ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಡು ನಿನ್ನ ಧ್ಯಾನ ಒಡೆಯ ಶ್ರೀರಮಣ ಎಡಬಿಡದಲೆ ತವಅಡಿಭಕ್ತಿಜ್ಞಾನ ಪ ವನವಸೇರಿರಲಿ ಮತ್ತನುಗಾಲ ಬಡತನ ವನುಭವಿಸುತಿರಲಿ ಘನಸುಖದಿರಲಿ 1 ಸತಿಯಳೊಂದಿಗೆ ಬಿಡದೆ ರತಿಕ್ರೀಡೆಲಿರಲಿ ಸತತದಿ ತವಭಕ್ತಿ ಹಿತಾಹಿತದ ಚಿಂತನೆಯನು 2 ಚಳಿ ಮಳೆಯೊಳು ಬಿದ್ದು ಕಳವಳಗೊಳ್ಳುತಿರಲಿ ಹುಲಿಯ ಬಾಯೊಳು ಸಿಲ್ಕಿ ಹಲುಬಿ ಎದೆಯೊಡೆದು 3 ಕೊಟ್ಟ ಒಡೆಯರು ಬಂದು ಕಟ್ಟಿ ಕಾದಲಿ ಜನ ಬೆಟ್ಟ ಬೇಸರಮಾಡಿ ಅಟ್ಟಬಡಿಯುತಿರಲಿ 4 ಬೇನೆಯೊಳ್ ಬಿದ್ದಿರಲಿ ಹಾನಿಯಾಗಲಿ ಮಾನ ಕಾಣದೆ ಸುಳ್ಳನೆಂದು ಹೀನನುಡಿಯಲಿ ಬಿಡದೆ 5 ಹಗೆಗಳು ಬಂದೆನ್ನ ಬಗೆ ಬಗೆ ನಿಂದಿಸಿ ನಗೆಗೇಡು ಮಾಡೆನ್ನ ಜಗದೆಳಡಾಡುತಿರಲಿ 6 ಅವ ಪರಿಯಲಿರಲಿ ದೇವ ಶ್ರೀರಾಮ ನಿನ್ನ ಸಾವಿರನಾಮ ಎನ್ನ ಭಾವದಿ ನುಡೀತಿರಲಿ 7
--------------
ರಾಮದಾಸರು