ಗುಣವಂತರ ಗುಣವ ಗುಣವಂತನರಿವನುಗುಣಹೀನ ಗುಣವಂತನ ಗುಣವೇನ ಬಲ್ಲನೋ ಪ
ಕಮಲಗಳ ಹೃದಯ ಭ್ರಮರಕ್ಕೆ ತಿಳಿಯುವುದುಕಮಲಗಳ ಗುಣ ಕಪ್ಪೆಗೇನು ತಿಳಿವುದೋವಿಮಲರಾ ಹೃದಯ ವ್ಯುತ್ಪನ್ನರಿಗೆ ಹೊಳೆಯುವುದುಕುಮತಿಗಳಿಗೆ ಕೋಮಲರ ಘನತೆಯೆಂತರಿವುದೋ 1
ಕೆಚ್ಚಲೊಳಿರುತಿಹುದು ಕರುವಿಗೆ ದೊರಕುವುದುಕೆಚ್ಚಲ ಕಚ್ಚಿರುವ ಉಣ್ಣೆಗದು ದೊರೆವುದೋಸಚ್ಚರಿತ್ರರ ಬೋಧೆ ಸತ್ಪುರುಷಗಂಟುವುದುಹುಚ್ಚ ತಾ ಬದಿಯಿದ್ದರೆ ಪರಿಣಾಮವೇನಹುದೋ 2
ಸಾಧುಗಳ ಮಹಿಮೆಯ ಸಾಧುಗಳ ಹೃದಯವುಸಾಧುಗಳ ಬೋಧೆಯ ಸಾಧು ಸಹವಾಸಬೋಧ ಚಿದಾನಂದ ಬಗಳೆಯಾದವರಿಗರಿವುವಾದಿಯಾಗಿಹ ಮೂರ್ಖರಿಗೆ ಗುಣವೇನು ತಿಳಿಯುವುದೋ 3