ಪೋಗುವೆವಮ್ಮ ಪ
ಉದಯವಾಗದ ಮುನ್ನ ಬರುವ ಕಣಮ್ಮ
ಕದವ ಬಾರಿಸಿ ಒಳಪೊಕ್ಕ ಕಣಮ್ಮ
ಮೊದಲೆನ್ನ ಮಗಳ ತಕ್ಕೈಸಿದನಮ್ಮ
ಸದರದಲಿ ಮೊಸರನೆಲ್ಲ ಕುಡಿದ ಕಣಮ್ಮ 1
ಉಟ್ಟ ಸೀರೆಯ ಬೆಲೆ ಏನೆಂದಮ್ಮ
ಪಟ್ಟೆ ಕುಪ್ಪಸಕೇನು ಪಣವೆಂದನಮ್ಮ
ತೊಟ್ಟು ಕೊಂಡೆನ್ನನು ಬಿಡದೆ ಕಾಣಮ್ಮ 2
ನಸುಗಪ್ಪಿನೊಳು ಸಜ್ಜೆಮನೆಯೊಳಗಮ್ಮ
ಮೊಸರು ಪಾಲ್ಬೆಣ್ಣೆಯ ಮೆದ್ದ ಕಾಣಮ್ಮ
ಸೊಸೆಯು ಪಿಡಿಯೆ ಬಿಗಿದಪ್ಪಿದನಮ್ಮ
ನಸು ಬೆವರಿಡೆ ತನು ಬಿಡದೆ ಕಾಣಮ್ಮ 3
ಜಾರ ಜೋರರ ಶಿಖಾಮಣಿಯಿವನಮ್ಮ
ಯಾರೆಂದು ಹೊರಗೊಬ್ಬ ಕರೆಯೆ ಗೋಪಮ್ಮ
ಚೋರ ಗಂಡಿಯ ಪೊಕ್ಕು ಓಡಿದನಮ್ಮ 4
ಊಚು ನೀಚುಗಳೇನು ಇವಗಿಲ್ಲವಮ್ಮ
ನಾಚಿಕೆನಮಗಾಗುತಿದೆ ಹೇಳಲಮ್ಮ
ಕೀಚಕರಿಪು ಕೋಣೆ ಲಕ್ಷ್ಮೀಶಗಮ್ಮ
ವಾಚಿಸೆ ನೀನೊಂದ ಮಾತ ನಮ್ಮಮ್ಮ 5