ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೇಶ ದಯದಿಂದಲಿ ತ್ವರಿತದಿ ಬಂದು ಒದಗಿ ಸಲಹೊ ಸುಧೆಯಾನಂದ ಉಣಿಸಿದ ಪ. ಇನ್ನು ನಿರೀಕ್ಷಿಸಲೆನಗೆ ಸಾಧ್ಯವಿಲ್ಲ ಅನ್ಯ ಸಾಧನವಿಲ್ಲ ಮುನ್ನಿನ ಮಾರ್ಗದ ರೀತಿಯ ನೋಡಲು ಮನ್ನಿಪ ಜನರಿಲ್ಲ ಧನ್ಯ ವಿಬುಧ ಗಣ ಮಾನ್ಯ ಮುಕುಂದನೆ ಮಾಧವ 1 ದಾರು ನೀನಲ್ಲದೆ ಮಾರಮಣನೆ ನಿನ್ನ ಸೇರಿದ ಬಳಿಕೀ ಧಾರುಣಿ ಒಳಗೆ ನಿವಾರಣೆಯದೇನೊ ಮೂರು ದೊರೆಗಳಲಿ ವಾರಿಜನಾಭ ನೀ ಪ್ರೇರಕನಾಗಿರೆ ಘೋರವಾವರಿಸುವುದೆ 2 ತಪ್ಪುಗಳೆಲ್ಲವ ಒಪ್ಪಿಕೊಳ್ಳೊಯೆನ್ನಪ್ಪ ನೀ ಕರುಣದಲಿ ಒಪ್ಪಿಸಿ ಪಡದನು ತಪ್ಪದೆ ಮನದೊಳಗಿಪ್ಪ ವ್ಯಸನ ಬಿಡಿಸೊ ಸರ್ಪ ಗಿರೀಂದ್ರನೊಳೊಪ್ಪುವ ಸತ್ಯ ಸಂ- ಕಲ್ಪ ಭಜಕ ನಿಜ ಕಲ್ಪತರುವೆನಿಪ 3
--------------
ತುಪಾಕಿ ವೆಂಕಟರಮಣಾಚಾರ್ಯ