ಒಟ್ಟು 6 ಕಡೆಗಳಲ್ಲಿ , 2 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

624ಚಿ ಇಂದು ಧನ್ಯವಾಯಿತು ಜನುಮ ಬಂದು ಕೂಡಿದ ಘನ ಮಹಿಮ ಧ್ರುವ ಏನು ಪುಣ್ಯ ಮಾಡಿದ್ದೆವೊ ಮೊದಲೆ ಖೂನಗಂಡೆವೊ ಹರಿಯ ಮನದಲಿ ಕಾಣದಿದ್ದೆವೊ ಏಸು ಜನ್ಮದಲಿ ತಾನೆ ಒಲಿದು ಬಂದು ಸುಪ್ರಸನ್ನಲಿ 1 ಬ್ರಹ್ಮಾದಿಕರಿಗೆ ದಾವ ದುರ್ಲಭ ನಮ್ಮ ನೆನವಿನೊಳಾದವ ಸುಲಭ ತಮ್ಮ ನಿಜಸುಖದ ನೆಲೆನಿಭ ಬ್ರಹ್ಮಾನಂದ ದೋರಿದ ಪ್ರಾಣದೊಲ್ಲಭ 2 ಖೂನದೋರಿತು ಮುನ್ನ ನಾ ಮಾಡಿದ ಭಾನುಕೋಟಿತೇಜನ ಕೈಗೂಡಿದ ಅನುಭವಾಮೃತಸಾರ ನೀಡಿದ ದೀನ ಮಹಿಪತಿ ಮನೋಹರ ಮಾಡಿದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅನಂದವಾಯಿತು ಸ್ವಾನಂದ ಘನಸುಖ ತನುಮನದೊಳಗೆ ತನ್ನಿಂದ ತಾನೊಲಿದು ಖೂನದೋರಿತು ಘನ ಗುರು ಕೃಪೆ ಎನಗೆ 1 ಸೋಮಾರ್ಕದ ಮಧ್ಯಸ್ವಾಮಿ ಸದ್ಗುರು ಪಾದ ನಮಿಸಿ ನಿಜದೋರಿತು ಜುಮುಜುಮುಗಟ್ಟಿ ರೋಮಾಂಚನಗಳುಬ್ಬಿ ಬ್ರಹ್ಮಾನಂದವಾಯಿತು 2 ನಾಮ ಸೇವಿಸಿ ಮಹಿಪತಿಗೆ ಸವಿದೋರಿತು ಪ್ರೇಮಭಾವನೆಯೊಳಗೆ ಧಿಮಿಧಿಮಿಗುಡುತ ಬ್ರಹ್ಮಾನಂದದ ಸುಖ ಅನುಭವಿಸಿತೆನಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮ ಸಲಹಯ್ಯಾ ಸಿರಿರಮಣಾ| ದುರಿತ ನಿವಾರಿಸು ಪೂರ್ಣ| ಮಂದಮತಿಗಳಾ ನೋಡದೆವೆ ನ್ಯೂನಾ| ಛಂದದಿಂದ ಕೊಡು ನಿನ್ನ ಚರಣ ಧ್ಯಾನಾ ಪ ಹಿಂದ ವ್ಯಾಧನೊಬ್ಬ ಹರಿಣಿ ಹಿಡಿಯಲಿ| ನಿಂತು ಚತುರ್ವಿಧ ಬಲಿಯಾನೊಡ್ಡಿರಲಿ| ಮೃಗ ಮೊರೆಯಿಡಲಿ| ಬಂದು ಕರುಣಿಸಿ ರಕ್ಷಿಸಿದ ಪರಿಲಿ 1 ಬಸಿರೊಳಗಿದ್ದ ಪರೀಕ್ಷಿತಗೆಂದು| ಎಸೆಯಲು ಬಾಣಗಳ ದ್ರೋಣಿ ಮುಳಿದು| ಬಿಸಜಾಕ್ಷ ನಿನ್ನ ಚಕ್ರ ಮರೆವಿಡಿದು| ಪರಿ ಬಂದು 2 ದಿನ ವತ್ಸಲ ದಯಾನಿಧಿ ಎನುವಾ| ಖೂನದೋರಿಸಯ್ಯಾ ಬಿರುದಿನ ಅನುವಾ| ನಿನೇ ತಾಯಿ ತಂದೆ ಬಂಧು ಸಖದೈವ| ಘನಗುರು ಮಹಿಪತಿ ಸುಖ ಜೀವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಹೊಳೆವುತದೆ ಸುಚಿನ್ಹಬೋಧ ತಂದಿ ಕಂಡೆವೇನೊ ಸದ್ಗುರು ಶ್ರೀಪಾದ ಧ್ರುವ ಪ್ರಾಣದೊಡಿಯ ಬಾವ್ಹಾಂಗನೇನೊ ಪೂರ್ಣಕ್ಷಣಕೊಮ್ಮಾಗುತದೆ ಸುಶಕುನ ಕಣ್ಹುಬ್ಬಾರುತದೆ ಬಲದೆನ್ನ ಚೆನ್ನಾಗ್ಯಾಗಮ್ಮ ತಾನೇನೊ ಸುಪ್ರಸನ್ನ 1 ತೋಳಭುಜಹಾರುತದೆ ಬಲುಬಹಳ ವ್ಯಾಳ್ಯಕೊದಗಿಬಂದೆನೇನೊ ದಯಾಳ ಸುಳವುದೋರುತದೆ ನಿಶ್ಚಳ ಸುಳಿದೊಮ್ಮೆ ಬಂದನೇನೊ ಕೃಪಾಳ 2 ಬುದ್ಧಿ ಮನಸಿಗಾಗುತದೆ ವಿಕಾಸ ಸಿದ್ಧಿಸೋರುವ್ಹಾಗಾದೆ ಪ್ರಕಾಶ ಸದ್ಯ ಹೃದಯವಾಗುತದೆ ಉಲ್ಹಾಸ ಸಾಧ್ಯವಾಗುವ್ಹಾಂಗ್ಹಾನೇನೊ ತಾ ಸರ್ವೇಶ 3 ಪ್ರೇಮ ಉಕ್ಕಿಬರುದೆನ್ನೊಳಗೆ ಸ್ವಾಮಿದರುಷಣಾದೀತೇನೊ ತಾ ಈಗ ರೋಮರೋಮವು ಬಿಡದೆ ಎನಗೆ ಬ್ರಹ್ಮಾನಂದ ಭಾಸುತದೇನೊ ಬ್ಯಾಗ 4 ಖೂನದೋರಿಬರುತದೆನಗೊಂದು ಭಾನುಕೋಟಿ ತೇಜ ತಾ ಬಾವ್ಹಾಂಗಿಂದು ದೀನ ಮಹಿಪತಿಗುರು ಕೃಪಾಸಿಂಧುಮನೋಹರ ಮಾಡುವ್ಹಾಂಗ್ಹಾನೆ ಬಂದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸೊ ಗುರು ಎನಗೆ ಸ್ಮರಿಸು ಹಾಂಗೆ ದೋರು ನಿಮ್ಮರುಹ ಬ್ಯಾಗೆ ಗುರುತಲೀಗೆ 1 ನಿನ್ನವನೆ ಎಂದೆನಿಸೊ ಭಿನ್ನ ಹರಿಸೊ ಎನ್ನ ದಯದಿ ಪಾಲೆಸೋ ಧನ್ಯಗೈಸೊ 2 ಅನುದಿನದಿ ಕಾಯೊ ನೀ ಬಂದು ಅನಾಥ ಬಂಧು ದೀನಾನಾಥ ನೀ ಎಂದೆಂದು ಘನ ಕೃಪಾಸಿಂಧು 3 ಭಕ್ತ ಜನರನುಕೂಲ ಭೋಕ್ತಸಕಲ ಶಕ್ತ ನೀನಹದೊ ಕೃಪಾಲ ಬಕ್ತ ವತ್ಸಲ 4 ಅನುಭವಸುಖ ಬೀರಿಸೊ ಖೂನದೋರಿಸೊ ದೀನ ಮಹಿಪತಿ ತಾರಿಸೊ ಘನಸುರಿಸೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾನುಭವದ ಸುಖ ಸಾಧಿಸಿ ನೋಡಿರೋ ನೇಮದಿಂದ ಘನ ಗುರು ಕೃಪೆಯಿಂದ ಅನುಭವಿಸಲು ಬ್ರಹ್ಮಾನಂದ ಧ್ರುವ ಶಿಖಾಮಧ್ಯದಲಿ ಪೂರ್ಣ ಸುಖಗರವುತಲ್ಯದೆ ಸಂತ್ರಾಧಾರಿ ಸಕಲವೆಲ್ಲಕೆ ಸನ್ಮತವಾಗಿ ತೋರುವದೊಂದೇ ಪರಿ ಶುಕಾದಿ ಮುನಿಗಳು ಪ್ರಕಟಿಸಿ ಹೇಳಿಹರು ಖೂನದೋರಿ ಬೇಕಾದರೆ ಇದು ನೋಡಬೇಕು ಷಡುಚಕ್ರವೇರಿ 1 ಸಾಮಾನ್ಯವಲ್ಲವಿದು ಸಹಸ್ರ ಕೋಟಿಗೊಬ್ಬ ಬಲ್ಲ ಖೂನ ಕಾಮಾಂಧದೊಳಗಿದ್ದ ಮನುಜ ಪ್ರಾಣಿಗಳು ಬಲ್ಲವೇನ ತಾಮಸಿಗಳಿಗಿದು ತಾರ್ಕಣ್ಯವಾಗುವದಲ್ಲ ಗಮ್ಯಸ್ಥಾನ ಸ್ವಾಮಿ ಸದ್ಗುರು ದಯಮಾಡಿದರಹುದು ಸಮ್ಯಗಜ್ಞಾನ 2 ಶಿರೋರತ್ನವಾಗಿ ವಂದಿಸಿಕೊಂಬುವದಿದೆಲ್ಲಕೆ ಪೂಜ್ಯ ಹರುಷಗೈಸುವ ಪುಣ್ಯ ಪರಮ ಭಕ್ತರಿಗಿದೆವೆ ಸಾಯೋಜ್ಯ ತರಳ ಮಹಿಪತಿಗಿದೆ ಸ್ವ ಸುಖದೋರುವ ಸುಸಾಮ್ರಾಜ್ಯ ಶಿರದಲಿ ಕರವಿಟ್ಟು ತೋರಿದ ಗುರು ಭಾನುಕೋಟಿತೇಜ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು