ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧೀರೇಂದ್ರ ಧೀರೇಂದ್ರ ಪ. ಧೀರ ಮೂಲರಾಮನ ಪದಕಮಲವ ತೋರು ಮನದಿ ನೀ ಕುಣೀಕುಣಿದಾಡುವೆ ಅ.ಪ. ವರದಾ ತೀರದಿ ವರಗಳ ಕೊಡುತಲಿ ಮರುತಮತಾಂಬುಧಿ ಚಂದಿರನೆನಿಸಿದ 1 ಕುಷ್ಟಾದಿ ಬಹು ದುಷ್ಟ ಗ್ರಹಗಳ ಕುಟ್ಯೋಡಿಸುತ ಅಭೀಷ್ಟವಗರೆಯುವ 2 ಮುನಿ ಮೌಳಿಯೆ ನಿನ್ನನು ಸ್ತುತಿಗೈಯುತ ಘನ ಭಕ್ತಿಯೊಳಾಂ ಕುಣಿಕುಣಿದಾಡುವೆ 3 ಅರ್ಥಿಯಿಂದ ನಾ ನರ್ತನಗೈಯುವೆ ಸುತ್ತಿ ಸುತ್ತಿ ದಾಸತ್ವದ ನೇಮದಿ 4 ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲಪ್ರಿಯ ಕೃಷ್ಣನ ಚರಣವ ಥಟ್ಟನೆ ತೋರಿಸೋ 5
--------------
ಅಂಬಾಬಾಯಿ
ಸ್ಮರಿಸುವ ನರನೇ ಧನ್ಯ ಸನ್ಮಾನ್ಯ ಪ ಸ್ಮರಿಸುವರಿಗೆ ಸುರತರುಕಲ್ಪ ವಿಭರಾಮ ಪುರದಿ ಶ್ರೀಹರಿ ಧ್ಯಾನಪರ ಶ್ರೀ ಕೃಷ್ಣಾಚಾರ್ಯರ ಅ.ಪ ಭರತ ಭೂಮಿಯೊಳವತರಿಸಿ ದೇವಾಂಶದಿ ಪುರುಹೂತನಂತೆ ಗಜಾಂತ ವೈಭವದಿಂದ ಮೆರೆಯುತ ತಮ್ಮಯ ಚರಣಾರಾಧಕರನು- ದ್ದರಿಸಲೋಸುಗದಿ ಸಂಚರಿಸುತ ಮುದದಿ ಸಂದರುಶನದಿಂಧಾಘವ ಕಳೆದು ಬಲು ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ- ನರ ಪೊರೆವ ಭೂಸುರರೊಳು ಮರುತ ಮತಾಬ್ಧಿ ಚಂದಿರನೆನಿಸಿದವರ 1 ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ ಶಿರಪರಿಯಂತರ ಗುರುಗಳಾಕೃತಿಯನ್ನು ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ ಪರಿಶೋಭಿಸುವ ರತ್ನಾಭರಣದಿಂದೋಪ್ಪುವ ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ ಸುಂದರವಾದ ಮುಖದೊಳು ಮಂದಸ್ಮಿರ ಕಸ್ತೂರಿಯಂತೆ ಪರಿಮಳಾನ್ವಿತ ಶರೀರ ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ2 ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ ವರಪುತ್ರ ಸೌಖ್ಯವ ಕರುಣಿಸುವರು ಸತ್ಯ ಅಪರಿಮಿತ ಮಹಿಮರೆಂದರಿಯದೆ ಇವರನ್ನು ಜರಿಯಲಾಕ್ಷಣದಲಿ ಅರಿತು ಭೀಕರವಾದ ಉರಗರೂಪವ ತೋರುತ ತ್ಯಜಿಸಿ ಮತ್ತೆ ನಿಜರೂಪದಿಂದಿರುತ ನೋಳ್ಪರಿಗತ್ಯಾಶ್ಚರ್ಯ ಸದ್ಗುಣ ಭರಿತ ಕಾರ್ಪರ ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ 3
--------------
ಕಾರ್ಪರ ನರಹರಿದಾಸರು