ಅಭ್ಯಾಸವಮಾಡಿ ಅಭ್ಯಂತ್ರದೊಳಗಿಹುದು ಧ್ರುವ
ಕಣ್ಣು ಕಾಣುವದ್ಹಚ್ಚಿ ಚೆನ್ನಾಗಿ ಚಿತ್ಸ ್ವರೂಪವ
ಭಿನ್ನವಿಲ್ಲದೆ ಭಾಸುವದು ಪುಣ್ಯಪ್ರಭೆಯು 1
ಕಿವಿಯು ಕೇಳುವದ್ಹಚ್ಚಿ ಸವಿಸವಿ ಸಾರಾಯದ ಶ್ರುತಿ
ಆವಾಗ ನಿಮ್ಮೊಳಾಲಿಸಿ ಪವಿತ್ರ ಪ್ರಣವ 2
ಘ್ರಾಣ ಗ್ರಹಿಸುವದ್ಹಚ್ಚಿ ದೇಹದೊಳಾವಾಗ ಪೂರ್ಣ
ಸೋಹ್ಯ ಸೂತ್ರವಿದು ಸೋಹ್ಯವೆಂಬುದಾ 3
ಜೀವಕೆ ಜೀವ್ಹಾಳಚ್ಚಿ ಸುವಿದ್ಯಸೇವೆ ಸೂತ್ರದ
ಸರ್ವದಾ ಸವಿಸಾರವ ನೋಡಿ ದಿವ್ಯನಾಮದ 4
ಶಿವಸುಖವಿದುರಿಡುವಾಂಗೆ ಜೀವ ಜೀವದಾ 5
ಮನಸಿಗೆ ಮನಹಚ್ಚಿ ಮನೋನ್ಮನಮಾಡಿ
ಘನಸುಖದೊಳು ಬೆರೆದಾಡಿ ಅನುಭವಿಸಿ ನೋಡಿ 6
ಗುರುವಿಗೆ ಗುರುವೆಂದರಿದು ನರದೇಹದ ಭಾವನೆಯ ಮರೆದು
ಕರಕೊ ಮಹಿಪತಿ ಇರುಳ್ಹಗಲೆ ಸ್ಮರಿಸಿದಾಕ್ಷಣ 7