ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದೆನ್ನ ಪೊರೆವೆÀ ಶ್ರೀರಂಗಧಾಮ ಎಂದೆನ್ನ ಪೊರೆವೆ ಪ. ಎಂದೆನ್ನ ಪೊರೆವೆ ಎಂದೆನ್ನ ಕರೆವೆ ಮಂದಹಾಸ ಮುಖನೆ ಎಂದೆನ್ನನೀಕ್ಷಿಸುವೆ ಅ.ಪ. ಶ್ರೀಶ ವೈಕುಂಠದಿ ಸಾಸಿರ ಫಣೆಯುಳ್ಳ ಶೇಷಶಯನ ಎನ್ನ ಘಾಸಿಗೊಳಿಸಿದೆ 1 ಅರವಿಂದನಯನನೆ ಅರವಿಂದ ದಳ ಪೋಲ್ವ ವರಹಸ್ತವನೆ ಎನ್ನ ಶಿರದ ಮೇಲಿಡುತಲಿ 2 ಬಳಲಬೇಡೆಂತೆಂದು ನಳಿತೋಳಿನಿಂದೆತ್ತಿ ನಳಿನನಾಭನೆ ಎನ್ನ ಬಳಲಿಕೆ ಬಿಡಿಸುತ್ತ 3 ಮುಕ್ತರ ಸಂಗಡ ಮುಕ್ತೇಶ ಎನ್ನಲ್ಪ ಶಕ್ತಿ ಸೇವೆಯ ಕೊಳುತ ಮುಕ್ತಾರ್ಥದಾಯಕ4 ವ್ಯಾಪಕ ಶ್ರೀಗುರು ಸ್ಥಾಪಕ ಮನದಲ್ಲಿ ಪರಿ ದಯೆಗೈದು 5
--------------
ಅಂಬಾಬಾಯಿ
ಭೂತರಾಜರು ಭಜಿಸಿ ಬದುಕಿರೋ ದಿವ್ಯ ಪಾದಕೆರಗಿರೊಭಕುತಿಯಿತ್ತು ಪೊರೆವೊ ಭೂತರಾಜರೆಂಬರಾ ಪ ಭಾವ ಶುದ್ಧದಿ ಓದಿ ಗ್ರಂಥಸಾರವಾ ವಾದಿರಾಜರ ಕೂಡಿ ತಾನು ವ್ಯಾಸ ಮುನಿಯಲಿ 1 ಅಷ್ಟ ಮಂದಿಯಾ ಅಮೃತವೃಷ್ಟಿಗರೆವರೂ ಶ್ರೀ ಕೃಷ್ಣಮಹಿಮೆಯ ತಾವು ಕೂಡಿ ಪಾಡೊರೊ2 ತಂದೆ ಎಂಬೊದೂ ತಾನು ಒಂದನರಿಯದೆ ನಿಂದೆ ಮಾಡಿ ತಾನೆ ಬಲುಕುಂದಿಗಳುಕುವಾ 3 ಶಿಷ್ಟ ಜನರೊಳು ಇವನೇ ಶ್ರೇಷ್ಠವೇನಿದೂ ಸಿಟ್ಟಿನಿಂದ ಬೈದು ಬಹು ಕಷ್ಟಬಡುವನೊ 4 ಛಂಡಿ ಮನುಜನೇ ಪ್ರಚಂಡ ತಪಶಿಯೋಕೆಂಡ ತುಳಿದು ವ್ಯರ್ಥ ನೀನು ದಂಡಕಳುಕುವಿ 5 ಏನು ಪೇಳಲಿ ಇನ್ನೇನು ಹೇಳಲೀಜ್ಞಾನ ಶೂನ್ಯನಂತೆ ಶಿಕ್ಕಿ ನುಡಿಯ ಬ್ಯಾಡೆಲೋ 6 ಖುಲ್ಲ ಕೇಳೆಲೋ ಎಲೋ ಘಲ್ಲ ತೊಡದಿರೋನಿಗಮವೆಲ್ಲ ಪೇಳಿಸುವಾ ಕಲ್ಲಿನಿಂದಲೇ 7 ಶರಣು ಪೊಕ್ಕೆನೊ ಸ್ವಾಮಿ ಮರೆಯ ಪೊಕ್ಕೆನೊ ಕರುಣ ಮಾಡಿರೀ ಕಂಣು ತೆರೆದು ನೋಡಿರೀ 8 ಪಾದ ಸೋಂಕಲೂ9 ಭೀತಿಗೊಳಿಸುತಾನೇಕ ಭೂತ ಪ್ರೇತಕೇರಾಜನಾಗಿ ನೀನು ಭೂತ ಪ್ರೇತ ಗಣದೊಳು 10 ನಂದಿವಾಹನಾಪದಕೆ ಮುಂದೆ ಬಾಹುವೀ ಯನ್ನ ಕಂದ ನೀನು ನಾನೇ ಭಾವಿ ಮಂದಜಾಸನಾ 11 ಪಂಚವೃಂದದೀ ಸದ್ವøಂದ ಪೂಜ್ಯನಾ ದ್ವಂದ್ವ ಪೊಂದಿ ತಾನು ಸ್ವಾನಂದ ಪಡೆದನೂ 12 ಸ್ವಾದಿನಿಲಯನಾ ಬಲು ಪ್ರೀತಿ ಪಡೆದು ತಾ ತ್ರಿಶೂಲ ಧರಿಸಿದಾ ಭಾವಿ ಶೂಲ ರಮಣನೂ 13 ರೇಣು ಪಾದ ಫಣಿಯಲೀ ಪ್ರಾಣಿನಿಡದನಾ ಅವನ ಪ್ರಾಣ ಸೆಳೆವನಾ14 ಎಂತು ಪೇಳಲೀ ಇವರ ಅಚಿಂತ್ಯಮಹಿಮೆಯಾ ಶಾಂತಮೂರುತಿ ಶಶಿಕಾಂತ ಕೀರುತೀ15 ದೂಷಜನರನಾ ಬಲು ಘಾಸಿಗೊಳಿಸಿದಾ ಶಕ್ತಿದಾಯಕ ತಂದೆವರದಗೋಪಾಲವಿಠಲನು 16
--------------
ತಂದೆವರದಗೋಪಾಲವಿಠಲರು
ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ಶ್ರೀ ರಮಣ ಸರ್ವೇಶ ತ್ವಚ್ಚರ- ಣಾರವಿಂದವ ನಂಬಿರುವನಲಿ ಘೋರ ಭಾವವ ತಾಳ್ದ ಹೂಣನ ದೂರ ಓಡಿಸುವ ಭಾರ ನಿನ್ನದು ಪರಮ ಕರುಣಾ ವಾರುಧಿಯೆ ನೀನಲ್ಲದೆನಗೆ- ಸಾರಥಿ 1 ಸುಗುಣ ಸಜ್ಜನ ಶಿರೋಮಣಿ ಮಗುವು ಪ್ರಹ್ಲಾದನ ಪದಾಂಬುಜ ಯುಗವ ನೆನೆವುದನರಿತು ತತ್ಪಿತನೆಂದು ರೋಷದಲಿ ನೆಗೆದು ಬಂಡೆಯ ಝಳಪಿಸುತ ಬರೆ ಧಗಧಗಿಸಿ ಕಂಬದಲಿ ತೋರುತ ಬಗೆದಿ ದೈತ್ಯನ ಕರುಳ ಜಯ ಜಯ ವಿಜಯಸಾರಥಿ 2 ದೋಷಿ ದೈತ್ಯಾವೇಷದಿಂದಲಿ ವಾಸವಾದಿ ಸಮಸ್ತ ದಿವಿಜರ ಘಾಸಿಗೊಳಿಸಿದ ದಶಶಿರನ ತದ್ವಂಶಜರ ಸಹಿತ ನಾಶಗೈದು ನಿರಾಪರಾಧಿ ವಿ- ಭೀಷಣಗೆ ಸಾಮ್ರಾಜ್ಯವಿತ್ತ ಪ- ರೇಶ ಸೀತಾಕಾಂತ ಜಯ ಜಯ ವಿಜಯಸಾರಥಿ 3 ಪೂತನಾ ಬಕ ಶಕಟ ಧೇನುಕ ಪಾತಕಿ ಶಾರಿಷ್ಠ ಕೇಶಿಕಿ- ರಾತ ಕಂಸಾಂಬಷ್ಟ ಮುಷ್ಟಿಕ ಮಲ್ಲ ಚಾಣೂರ ಕಾತರದ ಶಿಶುಪಾಲ ಮುಖ್ಯರ ಘಾತಿಸಿದ ಗರುಡಧ್ವಜನೆ ಪುರು- ಹೂತ ಸುತನನು ಕಾಯ್ದೆ ಜಯ ಜಯ ವಿಜಯಸಾರಥಿ 4 ಅತ್ಯಧಿಕ ಕೋಪದಲಿ ಪ್ರಜ್ವಲಿ ಕಮಲ ಜೌಸ್ತ್ರವ ನುತ್ತರೆಯ ಗರ್ಭದಲಿ ಬಿಡದೆ ಸುತ್ತಿಕೊಂಡಿರಲು ಸತ್ಯಭಾಮಾಕಾಂತ ಕರುಣದಿ ತೆತ್ತಿಯನು ಕಾಪಾಡಿದಖಿಳೋ- ತ್ಪತ್ತಿರಕ್ಷಣಕಾರಿ ಜಯ ಜಯ ವಿಜಯಸಾರಥಿ 5 ಇರುವೆ ಮೊದಲು ಬ್ರಹ್ಮಾಂತರಾಗಿಹ ಸುರನರಾಸುರ ಮುಖ ಪ್ರಪಂಚ ದೊ- ಳಿರುವೆ ಸರ್ವೇಂದ್ರ್ರಿಯ ನಿಯಾಮಕ ಸರಿವ ಕೃತ್ಯವನು ಅರಿತು ಮಾಡಿಸಿ ನೋಡಿ ನಗುತಿಹ ಪರಮ ಮಂಗಳ ಚರಿತ ನೀ ಯನ- ಗಿರಲು ಭಯವ್ಯಾಕಿನ್ನು ಜಯ ಜಯ ವಿಜಯಸಾರಥಿ 6 ಆದರೀ ತೆರದಿಂದ ನಿನ್ನಯ ಪಾದ ಪಂಕಜಗಳನು ಪೊಗಳಿದ- ರಾದುದೊಂದಾಶ್ಚರ್ಯ ನೋಡಲಿ ಸುಜನರಾದವರು ಮೋದ ಭೋದಿ ದಯಾಬ್ಧಿ ವೆಂಕಟ ಭೂಧರೇಶನೆ ಸತತ ನಮ್ಮನು ಕಾದಿರುವೆ ಕಮಲೇಶ ಜಯ ಜಯ ವಿಜಯಸಾರಥಿ7
--------------
ತುಪಾಕಿ ವೆಂಕಟರಮಣಾಚಾರ್ಯ