ಒಟ್ಟು 4 ಕಡೆಗಳಲ್ಲಿ , 2 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಬಪ್ಪನಾಡ ದುರ್ಗಾಪರಮೇಶ್ವರಿ) ಬಪ್ಪನಾಡ ಭದ್ರಕಾಳಿ ತಪ್ಪು ಕ್ಷಮಿಸಿ ಸಲಹಮ್ಮ ನ- ಮ್ಮಪ್ಪ ಶ್ರೀನಿವಾಸ ದೇವನಪ್ಪುತಾನಂದಾಬ್ಧಿಗಿಳಿದ ಪ. ಸರಸಿಜಾಸನಾದಿ ದೇವ ವರರ ನೀನೆ ಸಲಹುವಿ ದುರುಳ ಜನರ ತರಿದು ಭೂಮಿ ಭರವನೆಲ್ಲ ಇಳುಹುವಿ ಚರಿಯ ತೋರ್ಪಮಾಯೆ ಅಲ್ಯ- ಲ್ಲಿರುವ ಶತ್ರು ಪುಂಜವ ಕತ್ತರಿಪದೇನಾಶ್ಚರ್ಯ ತಾಯೆ 1 ಶಂಬರಾರಿ ಪಿತನಪಾದ ನಂಬಿಕೊಂಡ ರಾತಿಯ ಅಂಬೆ ನಿನ್ನ ಕರುಣದಿಂದ ಸಂಭವಿಸಿದ ಖ್ಯಾತಿಯ ಡಂಬತನದ ಶುಂಭ ನೀಶುಂಭ ದಮನೆ ಶಕ್ತಿ ನಿನ- ಗೆಂಬುದೇನು ದಾಸದಾಸನೆಂಬದರಿತು ಸಲಹು ದೇವಿ 2 ಮೂಢಮತದಿ ಮುಂದೆ ಹೋಗಿ ಮಾಡಿದಂಥ ಕುಂದನು ಪ್ರ- ಹುಡೆ ಕ್ಷಮಿಸಬೇಕೆಂದಿಂದು ಓಡಿ ಬಂದು ನಿಂದೆನು ಮೂಡಲಾದ್ರಿವಾಸನಡಿಯ ಪಾಡುವನೆಂದೆನ್ನನು ಕಾ- ಪಾಡಿ ಕಡೆಹಾಯಿಸುವದೆಂದು ಬೇಡಿಕೊಂಬೆ ಭಯಹರಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಗಂಡಾಂತರ ಪರಿಹರಿಸು ಗರುಡಾಂಕಗಮನ ಹರಿ ಪುಂಡರೀಕಾಯತಾಕ್ಷ ಮೊಂಡತನ ತಾಳಿರುವ ಲಂಡರಸನಭಿಮತವ ಖಂಡಿಸು ಕೃಪಾಂಬುರಾಶಿ ಗ್ರಹವಾಸಿ ಪ. ನಿನ್ನ ಸೇವೆಯ ಮಾಳ್ಪ ನಿರಪರಾಧಿಯ ಮ್ಯಾಲೆ ಅನ್ಯಾಯ ಕೃತಭಾರವ ತನ್ನಂತೆ ಪೊರಿಸಬೇಕೆಂನುವರ ನೀನೆಂತು ಮನ್ನಿಸುವೆ ಮಾನ ಕಾವ ಭಿನ್ನ ಭಾವನೆ ತಾಳ್ದ ಭೂಪತಿಗೆ ಭಯದೋರಿ ಎನ್ನ ಕಾಪಾಡುವ ದೇವ ಭವನಾವ 1 ಅಡಿಗಡಿಗೆ ನಿನಗಂಜಿ ನಡೆವೆ ನಾನೆಂಬುದನು ಒಡೆಯ ನಿನಗೆಂಬುದೇನು ಕಡು ಮೂರ್ಖ ಜನರೆನ್ನ ಕಷ್ಟಗೊಳಿಪುದ ನೋಡಿ ಬಿಡಲ್ಯಾಕೆ ಭಾಗ್ಯವೇನು ಒಡೆಯ ಕಂಭದಿ ಬಂದು ಪಿಡಿದಾದಿ ದೈತ್ಯೇಯ- ನೊಡಲ ಬಗೆದಂಥ ಧೀರ ಬಲಸಾರ 2 ಪರಿಯಂತ ಪಾಲಿಸದ ಶೇಷಾದ್ರಿ ಶಿಖರವಾಸ ಬ್ಯಾಸತ್ತು ಬಹು ವಿಧದಿ ಬಳಲಿ ಬೆಂಡಾಗಿಹೆನು ದೋಷವೆಣಿಸದಿರು ಲೇಶ ನೀ ಸಲಹು ನಿಗಮಭೂಷ ಹೇ ಶ್ರೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ಧ್ರುವ ಬಲ್ಲೆ ಬಲ್ಲೆನೆಂಬರು ಬಲ್ಲರಿಯದಿಹದನು ಬಲ್ಲರೆ ನೀವಿನ್ನು ಹೇಳುವುದು ತಾನಾ 1 ಕಣ್ಣು ಕಾಂಬುವದೇನು ಕಣ್ಣಿನೊಳಿಹುದೇನು ಕಣ್ಣು ಕಾಂಬುವ ಗತಿ ತಿಳಿಯುವುದು ತಾನಾ 2 ಕಿವಿಯ ಕಿವಿಯೆಂಬುದೇನು ಕಿವಿಯ ಕೇಳುವುದೇನು ಕಿವಿಯ ಕೇಳುವ ಗತಿ ತಿಳಿಯುವದು ತಾನಾ 3 ಮೂಗು ಮೂಗೆಂಬುದೇನು ಮೂಗಿನೊಳಾಡುವದೇನು ಆಡುವ ಗತಿಗಳ ತಿಳಿಯುವದು ತಾನಾ 4 ಬಾಯಿ ಬಾಯೆಂಬುದೇನು ಬಾಯಿಯೊಳ ನುಡಿವದೇನು ಬಾಯಿ ನುಡಿವ ಗತಿ ತಿಳಿಯುವದು ತಾನಾ 5 ದೇಹ ದೇಹೆಂಬುದೇನು ದೇಹದೊಳಿಹುದೇನು ದೇಹದೊಳಿಹ ವಸ್ತು ತಿಳಿಯುವದು ತಾನಾ 6 ಪ್ರಾಣವೆಂಬುದೇನು ಕರಣವೆಂಬುದೇನು ತತ್ತ್ವವೆಂಬುದೇನು ತಿಳಿಯುವದು ತಾನಾ 7 ಜೀವ ಅಂಬುದೇನು ಜೀವಭಾಗಗಳೇನು ಜೀವ ಶಿವದ ಗತಿ ತಿಳಿಯುವದು ತಾನಾ 8 ಆರುವ್ಹೆಂಬುದೇನು ಮರವ್ಹುವೆಂಬುದೇನು ಇದರೊಳು ಖೂನ ಕುರುಹು ತಿಳಿಯುವುದು ತಾನಾ 9 ಕನಸುವೆಂಬುದೇನು ಕನಸು ಕಾಂಬುವದೇನು ಕನಸು ಹೇಳುವದೇನು ತಿಳಿಯುವುದು ತಾನಾ 10 ಹಗಲು ಎದ್ದಿಹದೇನು ಇರಳು ಮಲಗುವದೇನು ಇದರ ಹಗರಣವನು ತಿಳಿಯುವದು ತಾನಾ 11 ಹುಟ್ಟಿ ಬಾಳುವದೇನು ಸತ್ತು ಹೋಗುವದೇನು ಸತ್ತು ಹುಟ್ಟುವದೇನು ತಿಳಿಯುವದು ತಾನಾ 12 ಹೆಣ್ಣು ಗಂಡೆಂಬುವದೇನು ಹೆಣ್ಣು ಗಂಡು ಕೂಡುವದೇನು ಕೂಡುವದೇನೆಂದು ತಿಳಿಯುವದು ತಾನಾ 13 ಅನುಭವ ಗತಿಗಳ ತಿಳಿಯಲು ಆತ್ಮದೊಳು ತಿಳಿಯಲು ಜನ್ಮವು ಅಳಿಯುವದು ತಾನಾ 14 ಆತ್ಮ ಅನುಭವವು ತಿಳಿಯುವದು ಗುರುಕೃಪೆಯು ತಿಳಿಯಲು ಜೀವನ್ಮುಕ್ತಿಯು ತಾನಾ 15 ಮಹಿಪತೆಂಬ್ಹೆಸರನು ಕರೆದರೊ ಎಂಬುವದೇನು ಓ ಎಂಬುವದೆನಗಿನ್ನು ತಿಳಿಯಿತು ತಾನಾ 16 ಇಂತು ಪರಿಯಾಯವು ತಿಳುಹಿದ ಗುರುರಾಯ ಎನ್ನೊಳು ಭಾಸ್ಕರ ಗುರು ತಾನೆ ತಾನಾ 17
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಲಕ್ಷುಮಿ ನಾರಾಯಣ ಸಂರಕ್ಷಿಸು ಎನ್ನನು ಬೇಗ ಪ. ಪಕ್ಷ್ಮ(?)ಗಳಕ್ಷಿಗಳನು ಕಾವಂದದೊಳಕ್ಷಯ ನಿಧಿಯ ಸ- ಮಕ್ಷದಿ ತೋರುತ ಅ.ಪ. ಅರ್ಭಕನಾ ಮೋರೆ ಕೇಳಿ ಕರ್ಬುರ ಚರ್ಮನ ಸೀಳಿ ಗರ್ಭೀತ ಕರುಳ ಮಹಾರ್ಭಟದಿಂ ತೆಗದುರ್ಬಿಗೆ ಬೀರಿದ ನಿರ್ಭಯಕಾರಿ 1 ಮಣಿಗರ್ಭ ಮೂರ್ತಿಗೆ ನೀ ಎಣೆಯಾಗಿಲ್ಲಿಗೆ ಬಂದು ಕುಣಿಯಲು ನಿಧಿ ಸಂದಣಿಗೊಳದಿರೆ ಲಕ್ಷಣಕೆ ಕೊರತೆಯಂ- ದೆಣಿಸರೆ ಸುಜನರು 2 ಶಕ್ರ ಚತುಷ್ಕರ ಸಿರಿಯು ಚಕ್ರಗದಾಬ್ಜರ ಪರಿಯು ವಕ್ರ ಮತಿಯ ರಿಪುಚಕ್ರವ ತರಿವ ಪರಾಕ್ರಮ ಕರುಣೋ- ಪಕ್ರಮ ತೋರುತ 3 ಅಂಬುಜನಾಭನೆ ನಿನ್ನ ನಂಬಿದ ಭಾವನೆಯೆನ್ನ ತುಂಬಿದ ಜಗದೊಳಗಿಂಬುಗೊಂಡಿಹ ನಿನಗೆಂಬುದೇನು ಪೀ- ತಾಂಬರ ಧಾರಿ4 ಎರಡೊಂದು ಋಣಬಂಧ ಪರಿಹರಿಸೊ ಗೋವಿಂದ ಸುರತರು ಕರುಣಾರಸವಿರಿಸು ಶೇಷಗಿರಿ- ವರ ತ್ವರೆಯಿಂದ 5
--------------
ತುಪಾಕಿ ವೆಂಕಟರಮಣಾಚಾರ್ಯ