ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆನು ಕೌತುಕ ಮಂಡಲದೊಳಗೊಂದು ಹೊಯ್ಯಂದ ಡಂಗುರವ ಮಂಡಿಯ ಮಸಿಯಲಖಂಡಿತವಾಗ್ಯದೆ ಧ್ರುವ ಖೋಯೆಂದು ಕೂಗುತ ಕಾಯದೊಳಗದೆ ಮಾಯದ ಮರೆಯಲುಪಾಯ ಮುಚ್ಚಿದ ನೋಡಿ 1 ಝೇಂ ಝೇಂ ಝೇಂ ಝೇಂ ಝೇಂಕರಿಸುತದೆ ಕಂಜನಾಭನ ಕರುಣಾನಂದನೋಡಿರ್ಯೊ 2 ಘೇಳೆನಿಸುತದÀ ತಾಳಮೃದಂಗವು ಒಳಹೊರಗಿದು ಧಿಮಿಗುಡುತದ 3 ಅನುಹಾತ ಧ್ವನಿಅನುಭವ ನೋಡಿರೋ ಅನುದಿನ ಸಾಧಿಸಿ ಘನ ಬೆರದಾಡಿರೊ 4 ಆನಂದೊಬ್ರಹ್ಮದ ಆಟವಿದುನೋಡಿ ಏನೆಂದ್ಹೇಳಲಿ ಸ್ವಾನುಭವದ ಸುಖ 5 ತುಂಬಿತುಳುಕುತದೆ ಅಂಬುಜಾಕ್ಷನ ಮಹಿಮೆ ಕುಂಭಿನಿಯೊಳು ನಿಜ ಗಂಭಗುರುತ ನೋಡಿ 6 ಸಾಧಿಸಿ ನೋಡಿರೊ ಶ್ರೀ ಸದ್ಗುರು ಶ್ರೀಪಾದ ಗಾದಿಯ ಮಾತಲ್ಲ ಭೇದಿಸಿ ನೋಡದು 7 ಶುಕಾದಿ ಮುನಿಗಳ ಸುಖಾಶ್ರಯವಿದು ಏಕಾಕ್ಷರ ಬ್ರಹ್ಮ ಏಕೋಚಿತ್ತದಿ 8 ಮೊತ್ತರಾಗಿ ತನ್ನ ನೆತ್ತಿಯೊಳಗಿದೆ ಉತ್ತಮರ ಸುತ್ತ ಮುತ್ತ ಸೂಸುತದ9 ಗುರು ಕೃಪೆಯಿಲ್ಲದೆ ಗುರುತವಾಗದಿದು ಬರೆ ಮಾತಿನ ಮಾಲೆಗೆ ಸೆರಗ ಸಿಲುಕದಿದು 10 ಗುರುತವಿಟ್ಟು ಗುರುವಿನ ಮಹಿಮೆಯ ತರಳ ಮಹಿಪತಿ ನಿನ್ನೊಳು ನೋಡೆಂದು 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಲ್ಲದೋ ಎಲೋ ಮಾಯಿ ಸಲ್ಲದೊ ಎಲೊ ಮಾಯಿ ಎಲ್ಲಾ ಒಂದೆಂಬೋದು ಸೊಲ್ಲನಾಡಲು ಯಮ ಕೊಲ್ಲದಲೆ ಬಿಡಾ ಪ ಉಕ್ಕಿನ ಮಳಿಯ ರೋಮರೋಮದಲಿ ಬಡಿದು ಬೆಸಸಿ ಸದಾ ಗಂಡುತಗಲಿ ಗಟ್ಟಿ ಪಕ್ಕಿಯ ತಿವಿದು ಪಾಶದಲಿ ಬಿಗಿದು ಕಾ ಲಿಕ್ಕಿ ನೆಲಕೆ ವರಿಸಿ ಕೆಂಪಗೆ ಕಾಸಿ ಇಕ್ಕಳದಲಿ ಉಚ್ಚಿ ಕರುಳು ಬೈಲಿಗೆ ಹಾಕಿ ಪೊಕ್ಕಳಿಗೆ ತೇಳಾರು ಪೊಗಿಸಿ ಕಟ್ಟಿ ಕರ ಹೊಯಿದು ನಕ್ಕು ಯಮದೂತರು ನಿನ್ನ ಬಾಧಿಪÀರು 1 ನಿನ್ನ ಕಾಲಲಿ ಒದ್ದೊದ್ದು ಹೆಡಗುಡಿಯನು ಕಟ್ಟಿ ಗಾರ್ಧಭದ ಲದ್ದಿಯೊಳಡಿಗಿಸಿ ಸುತ್ತ ಉರಿಯನಿಕ್ಕಿ ಮದ್ದು ಮೈಯಿಗೆ ಮುಚ್ಚಿ ಮುದದಿಂದ ಬೇಯಿಸಿ ಹದ್ದು ಕಾಗೆಗೆ ನಿನ್ನ ಯೆಡೆ ಮಾಡುವರು ಅ ಮೇಧ್ಯವ ತಿನಿಸುವರು ಅರಗಲ್ಲಿಗೆ ಉದ್ದಿ ಉರುಳ ಬಿಡುವರು ಕೆಂಡದ ಮೇಲೆ ವೊದ್ದಿಸಿ ಪರಿಪರಿ ಭಂಗವಪಡಿಸುವರು 2 ವೈತರಣಿಯೊಳಗದ್ದಿ ಅದ್ರಿಯ ಹರಿ ಮಾತು ಪೊರಡದಂತೆ ಮಾಡಿ ಮುದ್ರೆ ಬಾಯಿಗೆ ಹಾಕಿ ತೂತು ಮೈಯಿಗೆ ತಂತಿಯ ಪೋಣಿಸಿ ಪೂತಿ ಗಂಧದೊಳು ಹೊರಳಿಸಿ ತಡಿಯದೆ ಯಾತಣೆಯಿಂದ ಬಿಸುಟು ಮೊಟ್ಟೆಯ ಕಟ್ಟಿ ಮೂತರ ಕುಡಿಸುವರು ಮೀಸಿಯನು ಕಿತ್ತಿ ಘಾತಿಸಿ ನೋಡುವರು ಮಹಾ ಪಾತಕನೆಂದು ವಿಧಿಯ ಮೇಲೆ ಗುದ್ದೋರು 3 ಹೆಡತಲೆಯಿಂದ ನಾಲಿಗೆಯ ತೆಗೆದು ಕ ಕ್ಕಾಡಿ ಮಾಡಿ ನವನಾರು ಸಂದುಗಳು ಸುಟ್ಟು ಕೈಕಾಲನು ಕಟ್ಟಿಸಿ ಸಾಸವಿ ಸುಣ್ಣ ತೊಡೆದು ಬೋರಿಗೆಯಿಂದ ಬಡಿದು ಬಸಿಗೆ ಹಾಕಿ ಒಡಲೊಳು ಸೀಸವರೆದು ಮರದ ಬೇಲೆಯಲಿ ಹೊಡೆದು ಸರ್ರನೆ ಸೀಳೋರು ಕುರಿಯಂತೆ ಕಡಿದು ಈ ಬಗೆ ಮಾಡೋರು ಕೀವಿನ ಮಡುವಿನೊಳಗೆ ಇಟ್ಟು ತಲೆಮೆಟ್ಟಿ ಕುಣಿವರೊ 4 ಮೂಗನು ಕೊಯಿದು ಕವಡಿಯ ಪೋಣಿಸಿ ಚೆ ನ್ನಾಗಿ ಅತ್ತರಾಟದಲ್ಲಿ ತಲೆಕೆಳಕಾಗಿ ಜೋಲುವಂತೆ ಝೋಲಿಯ ಹೊಡೆದು ಮಾತುಗಾಲೆ ನಿನ್ನ ತೂಗಹಾಕಿ ಬಾಗಿಸಿ ಇನ್ನೊಮ್ಮೆ ಬೊಗಳೆಂದು ಕುಡಕಾಸಿ ವೇಗನೆ ಬರೆ ಇಡುವರು ದು:ಖದ ಸಾಗರ ಉಣಿಸುವರು ಬೆಕ್ಕಿನಂತೆ ಕೂಗಲು ಕೇಳಿ ಸೈರಿಸದಲೆ ಇಪ್ಪರು 5 ಘಾಯವಡೆದಲ್ಲಿ ಇರಿದು ಉಪ್ಪನೆ ತುಂಬಿ ಬಾಯಿವರಳು ಮಾಡಿ ಭತ್ತವ ಥಳಿಸಿ ಕ್ರೂ ರಾಯುಧ ಕಿವಿಗೆ ಬಿರಿಯಿಟ್ಟು ಬಂಧಿಸಿ ಖೋಯೆಂದು ಕೆಡಹಿ ಬೊಬ್ಬಿರಿಯೇ ಚಿಂದಿ ಮಾಡಿ ನಾಯಿಗಳಿಂದ ಕಚ್ಚಿಸಿ ಸೂಜೀಯ ಆಯಕ್ಕೆ ಊರುವರು ಮರಕ್ಕೆ ಕಟ್ಟಿ ಊಯಾಲೆ ಆಡುವರು ಇಪ್ಪತ್ತೆಂಟು ನಾಯಕ ನರಕದಲ್ಲಿಟ್ಟು ತೆಗೆಯುವರು6 ಪರಿ ಬಾಧಿಗೆ ಇರೆ ನರಕ ನರಕದಲ್ಲಿ ಹೂಳಿ ಉಬ್ಬಸಗೈಸಿ ಉರ ಕಾಲದಲ್ಲಿಟ್ಟು ತರುವಾಯ ತೆಗೆದು ಪಾ ಮರ ದುರುಳನೆಂದು ಮಿಡುಕಿಸಿ ಮಹಾನಿತ್ಯ ನರಕದೊಳಗೆ ನೂಕಿ ಕಡೆಗಾಣದಂತೆ ವರಲುತಿರೆ ನಗುವರು ನಿರ್ಮಲವಾದ ಮರುತ ಮತದವರು ಪ್ರತಿದಿನ ಸಿರಿಪತಿ ವಿಜಯವಿಠ್ಠಲನ ನಂಬದ ಮಿಥ್ಯಾ 7
--------------
ವಿಜಯದಾಸ