ಇಂದೆನ್ನ ಜನ್ಮ ಪಾವನವಾಯಿತು
ತಂದೆ ಶ್ರೀಗುರು ನಿಮ್ಮ ಚರಣ ದರುಶನದಿ ಧ್ರುವ
ಅರ್ಕ ಮಂಡಲಗಳು ರವಿಶಶಿ ಕಿರಣವು
ಝಳಝಳಿಸುವ ಪ್ರಭೆ ನೋಡಿ ಅನಿಮಿಷದಾದೃಷ್ಟಿಲೆನ್ನ
ಲಕ್ಷಿಯೊಳು ಸಾಕ್ಷಾತ್ವಸ್ತು ಗತಿಯು ನಿಮ್ಮ
ಪ್ರಕಾಶವನು ಕಂಡಾಂಧತ್ವಗಳದಿನ್ನು 1
ಓಂಕಾರ ಮೊದಲಾದ ದ್ವಾದಶ ನಾದದಾ
ಭೇದದಾ ಘೋಷವನು ಕೇಳಿನ್ನೀ ದೃಶ್ಯದಾ ಕರ್ಣಲೆನ್ನಾ
ಲಯಲೀಲೆಯೊಳು ಸಾದೃಶ್ಯ ಮೂರ್ತಿಯು ನಿಮ್ಮ
ಶ್ರುತಿಗಳು ಕೇಳಿ ಬಧಿರತ್ವವಾಗಳಿದಿನ್ನು 2
ಜಪವನ್ನು ತಿಳಿದು ಪ್ರಣಮ್ಯಲೆನ್ನ
ಮೂರ್ತಿ ನಿಮ್ಮ
ಮಂತ್ರವನು ತಿಳಿದು ಪಿಶಾಚತ್ವ ಕಳೆದಿನ್ನು 3
ಸ್ತುತಿ ಸ್ತೌತ್ಯ ಸ್ಮರಿಸುವ ದಿವ್ಯನಾಮಾಮೃತವ
ನುಡಿದು ಪಯಸ್ವನೀ ಜಿಹ್ವೆಲೆನ್ನ
ಮೂರ್ತಿ ನಿಮ್ಮ
ಸ್ಮರಿತ ಗತಿವರಿತು ಮೂಕತ್ವ ಕಳೆದಿನ್ನು 4
ಚಿನ್ಮಯ ಚಿದ್ರೂಪ ಕಂಡು ಬೆರಗಾಗಿ ಮನ
ಭ್ರಾಂತಿ ಅಜ್ಞಾನವನ್ನು ಜರಿಯಲೆನ್ನ
ಏಕೋದೇವ ಈತ ವಿಶ್ವಾತ್ಮ ಹಂಸನೆಂದು
ಸಂದೇಹ ಸಂಕಲ್ಪ ಬಾಧೆಯಾಗಳದಿನ್ನು 5
ಭಕ್ತಿ ಮುಕ್ತಿ ಉದಾರಿ ಆತ್ಮದಲಿ ಸಾರಿದೋರಿ
ನಿಜ ಬೋಧಾಮೃತ ಬೆರೆದು ತಾರಿಸಲೆನ್ನ
ಗರ್ಭಪಾಶದ ಬಲಿಯು ಹರಿದು ಧರೆಯೊಳಿನ್ನು
ಉತ್ಪತ್ತಿ ಸ್ಥಿತಿ ಲಯದ ಬೀಜವನ್ನು ಹುರಿದಿನ್ನು 6
ಭಾಸ್ಕರಸ್ವಾಮಿಯ ಕರುಣಾಳು ಮೂರ್ತಿಯ
ಮೂಢ ಮಹಿಪತಿಯ ಕೃಪಾಂಬುಧಿಯು
ಕರುಣದಭಯ ಹಸ್ತವನು ಶಿರಸದಲ್ಲಿಡಲಾಗಿ
ಧನ್ಯನಾದೆನು ಸತಿಪತಿ ಸಹಿತವಾಗಿನ್ನು 7