ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀ ಕೃಪೆ ಮಾಡೋ ಹರಿಯೇ ಲೋಕವಿನುತ ಸಿರಿಯೇ ಪ ಶ್ರೀಕರ ಭಾಸ್ವರಾ ಭಕ್ತಸುಧಾಕರ ಶೋಕಹರಣಾ ನೀ ಶೂರಾ ಅ.ಪ ನಡು ನೀರೋಳೆನ್ನ ಕೈಯ ಬಿಡಬೇಡ ಮಾರನಯ್ಯ ಅಡಿಗೆರಗುವೆನಯ್ಯ ಕೊಡು ನಿನ್ನ ನಾಮಾವಳಿಯ ದೃಢದೆ ಭಜಿಪೆನಯ್ಯ ಮೃಡನುತಾನೇ ಗೋವಿಂದಯ್ಯ 1 ಕಳೆದ ದುರಿತಾವೃತ ಉಳಿದುದು ವೋವರಾ ಅಳಿವ ಕಾಲವಿದಿನ್ನು ಬಳಲಿಸೋಲುವೆ[ನಯ್ಯ] ಘಳಿಲನೆ ನಿನ್ನ ನಾಮಾವಳಿಯ ಸ್ಮರಣೆಯ 2 ಅನ್ಯರ ಭಜಿಸೆನು ಅನ್ಯರ ನುತಿಸೆನು ಅನ್ಯರಿಗೆರಗೆನು ಅನ್ಯರ [ಪೂಜಿ]ಸೆನು [ಅ ನನ್ಯ ಶರಣನೆ ಮನ್ನಿಸೊ ಶರಣುಬಂದಿಹೆನು] 3 ಕಾವಧೀರನು ಇನ್ನು ಅವನೇ ಶ್ರೀಹರಿ ಸೇವಕರಿಗೆ ನಾನು ಸೇವಕನೆನ್ನುತಾ ಭಾವಿಸೋ ದೇವದೇವಾ ಮಾವಿನಾಕೆರೆರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀ ಕೊಡೆ ನಾ ಬಿಡೆ ಕೇಳಯ್ಯ-ಹರಿ-|ಗೋಕುಲಪತಿಗೋವಿಂದಯ್ಯಪನೋಡುವೆ ನಿನ್ನನು ಪಾಡುವೆ ಗುಣಗಳ |ಕಾಡುವೆ ಬೇಡುವೆ ನಾಡೊಳಗೆ ||ಮೋಡಿಯ ಬಿಡು ಕೊಡು ಮೊದಲಿಗೆ ಬಡ್ಡಿಯ |ಕಾಡೊಳು ತುರುಗಳ ಕಾಯ್ದರಸನೆಹರಿ1ಎಂಟಕ್ಷರವಿವೆ ದ್ವಯಸಾಕ್ಷಿಗಳಿವೆ |ಗಂಟಿಗೆ ಮೋಸವೆ ದಾಸರಿಗೆ ||ಎಂಟುಂಟೆನಿಸುವೆ ಬಂಟರ ಬಾಯಲಿ |ತುಂಟತನವ ಬಿಡು ತುಡುಗರರಸೆ 2ಅಪ್ಪನೆ ಅಯ್ಯನೆ ಅಮರರಿಗೊಲಿದನೆ |ಸರ್ಪನೆ ಮೇಲೆ ಮಲಗಿಪ್ಪವನೆ |ಒಪ್ಪಿಸಿಕೊಟ್ಟರೆಪುರಂದರವಿಠಲನೆ |ಒಪ್ಪವ ತೋರುವೆ ಒಡೆಯನಿಗೆ 3
--------------
ಪುರಂದರದಾಸರು