ಕಾಯೊ ಕಾಯೊ ಜಿತಕಾಯ ಗುರು ಬಾದ
ರಾಯಣ ತತ್ವಜ್ಞರಾಯ ಪ
ನಾ ಯಾರಿಗೆ ಬಿನ್ನೈಪೆ | ಹೇಯಸಂಸಾರದ
ಎರಡೊಂದು ಮಠದಲಿ ಧರಿಸಿ ತೂರ್ಯಾಶ್ರಮ
ಸಿರಿಯರಸನ ದಿವ್ಯ ಮೂರ್ತಿಗಳ
ಕರದಿಂದ ಪೂಜಿಸಿ | ಮರುತ ದೇವನ ಮತ
ಪರಮಾನಂದವೆಂದು ಧರೆಗೆ ಬೀರಿದ ಕರುಣಿ 1
ಜ್ಷಾನಿಗಳರಹುವ | ವಾಣಿಯಿಂದಲಿ ದೇ
ಮೌನಿವರಿಯ ಎನ್ನ | ಹೀನಪಾತಕವೆಂಬ
ಕಾನನ ದಹಿಸೆಂದು | ಸಾನುರಾಗದಿ ನೋಡಿ 2
ಭೂಸುರ ಪರಿಪಾಲ | ಶ್ರೀ ಶಾಮಸುಂದರನ
ಲೇಸಾಗಿ ಒಲಿಸುತಲಿ ಕಿಟಜದಲಿ
ಭಾಸುರ ಘನವೇಣಿ | ಭೇಶಪುರದಿ ನೆಲಸಿ
ದಾಸರ ಮನದಭಿಲಾಷೆ ನೀಡುವ ದಾನಿ 3