ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸ ಜಗನ್ನಿವಾಸ ಪ ದೀನ ರಕ್ಷಕ ನಿಖಿಲ ಮಾನವರಮಾನಾಭಿಮಾನ ದೊಡೆಯನು ನೀನೇಯಲ್ಲದಿಲ್ಲಾ ಅ.ಪ. ನಕ್ರಮುಖದಲ್ಲಿ ಸಿಕ್ಕಿ ದುಃಖಿಸುವ ಕರಿರಾಜ ಚಕ್ರವರ್ತಿಯು ಶರಣು ಹೊಕ್ಕೆನನಲು ಚಕ್ರವನು ಪಿಡಿದು ನೀನಕ್ಕರೆಯೊಳೈತಂದು ನಕ್ರವದನವಸೀಳಿ ರಕ್ಷಿಸಿದೆ ಗಜವಾ-ದೇವ 1 ಹಿಂದೆ ನಾನಾನ್ನಗಿರಿಯಿಂದ ಬಹದಾರಿಯೊಳು ಸಂದುಗೆಳೀಚಲು ಭಂಡಿ ಸಂಜೆಯೊಳಗೆ ಮುಂದಾಗ ಜೊತೆಯೊಳಗೆ ಬಂದು ಜನಕೆಲ್ಲಿನೀ ಬಂದು ಬೆಳಕನು ತೋರಿ ಮಂದೆಗೂಡಿದೆ ಕೃಷ್ಣಾ 2 ಇಂದು ನಿಜ ಸತಿಯುನೊಂದಳುಬ್ಬಸರೋಗದಿಂದ ಗಾಳಿಯದೀಪದಂದಮಾಗಿ/ ನಂದಿಪೋಗದ ಮುನ್ನ ಬಂದು ನೀಮರೆಯಾಗು ಎಂದು ಮೊರೆಯಿಡಲೀಗ ಬಂದು ಸಲಹಿದೆ ತಂದೆ 3 ತುರುಗಾಯ್ವರಸುಗಳನು ಮರಳಿಪಡೆದೆ ನರಪೌತ್ರನನು ಬಾಣದುರಿಯಿಂದ ರಕ್ಷಿಸಿದೆ ಸರಿಯಾರು ನಿನಗೆ ಸುರನರಭುಜಂಗರಲ್ಲಿ4 ತರಳಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಕುರು ವರವಿಭೀಷಣ ತಾಪಸರನುಪೊರೆದೆ ಶರಣರನು ಪಾಲಿಸುವ ಬಿರುದು ಧರಿಸಿಹ ವ್ಯಾಘ್ರಗಿರಿಯೊಳಗೆ ನೆಲಸಿರುವ ವರದ ವಿಠಲ ರಾಯ 5
--------------
ಸರಗೂರು ವೆಂಕಟವರದಾರ್ಯರು