ಕಂಡೆÀನೀಗ ರಂಗನಾಥನ ಕಾರುಣ್ಯನಿಧಿಯ ಪ.
ಮಂಡಲದೊಳುದ್ದಂಡ ಮೂರುತಿ
ಹಿಂಡು ದೈತ್ಯರ ತಂಡ ತಂಡದಿ
ತುಂಡು ತುಂಡು ಮಾಡಿದ ಸ್ವಾಮಿಯ ಅ.ಪ.
ಕೌಸ್ತುಭ ನಾಮವ ನೇಮದಿಂದ ಧರಿಸಿದಾತನ
ಹೇಮ ಮಂಟಪದೊಳಗೆ ಕುಳಿತು
ಕಾಮಿಸಿದ ಭಕ್ತರಿಗೆ ಕಾಮಿತಾರ್ಥ ಕೊಡುವ ಸ್ವಾಮಿಯ 1
ಗರುಡವಾಹನವೇರಿ ಗಗನದಿ ಚರಿಸುತ್ತ ಬಂದು
ಸರಸಿಯೊಳು ಕರಿಯ ಸಲಹಿದೆ
ಪರಮಭಕ್ತರ ಕಾವದೇವ ಕರುಣವಾರಿಧಿ ಕಮಲನಯನ
ಉರಗಶಯನ ಉದ್ಧಾರಿ ನಿನ್ನ ಮರೆಯಹೊಕ್ಕೆ ಕಾಯೊ ಎನ್ನ2
ಇಂದುಧರನ ಸಖನೆ ಕೇಳಯ್ಯ ಬಂದಂಥ ದುರಿತ
ಹಿಂದು ಮಾಡಿ ಮುಂದೆ ಸಲಹಯ್ಯ
ಇಂದು ಹೆಳವನಕಟ್ಟೆ ರಂಗ ಆ-ನಂದ ಪಡಿಸೊ ರಾಮಲಿಂಗ ಹೊಂದಿದೆನು ನಿನ್ನ ಚರಣ3