ಮತ್ತಾರು ತಿಳಿಯರಲ್ಲಾ ಸದ್ಭಕ್ತಿಯ ಪ
ತಂತ್ರಸಾರದಿಂದ ಪೂಜೆ ಮಂತ್ರದಿಂದ ಮಾಡಿ ಡಂಭ |
ಯಂತ್ರದೊಳಗ ಸಿಲ್ಕ ಸಿಂತ್ರ ಹೋದರಲ್ಲದೇ 1
ಶಾಸ್ತ್ರವನೋದಿ ಹೇಳಿ ನಿಸ್ತರಿಸಿ ವಾದದಿಂದ |
ದುಸ್ತರ ಹಮ್ಮಿನೊಳಗಸ್ತ ವಾದರಲ್ಲದೇ 2
ಇದ್ದು ಉಪವಾಸದಿಂದ ಉಗ್ರತಪವ ಮಾಡಿ |
ಸಿದ್ಧಿಗಳ ತೋರಿ ಮೆರೆದು ಬಿದ್ದು ಹೋದರಲ್ಲದೇ 3
ಹಲವು ಕರ್ಮಗಳ ಮಾಡಿ ಫಲವ ಬೇಡಿಕೊಂಡು ತನ್ನ |
ಘಳಿಕೆಯ ಸಂಸಾರದಿ ಕಳೆದುಕೊಂಡರಲ್ಲದೇ 4
ಇಂದಿರೆಪತಿಯ ಮನದಿಂದ ಅರಿತು ಪೂಜಿಸುವ |
ತಂದೆ ಮಹಿಪತಿ ಪ್ರಭು ಹೊಂದಿದವರಲ್ಲದೇ 5