ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಾಣತನದ ಮಾತು ಏನು ಕೆಲಸವಯ್ಯ ಖೂನ ನೋಡಿ ಪ್ರಾಣನಾಯಕನ ತಿಳಿವುದೊಂದೆ ಜ್ಞಾನಾಭ್ಯಾಸ ಮಾಡಿ ಧ್ರುವ ಕರಿಮಣಿ ಒಂದಿಲ್ಲದೆ ಹೆಂಗಸಿಗೆ ಸರಮುತ್ತು ಯಾಕೆ ಸಾರ ಸಂಜೀವನಿಲ್ಲದೆ ನೂರು ಗಿಡಮೂಲಿಕೆ ಯಾಕೆ ನೆರೆ ಇಲ್ಲದೆ ಸಾಧುಸಜ್ಜನರು ಸರ್ವಬಳಗವ್ಯಾಕೆ ಪರಮ ತತ್ವಜ್ಞಾನ ಒಂದಿಲ್ಲದೆ ಸುರಿಯುವ ಮಾತಿನ್ಯಾಕೆ 1 ಪ್ರಾಣವಿಲ್ಲದ ಸುಂದರವಾದ ಶರೀರ್ಯಾಕೆ ಕಾಲ ಬದಕುವುವದ್ಯಾಕೆ ಸ್ವಾನುಭವದ ಸುಖ ನೆಲೆಯುಗೊಳ್ಳದೆ ಒಣ ಡಂಭವ್ಯಾಕೆ ತಾನಾಗಿಹ್ಯ ವಸ್ತು ದೊರಕಿಲ್ಲದೆ ನಾ ನೀನೆಂಬುದ್ಯಾಕೆ 2 ಶ್ರೀ ಹರಿಮಹಿಮೆಯ ಸೋಹ್ಯ ತಿಳಿಯದೆ ದೇಹ್ಯವ್ಯಾಕೆ ಗುಹ್ಯಗುರುತವಿಲ್ಲದೆ ಸಾಯಸಬಡುವದ್ಯಾಕೆ ಸಾಹ್ಯಮಾಡುವ ಸದ್ವಸ್ತು ನೋಡದ ಕಣ್ಣು ನೋಟವ್ಯಾಕೆ ಮಹಿಪತಿಸ್ವಾಮಿ ಸದ್ಗುರುಪಾದ ಕಾಣದ ಜನ್ಮವ್ಯಾಕೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾರ ತಿಳಿಯದೆ ಭೇದಾಭೇದ ವಿದ್ಯಾತಕೆ ಸೂಸುವದ್ಯಾತಕೆ ಹರಿಭಕುತಿಗೆ ಧ್ರುವ ಬಲಮುಣುಗುವದಿದ್ಯಾಕೆ ಬಲುವ ಭಾವದ ಕೀಲ ತಿಳಿಯದೆ ಮಾಲಿಜಪಕೈಯಲ್ಯಾತಕೆ ತಲೆ ಮುಸಕ್ಯಾತಕೆ ಹಲವು ಜನ್ಮ ಹೊಲಿಯು ತೊಳಿಯದೆ ಶೀಲಸ್ವಯಂಪಾಕ್ಯಾತಕೆ 1 ಹರಿಯ ಚರಣಾಂಬುಜನವರಿಯದೆ ಬರಿಯ ಮಾತಿನ್ಯಾತಕೆ ಗುರುವಿನಂಘ್ರಿಯ ಗುರುತವಿಲ್ಲದೆ ಶರಣಸಾವಿರವ್ಯಾತಕೆ ತುರಿಯಾವಸ್ಥೆಯೊಳರಿತು ಕೂಡದೆ ತೋರಿಕೆಯ ಡಂಭವ್ಯಾತಕೆ ತರಣೋಪಾಯದ ಸ್ಮರಣಿ ಇಲ್ಲದೆ ತರ್ಕಭೇದಗಳ್ಯಾತಕೆ 2 ಅಂತರಾತ್ಮದ ತಂತುವಿಡಿಯದೆ ಗ್ರಂಥಪಠಣಗಳ್ಯಾತಕೆ ಕಂತುಪಿತನಾರ್ಚನೆಯನರಿಯದೆ ತಂತ್ರ ಮಂತ್ರಗಳ್ಯಾತಕೆ ಪಂಥವರಿಯದೆ ಪರಮಯೋಗದಾನಂತ ವ್ರತವಿದುವ್ಯಾತಕೆ 3 ಸೋಹ್ಯವರಿಯದೆ ಶ್ರೀಹರಿಯ ನಿಜಬಾಹ್ಯರಂಜನೆವ್ಯಾತಕೆ ಗುಹ್ಯಮಹಾಮಹಿಮೆಯು ತಿಳಿಯದೆ ದೇಹ ಅಭಿಮಾನ್ಯಾತಕೆ ಸಾಹ್ಯವಿಲ್ಲದೆ ಶ್ರೀಹರಿಯ ದೇಹದಂಡದ್ಯಾತಕೆ ಮಹಾವಾಕ್ಯದಿತ್ಯರ್ಥವರಿಯದೆ ಸಾಯಸಬರುವದ್ಯಾತಕೆ 4 ಭಾಗ್ಯಭಕುತಿ ವೈರಾಗ್ಯವಿದು ನಿಜಯೋಗಾನಂದದ ಭೂಷಣ ಶ್ಲಾಘ್ಯವಿದು ತಾ ಇಹಪರದೊಳು ಸುಗಮ ಸುಪಥಸಾಧನ ಸಾರ ಯೋಗಿ ಮಾನಸಜೀವನ ಬಗೆಬಗೆಯಲನುಭವಿಸಿ ಮಹಿಪತಿಯೋಗ್ಯನಾಗೋ ಸನಾತನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು