ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ
ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ.
ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1
ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2
ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3
ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4
ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5
ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6
ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7
ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8
ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9
ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10
ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11