ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರಕವಿಗಳ ಮುಂದೆ ನರಕವಿಗಳ ವಿದ್ಯೆ ತೋರಬಾರದು - ಈಧರಣಿಯ ಕಲ್ಲಿಗೆ ಶರಣೆಂದು ಪೂಜೆಯ ಮಾಡಬಾರದು ಪ ಪಾಪಿಗಳಿದ್ದಲ್ಲಿ ರೂಪುಳ್ಳ ವಸ್ತುವ ತೋರಬಾರದು - ಬಹುಕೋಪಿಗಳಿದ್ದಲ್ಲಿ ಅನುಭವಗೋಷ್ಠಿಯ ಮಾಡಬಾರದು1 ಅಡಿ ಸತ್ತ ಮಡಕೆಗೆ ಜೋಡಿಸಿ ಒಲೆಗುಂಡು ಹೂಡಬಾರದು - ಬಹುಬಡತನ ಬಂದಾಗ ನೆಂಟರ ಬಾಗಿಲ ಸೇರಬಾರದು2 ಹರಿಯ ನಿಂದಿಸಿ ಹರ ಘನನೆಂದು ನರಕಕ್ಕೆ ಬೀಳಬಾರದು - ತಾಪರರನು ಬೈದು ಪಾತಕಕೆ ಮುನ್ನೊಳಗಾಗಬಾರದು 3 ಮಡದಿ ನುಡಿಯ ಕೇಳಿ ಜಗಳಕೊಬ್ಬರ ಕೂಡೆ ಹೋಗಬಾರದು - ಬಾ-ಯ್ಬಡಿಕರು ಇದ್ದಲ್ಲಿ ವಸ್ತಿ ಬಿಡಾರವ ಮಾಡಬಾರದು 4 ಮುಂದೆ ಭಲಾ ಎಂದು ಹಿಂದೆ ನಿಂದಿಪರನ್ನು ಕೂಡಬಾರದು - ನಮ್ಮತಂದೆ ಬಾಡದಾದಿಕೇಶವನ ಸ್ಮರಣೆಯ ಬಿಡಬಾರದು5
--------------
ಕನಕದಾಸ
ವರಕವಿಗಳಿದ್ದಲ್ಲಿ ನರಕವಿಗಳ ಕೊಂಡಾಡಬಾರದು - ಇಂಥಾಧರಣಿಯ ಕಲ್ಲಿಗೆ ಸ್ಥೀರವೆಂದು ಪೂಜೆಯಮಾಡಬಾರದು ಪ.ಆಡಿಗೋದ ಮಡಕಿಗೆ ಜೋಡಿಸಿ ಒಲೆಗುಂಡ ಹೂಡಬಾರದುಬಡತನ ಬಂದರೆ ನಂಟರ ಬಾಗಿಲ ಸೇರಬಾರದು 1ಮಡದಿಯ ನುಡಿಕೇಳಿ ಬಡವರ ಜಗಳಕೆಹೋಗಬಾರದು - ಬಹಳಬಡತನ ಬಂದವಳ ಕೈಯಿಂದ ಅಡಿಗೆಯ ಉಣ್ಣಬಾರದು 2ಪಾಪಿಗಳಿದ್ದಲ್ಲಿ ರೂಪದ ಒಡವೆಯ ತೋರಬಾರದು - ಕಡುಕೋಪಿಗಳಿದ್ದಲ್ಲಿ ಅನುಕೂಲಗೋಷ್ಠಿಮಾಡಬಾರದು3ಪರರ ನಿಂದಿಸಿ ಪರಬ್ರಹ್ಮ ರೂಪೇಂದ್ರನ ಜರೆಯಬಾರದುವರದ ಶ್ರೀ ಪುರಂದರವಿಠಲನ ಸ್ಮರಣೆಯ ಮರೆಯಬಾರದು 4
--------------
ಪುರಂದರದಾಸರು