ಬಾರೋ ಬಾರೋ ಕೋಪವಿನ್ಯಾತಕೆನ್ನ ಕೂಡಾ ರಂಗರಾಯಾ|
ಸಾರಿದ ನಿನ್ನರಸಿಯ ತಪ್ಪನೊಳ್ಪರೇ ರಂಗರಾಯಾ ಪ
ಚಲ್ವ ಕಣ್ದೆರೆವುತ ಮೊಗವತಿರಹುವರೇ ರಂಗರಾಯಾ|
ಹಲ್ಲವ ಮಸೆಯುತ ಘುಡುಘುಡಿಸುವರೇ ರಂಗರಾಯಾ 1
ಭೀಕರಾಕೃತಿಯಾಗಿ ಕೊಡಲಿಯ ಪಿಡವರೇ ರಂಗರಾಯಾ|
ಏಕಾಂಕಿಯಾಗಿ ಕದ್ದು ತಿರುಗುವರೇ ರಂಗರಾಯಾ 2
ಆಗೋಚರವಾಗದೇ ತುರಗೇರಿ ತ್ವರಿತದಿ ರಂಗರಾಯಾ|
ಸುಮದಿ ಬಾ ಮಹಿಪತಿ ಸುತ ಜೀವನ ರಂಗರಾಯಾ 3