ಕಾಣಬಹುದಕೆ ಕನ್ನಡಿಯಾಕೆ ಭಿನ್ನವಿಲ್ಲದೆ ನೋಡಿ
ತನ್ನೊಳು ಘನಬ್ರಹ್ಮವಿರಲಿಕ್ಕೆ ಅನುಮಾನವು ಬ್ಯಾಡಿಧ್ರುವ
ಕುಂಭಿನಿಯೊಳು ಘನಹೊಳೆಯುತ ತುಂಬಿತುಳುಕುತಲ್ಯಾದೆ
ಉಂಬವರಿಗಿದಿರಿಡುತ ಬಿಂಬಿಸುತಲ್ಯಾದೆ
ಹಂಬಲಿಸಿದರೆ ತನ್ನೊಳಗೆ ತಾ ಗುಂಭಗುರುತವಾಗ್ಯಾದೆ
ಇಂಬು ತಾನೆ ಆಗ್ಯಾದೆ 1
ಹೇಳುವ ಮಾತಿನ ಮಾತಿಲ್ಲ ಕೇಳಿರಯ್ಯಾ ಚೆನ್ನಾಗಿ
ಒಳ ಹೊರಗಿದು ಭಾಸುತಿ ಹ್ಯ ದೆಲ್ಲಾ ಸುಳವು ಬಲ್ಲಾತ ಯೋಗಿ
ಕಳೆಕಾಂತಿಗಳ ಅನುಭವವೆಲ್ಲಾನು ತಿಳಿಯಬಲ್ಲವ ಭೋಗಿ
ಹೊಳೆವುತಿಹ್ಯದು ಸರ್ವಮಯವೆಲ್ಲಾ ಮೊಳೆಮಿಂಚು ತಾನಾಗಿ 2
ಇಲ್ಲೆವೆ ಎರಡು ಹಾದಿಯ ಕಟ್ಟಿಗುಲ್ಲುಮಾಡದೆ ನೋಡಿ
ಗೋಲ್ಹಾಟ ಮಂಡಲವನು ದಾಟಿ ಅಲ್ಲಿಯೆ ಮಹಿಪತಿ ನೋಡಿ
ಅಲ್ಲಿಯೆ ಮನ ತಾಂ ಮನಿಕಟ್ಟಿ ಫÀುಲ್ಲನಾಭನ ಕೂಡಿ 3