ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಸ್ತುತಿ ಪ್ರೇಮದಿಂದೊಂದಿಸುವೆ ಗುರುವೃಂದಕೇ ಕಾಮಧೇನುವಿನಂತೆ ಕೊಡಲೆಮಗಭೀಷ್ಟವನು ಪ ಸತಿಯ ಬೇಡುವನಲ್ಲ ಸುತರ ಬೇಡುವನಲ್ಲ ಅತಿಶಯದ ಭಾಗ್ಯವನು ಕೇಳ್ವನಲ್ಲ ರತಿಪತಿ ಆಟವನು ಖಂಡಿಸಿ ಬೇಗದಲಿ ಮತಿ ತಪ್ಪಲೆನಗೆ ದುರ್ವಿಷಯದೊಳಗೆಂದು 1 ಶಕ್ತಿ ಬೇಡುವನಲ್ಲ ಯುಕ್ತಿ ಬೇಡುವನಲ್ಲ ಭುಕ್ತಿ ಎನಗಿಲ್ಲೆಂದು ಕೇಳ್ವನಲ್ಲ ಮುಕ್ತಿದಾಯಕ ನಮ್ಮ ವಿಟ್ಠಲನ ಚರಣದಲಿ ಭಕ್ತಿ ದೃಢವಾಗೆನಗಿತ್ತು ರಕ್ಷಿಸಲೆಂದು 2 ಮಾನ ಬೇಡುವನಲ್ಲ ದಾನ ಬೇಡುವನಲ್ಲ ಹೀನತನ ಬ್ಯಾಡೆಂದು ಕೇಳ್ವನಲ್ಲ ಮಾನನಿಧೀಶ ನಮ್ಮ ಶ್ರೀ ನರಹರಿಯ ಚರಣವನು ಕಾಣಿಸುವ ಜ್ಞಾನವನು ದಾನಮಾಡಲಿ ಎಂದು3
--------------
ಪ್ರದ್ಯುಮ್ನತೀರ್ಥರು