ತಪ್ಪು ಕ್ಷಮೆ ಮಾಡೊ ಕೃಪೆಯಿಂದ ನೋಡೊ ಧ್ರುವ
ನೀನೆ ದಯಾನಿಧಿ ನಾನೆ ಅಪರಾಧಿ
ಖೂನ ದೋರು ಹಾದಿ ಸ್ಥಾನ ನಿಜಗಾದಿ 1
ಅನಾಥನೆಂದು ನೋಡಿ ಸುನಾಥ ಎನ್ನ ಮಾಡಿ
ಸ್ವಾನಂದ ಸುಖ ನೀಡಿ ಮನ್ನಾಥ ನಿಜಗೂಡಿ 2
ಹೆಳಲಾರೆ ಬಹಳ ಕೇಳೋ ನೀ ದಯಾಳ
ತಾಳಿ ಎನ್ನ ತೋಳ ಬಾಳ ವಿಶ್ವಪಾಲ 3
ಸೇವೆ ಇದೆ ನಮ್ಮ ಭಾವಿಸುದು ನಿಮ್ಮ
ಪಾವನಗೈಸು ವರ್ಮ ಸುವಿದ್ಯ ಪರಬ್ರಹ್ಮ 4
ಬಂದ ಮ್ಯಾಲೆ ಶರಣಕುಂದಬ್ಯಾಕೊ ಪೂರ್ಣ
ಕಂದ ಮಹಿಪತಿ ಗುಣ ಚಂದಮಾಡೊ ಕರುಣ 5