ಔಷಧದ ಬೇರೊಂದನು ನಾರದನು ತಂದ
ಪೋಷಣೆಗೆ ಸಕಲರೂ ಸವಿಯಲೆಂದ ಪ
ಜ್ವರಭೇದಗಳಿಗೆಲ್ಲ ನರಹರಿ ಎಂಬ ಬೇರು
ಶಿರವೇಧೆ ಎಂಬುದಕೆ ಹರಿಹರಿ ಎಂಬ ಬೇರು
ವಾತ ರುಜೆಗಳಿಗೆ ಸಿರಿಲೋಲನೀ ಬೇರು
ಪರಿಪರಿಯ ಭವಗಳಿಗೆ ನಾರಾಯಣಾ ಎಂಬ ಬೇರು 1
ಪಿತ್ತರೋಗಂಗಳಿಗೆ ಚಿತ್ತಜನಪಿತನೆಂಬ
ಪೃಥ್ವಿಯೊಳಗತ್ಯಧಮ ವಿಭಂದ ರೋಗಗಳಿ
ಗರ್ಥಿಯಿಂ ಲೇಪಿಸುವ ಸತ್ವಗುಣನಿಧಿಯೆಂಬ
ನಿತ್ಯಶೌರಿಯ ನಾಮ ಶಿವಬೇರು 2
ನಾರದನು ಬೇರೂರೆ ನೀರೆರೆದ ಪ್ರಹ್ಲಾದ
ಧೀರಬಲಿ ಬೆಳೆಯಿಸಿದ | ನೀರ ಗಜನೆರೆದ
ವೀರದಶಶಿರನನುಜನೆಚ್ಚರದೊಳಿದ ಕಾಯ್ದ
ನಾರಿ ದ್ರೌಪದಿ ಶಿರದಿ ಮೊಗ್ಗಾಗಿ ಧರಿಸಿದಂಥ 3
ಅರಳಿದ ಸುಮಗಳನು ಅಕ್ರೂರ ಪೋಷಿಸಿದ
ತ್ವರಿತದಿ ಕಾಯ್ಗಳನು ಶುಕದೇವ ಕಾಯ್ದ
ನರರೆಲ್ಲರೀ ಫಲವ ದಿನದಿನವು ಮೆಲಲೆಂದು
ವರದ ಮಾಂಗಿರಿರಂಗ ಪೇಳುತಿಹನು 4