ಜಯ ಜಯ ಸಕಲಾಧಾರಾ | ಕೃಷ್ಣ ಜಯ ಜಯ
ಭಕ್ತೋದ್ಧಾರಾ ಜಯಸಕಲಾಲಂಕಾರಾ | ಕೃಷ್ಣಾ ಯಮುನಾ
ವೇಗ ಸಂಹಾರಾ ಜಯ ಜಯ ನಂದಕುಮಾರಾ
ಕೃಷ್ಣ ಜಯ ಜೀಮೂತ ಶರೀರಾ ಪ
ದೇವಕೀಕುಮಾರಾ ನಿಗಮಗೋಚರಾ ಶಂಖಚಕ್ರಧರ
ವಸುದೇವಾನಂದಕರ ಸುರುಚಿರ ಪೀತಾಂಬರಧರ 1
ನಯನ ಮನೋಹರ ಗೋಪೀ ಮಂದಿರ ಸರಸಿಜ
ದುರುಳ ಭಯಂಕರ
ಶಕಟ ಬಕಾಂತಕ ಶೂರಾ ಕೃಷ್ಣ ಪೂತನಿ ಸಂಹಾರಾ
ಅಜ ಸುರ ಮುನಿ ಪರಿವಾರ2
ಧೇನುಕ ದೈತ್ಯವಿದಾರಾ | ಕೃಷ್ಣ ಮರಕತ ಮಣಿಮಯ ಹಾರಾ
ತರುಣೀ ಮಣಿಗಣನಿಕರಾ | ಕೃಷ್ಣ ಸರಸಿಜಲಸದಾಕಾರಾ
ನವನೀತಕರಾ ಘನ ಮುರಳೀಧರ | ಕುಂಜವಿಹಾರಾ
ವಿಷಧರ ಭಯಹರ ಗೋವರ್ಧನಧರ | ಮುಷ್ಟಿಕ ಮಧುರಾ 3
ವಿಹಾರಾ | ಕೃಷ್ಣ ನಾದಾನಂದ ಪ್ರಚಾರಾ
ಅಕ್ರೂರಾನತ ಚರಣಾ | ಕೃಷ್ಣ ಮುನಿಜನ ಹೃದಯಾಭರಣ
ಕುಬ್ಜಾವಂದಿತ ಚರಣ | ಕೃಷ್ಣ ಘನಮಹಿಮಾ ವಿಸ್ತರಣ
ಗೋಪೀಜನಗಣ ಮೌಢ್ಯನಿವಾರಣ 4
ದುರುಳ ವಿದಾರಣ | ಭವಜನಕರುಣ
ಹಲಧರ ಭುಜಬಲ ಪ್ರಾಣಾ ಕೃಷ್ಣ
ಬೃಂದಾರಕಗಣ ಪ್ರಾಣ 5
ಶಿಶುಪಾಲೋತ್ಸವ ಬಾಣಾ | ಕೃಷ್ಣ ರುಕ್ಮ ಲೋಭ ಮದ ಯಾಣಾ
ಅರಿಕುಲ ಸೈನ್ಯ ಕೃಪಾಣಾ | ಕೃಷ್ಣ ಚತುರೋಪಾಯ ಪ್ರವೀಣಾ
ರುಕ್ಮಿಣೀರಮಣ ಶುಭಕರಕಂಕಣ ಪಾಂಡವಪೋಷಣ
ಹರಣ ಚಕ್ರವಿಭೂಷಣ6
ದ್ರುಪದಸುತಾನತಚರಣಾ | ಕೃಷ್ಣ ಪರಮಾನಂದಾವರಣ
ವಿದುರಾನತ ನೀಲಾಂಗ | ಕೃಷ್ಣ ಕರಧೃತವ್ಯರಥಾಂಗ
ಕುರುಕುಲ ವನ ಸಾರಾಂಗಾ | ಕೃಷ್ಣ ಗೀತಾವನಜತರಂಗಾ
ಕಮಲಾ ಅಂಗ | ಸತ್ವ ತುರಂಗಾ | ಧರ್ಮವಿಹಂಗಾ 7
ಮಾಂಗಿರಿ ರಂಗ ಸುಧಾಂಗಾ ಶುಭಾಂಗ | ಜಯ ಜಯ ಮಾಂಗಿರಿ
ರಂಗಾ | ಕೃಷ್ಣ ಜಯ ಜಯ ಗರುಡ ತುರಂಗಾ 8