ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟಾಚಲ ನಿಲಯ ಪಿಡಿಯೆನ್ನ ಕೈಯ ಪಂಕಜಾಲಯ ಸುಪ್ರೀಯ ಪ ಅಹಿ ಕಂಕಣನುತ ಪದ- ಪಂಕಜ ತೋರೊ ಮೀನಾಂಕನ ಜನಕ ಅ.ಪ. ಪತಿತ ಪಾವನ ಮೋಹನ, ಪಾಲಿಸೊ ಎನ್ನ ಸತತ ಬಿಡದೆ ನೋಡೆನ್ನ ಹಿತರಹಿತರಾದವರನ್ನ ಪೊರೆದಳಿದೆ ಘನ್ನ ನತಜನರಿಗೆ ಪ್ರಸನ್ನ ದಿತಿಸುತ ತತಿಸಂಗತಿಯಲಿ ಮಥಿಸಲು ವನಧಿಯ ಅತಿ ಸಮ್ಮತಿಯಲಿ ಚತುರ ಧರಿಸಿ ಪರ್ವತ ಸುರತತಿಗ- ಮೃತ ವುಣಿಸಿದ ಶಾಶ್ವತಗತಿನಾಥ 1 ಸತಿಯ ಕಾಯಿದ ವಿನೋದ ಸಾಮಜವರದ ಚತುರದಶ ಲೋಕಾಧಿನಾಥ ಗತಿ ನೀನೆ ಮಹಾಪ್ರಸಾದ ಪರಮಮೋದ ಅತಿಶಯದಿ ಪೊಳೆವ ಪಾದ ಶತಪತ್ರವು ಹೃದ್ಗತವಾಗಲಿ ಉ- ನ್ನತ ಮಹಿಮನೆ ಕೀರುತಿವಂತನೆ ಅ- ಪ್ರತಿಭಾರತಮಲ್ಲ ಮೂರವತಾರಗೆ ಅತಿಪ್ರಿಯನೆನಿಪ ಮೂರತಿ ಚತುರದೇವ 2 ಸ್ಥಿತ ಮನ ಮಾಡೋ ಭವಭಂಗ ಸಂಗ ನಿಸ್ಸಂಗ ಚ್ಯುತಿ ದೂರ ಶೌರೀ ಕಾಳಿಂಗ- ದುರಿತ ಮಾತಂಗ-ಮರಿಗೆ ಸಿಂಗ ತುತಿಪೆ ಕರುಣಾಂತರಂಗ ಕ್ಷಿತಿಯೊಳಗಹಿ ಪರ್ವತನಿವಾಸನೆ ಖರೆಗೊಳಿಸುವ ದುರ್ಮತಿಯನು ತೊಲಗಿಸಿ ತ್ವತು ಪಾದದಲಿಡು ಮತಿಯಲ್ಲದೆ ತಿರು - ಪತಿ ವಿಜಯವಿಠ್ಠಲ ಇತರವನರಿಯೆ 3
--------------
ವಿಜಯದಾಸ