ಕೇಳಿಪೇಳಮ್ಮ ನಮ್ಮಮ್ಮ ಲಕುಮೀ ಪ
ಕೇಳಿಪೇಳೆ ಹರಿಯಲಿ ಪೋಗಿ ಬಹಳ ಸೋಕಿನವ ಗೋಪಿಬಾಲೀಯರಿಗೆ ಮೆಚ್ಚಿ ಬಹು ಜಾಲವ ಮಾಡಿದ ಕೃಷ್ಣನ ಅ.ಪ.
ಪ್ರಳಯ ಕಾಲದಲ್ಲಿ ಆಲದೆಲೆ ಮೇಲೆ ಮಲಗಿಪ್ಪನುಒಲುಮಿಗಳ ಒಲುಮಿಕಾಂತ ಲಲನೆ ನೀನು ಕಮಲಾದೇವಿ 1
ನಿತ್ಯಮುಕ್ತೆ ನಿತ್ಯತೃಪ್ತೆ ನಿತ್ಯಾವಿಯೋಗಿನಿ ಹರಿಗೆಭೃತ್ಯನಲ್ಲೆ ನಾನು ಸ್ವಲ್ಪ ಚಿತ್ತವಿಟ್ಟು ನೋಡೆ ತಾಯಿ 2
ನಿನ್ನ ಹೊರತು ಆತನನ್ನು ತೋರುವರ ಕಾಣೆನಮ್ಮಸನ್ನುತಾಂಗಿ ಸಾರಸಾಕ್ಷಿ ಎನ್ನೊಳು ಕರುಣವ ಮಾಡೇ 3
ಎಲ್ಲ ದಿವಿಜರಲ್ಲಿ ಪೋಗೆ ಬಲುಬಗೆ ಪೇಳಿಕೊಂಡೆಫುಲ್ಲನಾಭನಲ್ಲಿ ಒಂದು ಸೊಲ್ಲನಾಡೋ ಶಕ್ತಿಯಿಲ್ಲ 4
ಪಾದ ಬಾಲ್ಯದಿಂದ ಸೇರಿದ್ದಕ್ಕೆನೀರಜಾಕ್ಷನನ್ನು ತೋರೆ ಭಾರಿ ಫಲವಾಯಿತೆಂಬೆ 5
ನಿಮ್ಮ ಮಾತು ಮೀರ ಶೂರ ನಮ್ಮ ಮಾರಜನಕ ಕೃಷ್ಣಅಮರ ತರುವ ಕಿತ್ತಿ ನಿಮ್ಮ ಮನೆಯೊಳ ಹಚ್ಚಿದನಂತೆ 6
ಸುಂದರಿ ಸೌಭಾಗ್ಯವಂತೆ ಮಂದಿರದೋಳಿಪ್ಪನನ್ನುಇಂದಿರೇಶನನ್ನು ತೋರೆ ನಂದ ಬಾಲ ಮಹಿಳೆ ಅಂಬಾ 7