ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಜ್ಞಾನಿಗಳ ಕೂಡ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡ ಜಗಳವೇ ಲೇಸು ಪ.ಡಂಭಕರ ಮನೆಯಪಮಾನದೂಟಕ್ಕಿಂತತುಂಬಿದ ಪಟ್ಟಣದಿ ತಿರಿದುಂಬುವುದೆ ಲೇಸು |ಹಂಬಲಿಸಿ ಹಾಳು ಹರಟೆ ಹೊಡೆವುದಕಿಂತನಂಬಿ ಹರಿದಾಸರೊಳಾಡುವುದೆ ಲೇಸು 1ಒಡಲ ಹಂಗಿಸುವರ ಮನೆಯ ಓಗರಕಿಂತಕುಡಿನೀರ ಕುಡಿದುಕೊಂಡಿಹುದೆ ಲೇಸು |ಬಿಡದೆ ಕಡಿದಾಡುವರ ನೆರೆಯಲಿಹುದಕಿಂತಅಡವಿಯೊಳಜ್ಞಾತವಾಸವೇ ಲೇಸು 2ಮಸೆದು ಮತ್ಸರಿಸುವನ ಬಳಿಯಲಿಹುದಕಿಂತಹಸನಾದ ಹಾಳುಗುಡಿಗಳೆ ಲೇಸು |ಬಿಸಜಾಕ್ಷ ಪುರಂದರವಿಠಲನ ನೆನೆನೆನೆದುವಸುಧೆಯೊಳು ಚಿರಕಾಲವಿರುವುದೆ ಲೇಸು 3
--------------
ಪುರಂದರದಾಸರು