ಗಿರಿರಾಜತನೂಜಾತೆವೇದ ವಿಖ್ಯಾತೆಪರಮಂಗಳದಾತೆ ಪದ್ಮಜಮುಖಿ ಸುರಗಣ ಪರಿಪೂಜಿತೆಶಂಕರಪ್ರೀತೆಧುರದಿ ಮಧುಕೈಟಭರ ವಧಿಸಿ ವಿ-ಸ್ತರದ ಜಲದೊಳು ಸ್ಥಿರಮೆನಲು ಭಾ-ಸುರ ಧರಿತ್ರಿಯ ನಿಲಿಸಿ ಸರ್ವಾಮರರಪೊರೆದಮರೇಂದ್ರಸನ್ನುತೆಲೋಕೈಕಮಾತೆ 1
ನಾರದಗಾನಲೋಲೆಶ್ರೀಚಕ್ರಸಂಚಾರಿಣಿ ಶುಭಲೀಲೆದಿವ್ಯಮೌಕ್ತಿಕಹಾರೆ ಕುಂಕುಮನಿಟಿಲೆಮುಕುರಕಪೋಲೆಧೀರಸುರಪತಿಮುಖ್ಯಸುರಪರಿವಾರ ಜಯವೆಂದಾರುತಿರೆ ಜುಝೂರ (?) ಮಹಿಷಾಸುರನ ಮರ್ಧಿನಿಮೂರು ಲೋಕವ ಪೊರೆವ ಮಂಗಲೆಕಸ್ತೂರಿಫಾಲೆ 2
ಎಸಳುಗಂಗಳ ನೀರೆಪರಾತ್ಪರೆಮಿಸುಪ ಕಂಕಣಹಾರೆಬಂದುಗೆಯ ಹೂವಿನಂತೆಸೆವಸುಶೋಣಾಧರೆಬಿಸಜಬಾಣನ ಪೊಸಮಸೆಯ ಕೂರಸಿಯೆನಲು ಮಿಸುಮಿಸುಪ ಕಂಗಡೆಎಸವ ಪೊಸವೆಳಗಿಂದ ದೆಸೆಗಳವಿಸರವನು ಪಸರಿಸುವ ಶ್ರೀಕರೇಮೋಹನಾಕಾರೇ3
ಸುಲಲಿತ ಮಧುರವಾಣಿಮೋಹನಕರಜಲರುಹ ಸದೃಶಪಾಣಿಮಂಗಲಸೂತ್ರೋ-ಜ್ವಲೆ ಹರಿ ನೀಲವೇಣಿಸಿಂಹವಾಹಿನಿನಳನಳಿಪ ನಳಿತೋಳ ಥಳ ಥಳಥಳಿಸುವಳಿಕುಂತಳದದರಸಮಗಳದತಿಲಸುಮನಾಸಿಕದಅರಗಿಳಿನುಡಿಯರುದ್ರಾಣಿ ಗುಣಮಣಿಪರಮಕಲ್ಯಾಣಿ4
ಸರಸಿಜದಳನಯನೆಸಾಮಜಯಾನೆ ಸರಸಮಂಗಲಸದನೆಶಂಕರಿಪೂರ್ಣೆಶರದಿಂದುನಿಭವದನೆಕೋಕಿಲಗಾನೆಪರಮಪಾವನತರ ಸು-ವರದಾನದಿಯ ತೀರದಿ ಮೆರವ ಕೆಳದಿಯಪುರದ ರಾಮೇಶ್ವರನ ವಲ್ಲಭೆಯೆನಿಸಿ ಭ-ಕ್ತರ ಪೊರೆವ ಪಾರ್ವತಿಕಲಹಂಸಗಮನೆ ಪರಮರುದ್ರಾಣಿ5