ಕರುಣಿಸೊ ಗುರುವೆ ಚರಣ ಸ್ಮರಣೆಯು ನಿಮ್ಮ ಧ್ರುವ
ಸ್ಮರಿಸಲಿಕ್ಕೆ ನಾ ನಿಮ್ಮ ತರಳ ಪ್ರಹ್ಲಾದನಲ್ಲ
ಅರಿತು ಮಾಡುವದು ದಯ ತರಣೋಪಾಯದ 1
ಒಲಿಸಿಕೊಳ್ಳಲು ನಿಮ್ಮ ಫÀಲ್ಗುಣನಂಥವನಲ್ಲ
ಗೆಲಿಸುವದೊ ನೀ ಸುಪಥ ನೆಲೆನಿಭದೋರಿ 2
ಮೊರೆ ಇಡಲು ನಾ ನಿಮ್ಮ ಕರಿರಾಜನÀಂಥವನಲ್ಲ
ಕರುಣಿಸುವದೊ ಎನಗೆ ಕರವಿಡಿತು ಪೂರ್ಣ 3
ಶರಣ ಹೋಗಲು ನಿಮ್ಮ ಧೀರ ವಿಭೀಷಣನಲ್ಲ
ಪಾರ ಗೆಲಿಸುವದೊ ನಿಮ್ಮ ವರಕೃಪೆಯಿಂದ 4
ಭಕ್ತಿ ಮಾಡಲು ನಿಮ್ಮ ಶಕ್ತಸಮಥನಲ್ಲ
ಯುಕ್ತಿದೋರುವದೊ ನಿಮ್ಮ ಮುಕ್ತಿಮಾರ್ಗದ 5
ಸ್ತುತಿಯ ಮಾಡಲು ನಿಮ್ಮ ಅತಿಶಯ ಭಕ್ತ ನಾನಲ್ಲ
ಗತಿಸುಖದೋರುದೆನಗೆ ಪತಿತಪಾವನ 6
ದಾಸರ ದಾಸನೆಂದು ಲೇಸಾಗಿ ಮಹಿಪತಿಗೆ
ವಾಸನೆ ಪೂರಿಸೊ ಪೂರ್ಣ ದೇಸಿಗರ ದೇವ 7