ಜೋ ಜೋ ಜೋ ಗುಂಡ ಪರಮಪ್ರಚಂಡ
ಜೋ ಜೋ ಜೋ ಗುಂಡ ಸುರಚಿರದಂಡ ಪ
ಜೋ ಜೋ ಜೋ ದೊಡ್ಡ ಕರಿಯಕಲ್ಗುಂಡ
ಜೋ ಜೋ ಜೋ ಮದ್ದನರೆಯಚ್ಚಗುಂಡ ಅ.ಪ
ದುಂಡು ಮಲ್ಲಿಗೆಗಿಂತ ಮೃದುವಾದ ಗುಂಡಾ
ಕೆಂಡ ಸಂಪಿಗೆಗಿಂತ ಚೆಲುವಾದ ಗುಂಡಾ
ಪುಂಡರೀಕಕ್ಕಿಂತ ಚೆಲುವಾದ ಗುಂಡಾ
ಮೊಂಡ ಮೂಕರಕಯ್ಯ ಕೋದಂಡಗುಂಡಾ 1
ಒಬ್ಬಿಟ್ಟು ಹೂರಣವರೆಯುವ ಗುಂಡಾ
ತಬ್ಬಿಬ್ಬಾಡುವರನು ಕಡುಗುವಾ ಗುಂಡಾ
ರುಬ್ಬಿ ರುಬ್ಬಿ ದೋಸೆ ಯೀಯುವಾ ಗುಂಡಾ
ಕೊಬ್ಬಿದ ಜನವನು ದಬ್ಬುವಾ ಗುಂಡಾ 2
ಪರಿಪರಿ ಬಂಧನವರಿಯದ ಗುಂಡಾ
ಉರುಳಿಸಿದಲ್ಲಿಯೇ ನಿದ್ರಿಪ ಗುಂಡಾ
[ವರಭಕ್ತಾವಳಿಗೆ ಸುಖವೀವಗುಂಡಾ] 3
ನೀನಿಲ್ಲದಿರುವ ಮನೆಗಳಿಲ್ಲ ಗುಂಡಾ
ನೀನಿರುವಲ್ಲಿ ತಿಂಡಿಗಳುಂಟು ಗುಂಡಾ
ಕಾನನದೊಳಗಿದ್ದು ಕರಗದ ಗುಂಡಾ
ಮಾನವ ಗಣಕ್ಕೆಲ್ಲಾ ಬೇಕಾದ ಗುಂಡಾ4
ಒರಳುಕಲ್ಲಿನ ಮೇಲೆ ನೇಯುವಾ ಗುಂಡಾ
ತರುಣಿಯ ಕರದೊಳು ನಲಿಯುವಾ ಗುಂಡಾ
ವರ ದುಕೂಲಂಗಳ ಬಯಸದ ಗುಂಡಾ
ವರದ ಮಾಂಗಿರಿರಂಗನೆನಿಸುವ ಗುಂಡಾ 5