ಎನ್ನ ಮೋಹನ ತುಪಾಕಿಯನು ಪಿಡಿದು ಹಸ್ತದಲಿ
ಚೆನ್ನಾಗಿ ಶೃಂಗರಿಸುವೆ ಪ
ಭಿನ್ನಭಾವನೆಯ ಕಳಿದುಳಿದು ಕೋವಿಗೆ ಮತ್ತೆ
ಇನ್ನು ಜೋಡಿಲ್ಲವೆಂದು ಇಂದುಅ.ಪ.
ಪ್ರೇಮರಸವೆಂಬ ಜಲದಲಿ ತೊಳೆದು ಶುಚಿಮಾಡಿ
ನೇಮವೆಂದೆಂಬ ನಿರ್ಮಲವಾಗಿಹ
ಆಮಹಾಕನಕ ರಜತದ ಭೂಷಣವ ತೊಡಿಸಿ
ಕಾಮವನು ಸುಟ್ಟು ಮಸಿಮಾಡಿ ತುಂಬುವೆನದಕೆ ಎನ್ನೆ 1
ಹಮ್ಮಮತೆಯೆಂಬ ಗುಂಡನು ಅದರಮೇಲಿರಿಸಿ
ಒಮ್ಮನಸು ಎಂಬ ಗಜದಿಂದ ಜಡಿದು
ಒಮ್ಮೆ ಗುರುವಾಕ್ಯರಂಜಿಕೆಯ ಕಿವಿಯೊಳಗರದು
ಬಿಮ್ಮನೇ ಬಿಗಿದು ಈಕ್ಷಿಸಿ ನೋಡುವೆ ಎನ್ನ 2
ಮೆರೆವ ಸುಜ್ಞಾನ ಜ್ಯೋತಿಯ ಬತ್ತಿಯನು ಕೊಳಿಸಿ
ಭರದಿ ಬರುತಿಹ ಅಷ್ಟಮದ ಕರಿಗಳಾ
ತರಿದಾರು ವೈರಿವರ್ಗಕೆ ಕೆಡಹಿ ಗುರಿಯಿಂದ
ಗುರುವಿಮಲಾನಂದ ರಸಭರಿತನಾಗಿರುವಂಥ 3