ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯೋಗಿ ವ್ಯಾಸರಾಯರೆಂಬ ವಿಚಿತ್ರ ಮೇಘ ಬೇಗ ವಿಷ್ಣುಪದವ ತೋರುಸುತ್ತ ಬಂತಿದೆಕೊ ಪ ಮಾಯಿಮತವೆಂಬ ತಾರಾಮಂಡಲವ ಮುಸುಕುತ್ತ ವಾಯುಗತಿಯಂತೆ ಗಮಿಸುತಲಿ ಹೇಯ ಕಾಮಾದಿಗಳೆಂಬ ರಜವನಡಗಿಸುತ ನಾಯಕನುಪೇಂದ್ರನಾಜ್ಞೆಯ ಪಡೆದು 1 ಅಂಗಜನಯ್ಯನೆ ಪರನೆಂದು ಫುಡಿಫುಡಿಸುತ್ತ ಕಂಗಳೆಂಬ ಮಿಂಚನೆ ನೆರಹಿ ಲೋಕದಿ ಹಿಂಗದೆ ಪರಿವ ಅಜ್ಞಾನವೆಂಬ ಕತ್ತಲೆಯ ಭಂಗಿಸಿ ಸುರಪಥವ ತೋರಿಸುತ್ತ 2 ಸಿರಿಯರಸನ ಸಮ್ಯಕ್ಜ್ಞಾನವೆಂಬ ಪೈರಿಗೆ ಬೇರುಬಿಡಿಸಿ ಹರಿಕಥೆಯೆಂಬ ಮಳೆಗರೆದು ನೆರೆ ಶಿಷ್ಯಮನವೆಂಬ ಕೆರೆತುಂಬಿಸಿ ಕರಗಳೆಂಬ ಭರಕೋಡಿ ಹರಿಸುತ ವಿಜಯೀಂದ್ರನ ಗುರು 3
--------------
ವಿಜಯೀಂದ್ರತೀರ್ಥರು