗಲೂ ಇಹನೇಗುಡ್ಡವನೇರುವನೇ 1 ಮುನಿಸಿಕೊಂಡು ಮೇಲಟ್ಟದಿ ಕೂರುವನೇಘನ ಹುಟ್ಟನೆ ಮುಂದಿಹನೇಮನೆಯಲೆಲ್ಲರ ಬಡಿವನೇಮತವನು ಕೆಡಿಸಿದನೆ 2 ದುಡಿವ ಕೋಣನನು ಕೊಂದನೇಕಡಿದುಬಿಟ್ಟನೆ ಕಾಯುವ ನಾಯನುಪುಡಿ ಮಾಡಿದ ಕಟ್ಟುವ ಹಗ್ಗವನೇ ಪಂಕ್ತಿಯ ಸೇರದಿಹನೆ 3 ಒತ್ತೆಯ ಒಡವೆಯನೆ ತಿಂದನೇಬತ್ತಿಯ ಹಿರಿದಾಗೆ ಚಾಚುವನೇಕಿತ್ತು ಒಗದನೇ ದೇವರನೇ ಕಡಿದನೇ ಮರವನ್ನೇ 4 ತ್ಯಜಿಸಿದ ನೆಚ್ಚಿದ ಮಡದಿಯನೇತ್ಯಜಿಸಿದ ಮೋಹದ ಮನೆಯನ್ನೇಭಜಿಸಿದ ಚಿದಾನಂದ ಗುರುವನ್ನೇನಿಜದಲಿ ಬೆರೆತನು ಅವರನ್ನೇ 5
--------------
ಚಿದಾನಂದ ಅವಧೂತರು
ಮೂರ್ಖರಾದರು ಇವರು ಲೋಕದೊಳಗೆಏಕದೈವವ ಬಿಟ್ಟು ಕಾಕುದೈವವ ಭಜಿಸಿ ಪ.ಒಂಟಿಯಲಿ ಹೆಂಡತಿಯ ಬಿಡುವಾತನೇ ಮೂರ್ಖಗಂಟನೊಬ್ಬನ ಕೈಯಲಿಡುವವನೆ ಮೂರ್ಖನಂಟರಿಗೆ ಸಾಲವನು ಕೊಡುವಾತ ಮೂರ್ಖ - ಜಗಕಂಟಕನಾದವನು ಕಡು ಮೂರ್ಖನಯ್ಯಾ 1ಮುಪ್ಪಿನಲಿ ಹೆಂಡತಿಯ ಮಾಡಿಕೊಂಬವ ಮೂರ್ಖಸರ್ಪನಲಿ ಗಾರುಡವ ನಡಸುವನೆ ಮೂರ್ಖಇಪ್ಪತ್ತು ಒಂದು ಕುಲ ಉದ್ಧರಿಸದವ ಮೂರ್ಖಅಪ್ಪ ರಂಗಯ್ಯನನು ನೆನೆಯದವ ಮೂರ್ಖ 2ಸತ್ತ ಕರುವಿನ ತಾಯ ಹಾಲು ಕರೆವವ ಮೂರ್ಖಒತ್ತೆಯಿಲ್ಲದೆ ಸಾಲ ಕೊಡುವವನೆ ಮೂರ್ಖಹತ್ತೆಂಟು ಬಗೆಯಲಿ ಹಂಬಲಿಸುವವ ಮೂರ್ಖಹೆತ್ತ ತಾಯ್ ಬೈವವನು ಕಡು ಮೂರ್ಖನಯ್ಯ 3ಪಡೆದ ಮಗಳನುಮಾರಿ ಒಡಲಹೊರೆವವ ಮೂರ್ಖಮಡದಿ ಹುಟ್ಟಿದ ಮನೆಯೊಳಿರುವವನೆ ಮೂರ್ಖಬಡತನವು ಬಂದರೆ ಬಯಸಿಕೊಂಬವ ಮೂರ್ಖದೃಡಬುದ್ಧಿಯಿಲ್ಲದವ ಕಡು ಮೂರ್ಖನಯ್ಯ 4ರಾಮನಾಮವ ಸ್ಮರಿಸದಿದ್ಧಾತನೇ ಮೂರ್ಖಹೇಮವನು ಗಳಿಸಿ ಉಣದಿದ್ದವನೆ ಮೂರ್ಖನೇಮದಲಿ ಹಿರಿಯರನು ನೋಡದವ ಮೂರ್ಖ ದುರ್ನಾಮವನು ಕೊಂಬಾತ ಕಡು ಮೂರ್ಖನಯ್ಯ 5ಕಾಶಿಯಲಿ ದೇಹವನು ತೊಳೆಯದಿದ್ದವ ಮೂರ್ಖಭೂಸೂರರಿಗನ್ನವನು ಕೊಡದವನೆ ಮೂರ್ಖಶೇಷಪತಿ ಕೃಷ್ಣನ ನೆನೆಯದವ ಮೂರ್ಖಹರಿದಾಸನಾಗಿರದವನು ಕಡು ಮೂರ್ಖನಯ್ಯ 6ಉಂಡ ಮನೆಗೆರಡನ್ನು ಬಗೆವಾತನೇ ಮೂರ್ಖಕೊಂಡೆಯವ ಪೇಳಿ ತಿರುಗುವವ ಮೂರ್ಖಪುಂಡರೀಕಾಕ್ಷ ಶ್ರೀ ಪುರಂದರವಿಠಲನಕೊಂಡು ಭಜಿಸದ ಮನುಜ ಕಡು ಮೂರ್ಖನಯ್ಯ 7
--------------
ಪುರಂದರದಾಸರು