ಒಟ್ಟು 5 ಕಡೆಗಳಲ್ಲಿ , 1 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೊ ಕಾಯೊ ಗುರುನಾಥತ್ರಯಗುಣಾತೀತ ಧ್ರುವ ಭಾನುಕೋಟಿ ಸುಪ್ರಭೆಯ ಅನುದಿನಕ್ಷಯ ಘನಮಹಿಮರ ಹೃದಯ ಆನಂದೋದಯ ಅನಾಥರಿಗೆ ಆಶ್ರಯ ನೀನಹುದೊನÀಮ್ಮಯ 1 ದೇಶಿಕÀರಿಗೆ ನೀ ದೇವ ಲೇಸಾಗಿ ಕಾವ ಋಷಿ ಮುನಿಗಳ ಸಂಜೀವ ವಾಸವಾಗಿವ್ಹ ವಿಶ್ವಾತ್ಮನಹುದೊ ಶ್ರೀದೇವ ಭಾಸುತಲಿವ್ಹ ಭಾಷೆಯ ಪಾಲಿಸುವ ಈಶ ನೀನೆ ಕೇಶವ 2 ಬಾಹ್ಯಾಂತ್ರ ನೀ ಸದೋದಿತ ಗುಹ್ಯಗುರುತು ಶ್ರೀಹರಿ ನೀನೆ ಸಾಕ್ಷಾತನಹುದೊ ಸ್ವಹಿತ ಇಹಪರ ನೀನು ದಾತಮಹಿಪತಿ ಪ್ರಾಣನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯವೆನ್ನಿರೊ ಶ್ರೀ ಗುರುವಿಗೆ ದಯಾಸಿಂಧು ಶ್ರೀಸ್ವಾಮಿ ಸದ್ಗುರುವಿಗೆ ಧ್ರುವ ಗುಹ್ಯಗುರುತ ದೋರುವ ಗುರುಮಣಿಗೆ ಮಾಯರಹಿತ ನಿರಾಳ ನಿರ್ವಾಣೆಗೆ ತ್ರೈಲೋಕ್ಯವಂದಿತ ವರಮುನಿಗೆ ದಯಯುಳ್ಳ ಶ್ರೀ ದೇವಶಿಖಾಮಣಿಗೆ 1 ತ್ರಿಗುಣಾತೀತ ತಾರಕ ನಿರಂಜನಗೆ ಝಗಿ ಝಗಿಸುವ ಜಗನ್ಮೋಹನಗೆ ಜಾಗಿಸುವ ಜಗತ್ರಯ ಜೀವನಿಗೆ ಯೋಗಿಜನ ಧ್ಯಾಯಿಸುವ ನಿರ್ವಾಣೆಗೆ 2 ಜಯ ಜಯವೆನ್ನಿರೊ ಗುರುಮೂರ್ತಿಗೆ ಇಹಪರ ಪೂರ್ಣ ಪರಂಜ್ಯೋತಿಗೆ ಬಾಹ್ಯಾಂತ್ರ ಭಾಸುವ ಶ್ರೀಪತಿಗೆ ಮಹಿಪತಿಯ ಶ್ರೀ ಸ್ವಾಮಿ ಜಗತ್ಪಿತಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಾಣತನದ ಮಾತು ಏನು ಕೆಲಸವಯ್ಯ ಖೂನ ನೋಡಿ ಪ್ರಾಣನಾಯಕನ ತಿಳಿವುದೊಂದೆ ಜ್ಞಾನಾಭ್ಯಾಸ ಮಾಡಿ ಧ್ರುವ ಕರಿಮಣಿ ಒಂದಿಲ್ಲದೆ ಹೆಂಗಸಿಗೆ ಸರಮುತ್ತು ಯಾಕೆ ಸಾರ ಸಂಜೀವನಿಲ್ಲದೆ ನೂರು ಗಿಡಮೂಲಿಕೆ ಯಾಕೆ ನೆರೆ ಇಲ್ಲದೆ ಸಾಧುಸಜ್ಜನರು ಸರ್ವಬಳಗವ್ಯಾಕೆ ಪರಮ ತತ್ವಜ್ಞಾನ ಒಂದಿಲ್ಲದೆ ಸುರಿಯುವ ಮಾತಿನ್ಯಾಕೆ 1 ಪ್ರಾಣವಿಲ್ಲದ ಸುಂದರವಾದ ಶರೀರ್ಯಾಕೆ ಕಾಲ ಬದಕುವುವದ್ಯಾಕೆ ಸ್ವಾನುಭವದ ಸುಖ ನೆಲೆಯುಗೊಳ್ಳದೆ ಒಣ ಡಂಭವ್ಯಾಕೆ ತಾನಾಗಿಹ್ಯ ವಸ್ತು ದೊರಕಿಲ್ಲದೆ ನಾ ನೀನೆಂಬುದ್ಯಾಕೆ 2 ಶ್ರೀ ಹರಿಮಹಿಮೆಯ ಸೋಹ್ಯ ತಿಳಿಯದೆ ದೇಹ್ಯವ್ಯಾಕೆ ಗುಹ್ಯಗುರುತವಿಲ್ಲದೆ ಸಾಯಸಬಡುವದ್ಯಾಕೆ ಸಾಹ್ಯಮಾಡುವ ಸದ್ವಸ್ತು ನೋಡದ ಕಣ್ಣು ನೋಟವ್ಯಾಕೆ ಮಹಿಪತಿಸ್ವಾಮಿ ಸದ್ಗುರುಪಾದ ಕಾಣದ ಜನ್ಮವ್ಯಾಕೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜ್ಞಾನವೆಂಬುದಕೇನು ಕ್ಷಣ ನಡಿಯು ಕಠಿಣ ಅನುಭವದ ನಿಜಖೂನ ಅಗಮ್ಯ ಸ್ನಾನ ಧ್ರುವ ಅಹಂ ಬ್ರಹ್ಮಾಸ್ಮಿ ಎಂಬ ಸೋಹ್ಯ ತಿಳುವದೆ ಗುಂಭ ಬಾಹ್ಯ ರಂಜನದೆ ಡಂಭ ದೇಹದಾರಂಭ ಸೋಹ್ಯ ತಿಳಿದುಕೊಂಬ ಗುಹ್ಯಗುರುತದ ಇಂಬ ಮಹಾಮಹಿಮೆಲೆ ಉಂಬ ಸಹಸ್ರಕೊಬ್ಬ 1 ಮೂರ್ತಿ ಶ್ರೀಪಾದ ಬೋಧ ಆದಿತತ್ವದ ಭೇದಿಸದಲ್ಲದ ಭೇದ ಮದಮತ್ಸರದ ಕ್ರೋಧ ಹಾದಿ ತಿಳಿಯದು ವಸ್ತುದ ಉದಯಸ್ತಿಲ್ಲದ 2 ಜ್ಞಾನಕ ಜ್ಞಾನೊಡಮೂಡಿ ಖೂನಕ ಬಾವ್ಹಾಂಗ ಮಾಡಿ ನಾ ನೀನೆಂಬುದು ಈಡಾಡಿ ಅನುಭವ ನೋಡಿ ಮನೋನ್ಮದ ನಡಿ ಅನುದಿನವೆ ಕೊಂಡಾಡಿಘನಕ ಮಹಿಪತಿ ನೀ ಕೂಡಿ ನೆನಿಯೊ ಬೆರೆದಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೊಂದಬೇಕು ನಿಜನೋಡಿ ತಂದೆ ಗುರುನಾಥ ಬೋಧ ಧ್ರುವ ಪರಧನ ಪರಸತಿಯರ ಬಿಟ್ಟರೆ ಸಾಕು ಹೇಸಿ ತೋರುವುದು ತನ್ನೊಳು ಪ್ರತ್ಯಕ್ಷ ವಾರಣಾಸಿ ಸುರಿಮಳೆಗರೆವುದು ಹೆಜ್ಜೆಜ್ಜಿಗೆ ಪುಣ್ಯದ ರಾಶಿ ಅರಿತು ಏಕರಸವಾಗಿ ಸದ್ಗುರು ಸ್ಮರಿಸಿ 1 ಜನ್ಮಕೆ ಬಂದ ಮ್ಯಾಲೆ ಪುಣ್ಯಪಥ ಸಾಧಿಸಿ ಸನ್ಮತ ಸುಖಸಾರದೊಳು ಮನಭೇದಿಸಿ ಉನ್ಮನವಾಗಿ ಜೀವನ ಸದ್ಗತಿಗೈದಿಸಿ ಜನ್ಮಕೆ ಬೀಳುವ ಭವಬಂಧನ ಛೇದಿಸಿ 2 ಸಾಯಾಸದಿಂದ ಸಾಧಿಸಬೇಕು ಸಾಧುಸಂಗ ಗುಹ್ಯಗುರುತ ನೋಡಲಿಬೇಕು ಅಂತರಂಗ ಬಾಹ್ಯಾಂತ್ರದೋರುತಿದೆ ಸದ್ಗುರು ಪ್ರಾಣಲಿಂಗ ಭವ ಭಂಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು