ಬೆಡಗು ಅಗಮ್ಯವಿದು ಶ್ರೀ ಗುರುವಿನ ಬೆಡಗು ಅಗಮ್ಯವಿದು ಧ್ರುವ
ಶೂನ್ಯಾಕಾರದ ಬಾಲೆ ಗಗನವ ಹಡೆದಳು
ಏನೆಂದ್ಹೇಳಲಿ ಸೋಜಿಗೆ ಘನಲೀಲೆಯು 1
ವ್ಯೋಮಸುಂದರಿ ಜನಿಸಿದಳು ಮಾರುತನ
ಭೀಮ ಪರಾಕ್ರಮನ ನೇಮದಿಂದಲಿ 2
ನಿಜ ವಾಯುಕುಮಾರಿ ಜನಿಸಿದಳು ತಾನೊಂದು
ತೇಜ:ಪುಂಜದ ರೂಪವ ಮೂಜಗದೊಳು 3
ಥಳಥಳಿಸುವ ತೇಜದ ಖನಿಯು ಹಡೆದಳು
ಜಲಮಯದ ರೂಪವ ನಲಿದಾಡುವ 4
ನಿರಾಕಾರದ ಕೂಸು ಭೂಮಿ ಹಡೆದುದ ಕಂಡು
ಬೆರಗಾದ ಮೂಢ ಮಹಿಪತಿಯ ಗುರುಜ್ಞಾನದ 5
ಬೆಡಗು ತೋರಿದ ಗುರು ಒಡಿಯ ಸರ್ವೋತ್ಮನು
ಪೊಡವಿಯೊಳೊಂದು ಸೋಜಿಗ ಗೂಢವಾಗಿಹ 6
ಕೌತುಕವನು ಕಂಡು ಕೈ ಮುಗಿದು ಮಹಿಪತಿ
ತ್ರಾಹಿ ತ್ರಾಹಿ ತ್ರಾಹಿಯೆಂದ ಮನದೊಳಿನ್ನು 7