ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿ ನಿಮ್ಮೊಳು ನಿಜಾನಂದಬೋಧ ಕೂಡಿ ಕರುಣಾಸಿಂಧು ಶ್ರೀಗುರುಪಾದ ಧ್ರುವ ಇಡಾ ಪಿಂಗಳ ಮಧ್ಯ ನೋಡಿ ಈಗ ನಾಡಿ ಸುಷಮ್ಮವಿಡಿದು ಕೂಡಿ ಬ್ಯಾಗ ನೋಡಬಲ್ಲಿದೆ ಬ್ರಹ್ಮಾನಂದ ಭೋಗ ಗೂಢವಿದ್ಯವಿದು ತಾ ರಾಜಯೋಗ ಒಡನೆ ತಿಳಿಯುವದಲ್ಲ ಷಡಚಕ್ರ ಭೇದವಲ್ಲ ಬಡವರಿಗಳವಲ್ಲ ಗೂಢಿನ ಸೊಲ್ಲ 1 ಪಿಡಿದು ಮನಮಾಡಿ ದೃಢನಿಶ್ಚಯ ಬಿಡದೆ ಭೇದಿಸಿನೋಡಿ ಸುಜ್ಞಾನೋದಯ ಇಡದು ತುಂಬ್ಯದೆ ವಸ್ತು ಜ್ಯೋತಿರ್ಮಯ ಪಡೆದುಕೊಳ್ಳಿರೊ ಗುರು ಕರುಣ ದಯ ಮನ ಉನ್ಮನ ಮಾಡಿ ಘನಸುಖದೊಳು ಕೂಡಿ ಅನುದಿನ ನಲಿದಾಡಿ 2 ಮೂರುಗುಣರಹಿತ ಮೂಲರೂಪ ತೋರುತಿಹ್ಯದು ನಿಜ ನಿರ್ವಿಕಲ್ಪ ತರಳ ಮಹಿಪತಿ ಪ್ರಾಣ ಪಾಲಿಪ ಹೊರೆದು ಸಲಹುವ ಗುರುಕಲದೀಪ ಭಾವಿಕರಿಗೆ ಜೀವ ಕಾವ ಕರುಣದೇವ ವಾಸುದೇವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಲುಸೂಕ್ಷ್ಮ ಗುರು ಗೂಢವಿದ್ಯ ನೆಲೆವಂತಗಿದು ನಿಜವಾಗುದು ಸಾಧ್ಯ ಧ್ರುವ ಕಣ್ಣಿನ ಕೊನೆ ಮುಟ್ಟಿನೋಡಿ ನಿಜಖೂನ ಉನ್ಮನವಾಗಿ ಬೆರೆದಾಡುವ ನಿಜಸ್ಥಾನ ಚೆನ್ನಾಗ್ಯಾದಾನಂದ ಘನ ಭಿನ್ನವಿಲ್ಲದೆ ಮಾಡಿ ನಿಜಗುರು ಧ್ಯಾನ 1 ಜಾಗ್ರ ನಿದ್ರೆಯ ಮಧ್ಯ ಅರವಿನೊಳು ನಿಜಗೂಡಿ ಶೀಘ್ರ ಸಿದ್ಧಾಂತನುಭವಿಸಿ ತಾಂ ನಿಜಮಾಡಿ ಅಗ್ರ ಗುರುಪಾದವನು ಕೂಡಿ ಶುಕ ಮುನಿಗಳಿಗಿದೆ ನೋಡಿ 2 ಶಿರದಲಿ ಕರವಿಟ್ಟು ನೋಡಿ ನಿಜವರ್ಮ ಹರಿಸಿ ಅನೇಕ ಜನ್ಮಾಂತರದ ದುಷ್ಕರ್ಮ ತರಳಮಹಿಪತಿಗಿದೆ ಸುಬ್ರಹ್ಮ ಗುರು ಭಾಸ್ಕರಸ್ವಾಮಿ ಶ್ರೀಪಾದ ಧರ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು