ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ