ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚೆಲ್ವೇರಾರತಿಯ ತಂದೆತ್ತಿರೆ ಪ ಹುಟ್ಟಿದಳಾ ಕ್ಷೀರಸಾಗರದಲಿ ಸ- ಮಸ್ತ ಜನರಿಗೆ ಸುಖವ ನೀಡುತ ಶ್ರೇಷ್ಠರೊಳಗೆ ಜೇಷ್ಠಾದೇವಿ ಶ್ರೀನಾಥನ ಪಟ್ಟದರಸಿ ಮುದ್ದು ಮಾಲಕ್ಷ್ಮಿಗೆ 1 ಮುದ್ದು ಮೋರೆಗೆ ತಕ್ಕ ಮುಖುರ್ಯ ಬುಲಾಕ- ನಿಟ್ಟ ್ವಜ್ರದ ಬುಗುಡಿ ವೈಯಾರದಿಂದ ತಿದ್ದಿ ಬೈತಲು ಜಡೆಬಂಗಾರ ರಾಗಟೆ ಪದ್ಮನಾಭನ ರಾಣಿ ಮಾಲಕ್ಷ್ಮಿಗೆ 2 ವಾಲೆ ಸರಪಳಿ ಚಳತುಂಬು ಚಿನ್ನದ ಸರಿಗೆ ಮೋಹನ್ನಮಾಲೆ ಕಣ್ಣಕಾಡಿಗೆ ಹಚ್ಚಿ ಕಸ್ತೂರಿ ಕುಂಕುಮ ಚೆನ್ನಾರ ಚೆಲುವೆ ಶ್ರೀ ಮಾಲಕ್ಷ್ಮಿಗೆ 3 ಸೆಳೆನಡುವಿಗೆ ತಕ್ಕ ಬಿಳಿಯ ಪೀತಾಂಬರ ನಳಿತೋಳಿನಲಿ ನಾಗಮುರಿಗೆ ವಂಕಿ ಕಮಲ ದ್ವಾರ್ಯ ಹರಡಿ ಕಂಕಣನಿಟ್ಟು ಕಳೆಯ ಸುರಿವ ಚೆಲ್ವೆ ಮಾಲಕ್ಷ್ಮಿಗೆ 4 ಗರುಡವಾಹನನ್ಹೆಗಲಿಳಿದು ಶ್ರೀನಾಥನ ಹರಡಿ ಕಂಕಣ ಕರವ್ಹಿಡಿದುಕೊಂಡು ಮುಡಿದ ಮಲ್ಲಿಗೆ ಪಾರಿಜಾತಗಳುದುರುತ ನಡೆದು ಬರುವೊ ಮುದ್ದು ಮಾಲಕ್ಷ್ಮಿಗೆ 5 ಪಾದದಿ ರುಳಿ ಗೆಜ್ಜೆ ನಾದ ಝೇಂಕರಿಸುತ ಆದರದಿಂದೆನ್ನ ಮನೆಗೆ ಬಂದು ಶ್ರೀಧರ ಭೀಮೇಶಕೃಷ್ಣನೆದೆಯ ಮ್ಯಾಲ್ವಿ- ನೋದದಿ ಕುಳಿತಿದ್ದ ಮಾಲಕ್ಷ್ಮಿಗೆ 6
--------------
ಹರಪನಹಳ್ಳಿಭೀಮವ್ವ
ಲಾಲಿ ರಂಗನ ರಾಣಿ ಪರಮಕಲ್ಯಾಣಿ ಲಾಲಿ ಕೀರವಾಣಿ ಪಂಕಜಪಾಣಿ ಲಾಲಿ ಪ. ಕ್ಷೀರಸಾಗರದಲಿ ಜನಿಸಿ ತಾ ಬಂದು ವಾರಿಜಾಕ್ಷನ ವಕ್ಷಸ್ಥಳದಿ ತಾ ನಿಂದು ಘೋರ ಪಾತಕಿಗಳನು ಪೊರೆವೆನೆಂತೆಂದು ಶ್ರೀರಂಗಕ್ಷೇತ್ರದಲಿ ಬಂದು ತಾ ನಿಂದು 1 ಶುದ್ಧ ಪಾಡ್ಯ ತುಲಾ ಕಾರ್ತೀಕದಲಿ ಮುದ್ದು ಶ್ರೀರಂಗನ ರಾಣಿ ಹರುಷದಲಿ ದಂತದ ಉಯ್ಯಾಲೆಮಂಟಪದಲ್ಲಿ ಕಂತುಪಿತನರಸಿಯಾಡಿದಳೆ ಉಯ್ಯಾಲೆ 2 ಕಸ್ತೂರಿಯನಿಟ್ಟು ಮುತ್ತಿನ ಮೂಗುಬಟ್ಟು ಹಾರಪದಕಗಳು ಪೀತಾಂಬ್ರವನೆ ಉಟ್ಟು ಕುಂದಣದ ಒಡ್ಯಾಣವನ್ನು ಅಳವಟ್ಟು ಇಂದಿರಾದೇವಿ ಆಡಿದಳೆ ಉಯ್ಯಾಲೆ 3 ರತ್ನದಾ ಕಿರೀಟವನ್ನು ತಾ ಧರಿಸಿ ಕಮಲ ಸರಗಳಳವಡಿಸಿ ಮುತ್ತು ಸುತ್ತಿದ ರತ್ನದಸುಲಿಯನು ಧರಿಸಿ ಅ ಚ್ಚುತನರಾಣಿ ಆಡಿದಳೆ ಉಯ್ಯಾಲೆ 4 ದೋಸೆ ವಡೆ ನೈವೇದ್ಯ ಮೀಸಲನು ಸವಿದು ದಾಸರೆತ್ತಿದ ಪಿಷ್ಟದಾರತಿಯಲಿ ನಲಿದು ಲೇಸಾದ ಕರ್ಪೂರ ವೀಳ್ಯವನು ಸವಿದು ವಾಸುದೇವನರಾಣಿ ಆಡಿದಳೆ ಉಯ್ಯಾಲೆ 5 ವರರಂಗವಂಶದವರು ವರದಿಂದ ಪಾಡೆ ಕರುಣಾಕಟಾಕ್ಷದಿಂ ದೇವಿ ತಾ ನೋಡೆ ಪ್ರಜೆಗಳೆಲ್ಲರು ಬಂದು ವರಗಳನು ಬೇಡೆ ವಜ್ರದಭಯಹಸ್ತಗಳಿಂದ ವರಗಳನು ನೀಡೆ 6 ಕರ್ತ ಶ್ರೀ ಶ್ರೀನಿವಾಸ ರಂಗನಾರಾಣಿ ಸಪ್ತದಿನದುಯ್ಯಾಲೆಯನು ತಾ ರಚಿಸಿ ಭಕ್ತರಿಗೆ ತೀರ್ಥ ಪ್ರಸಾದಗಳನಿತ್ತು ಅರ್ಥಿಯಿಂ ತೆರಳಿದಳು ತನ್ನರಮನೆಗೆ 7
--------------
ಯದುಗಿರಿಯಮ್ಮ