ತುಪಾಕಿ ಸಾಧನವನು ತ್ವರಿಯ ಬಿದ್ದು ಮಾಡುತಿರುವೆಶಾಬಾಸು ಶಿವನೇ ನೀನಣ್ಣ ಪೇಳುವೆನಣ್ಣ ಪ
ಮೌನವೆಂದೆನಿಪ ಮುಸೈದೆ ಸಹಿತಾಗಿಜ್ಞಾನ ಪಡೆದಳವ ಬಗಿಯಣ್ಣಾ ಸಾಧಿಸು ಅಣ್ಣಧ್ಯಾನವೆಂದೆನಿಪ ತಲೆಕಟ್ಟನೆ ಕಟ್ಟಿಆನಂದವನೆ ಆಡಣ್ಣ ಸಾಧಿಸು ಅಣ್ಣ 1
ಆರು ಚಕ್ರವೆಂಬ ಆರು ಕಟ್ಟಿನ ತುಪಾಕಿಧೀರತನದಿಂದ ಪಿಡಿಯಣ್ಣಾ ಸಾಧಿಸು ಅಣ್ಣಮೂರಾವಸ್ಥೆಯೆಂಬ ಮೂವೆರಳ ಮದ್ದ ಹೊಯ್ದಪೂರಾಯದವನ ಮಾಡಣ್ಣ ಸಾಧಿಸು ಅಣ್ಣ2
ಇಡಾಪಿಂಗಳವೆಂಬ ಎರಡು ಗುಂಡನೆ ಹಾಕಿರೂಢಿ ಎಂಬ ಗಜವ ಜಡಿಯಣ್ಣ ಸಾಧಿಸು ಅಣ್ಣಕೂಡಿಹ ಸತ್ವನೆಂಬ ಕೂರಿ ರಂಜಕವರೆದುಗೂಡು ಗುರು ಜಾವಿಗೆ ಒತ್ತಣ್ಣ ಸಾಧಿಸು ಅಣ್ಣ 3
ಆಸನ ನಳಿಕೆಯೆಂಬ ಆಧಾರವನೆ ಆಂತುವಾಸರ ಹೊಗ್ಗೊಡಬೇಡಣ್ಣ ಸಾಧಿಸು ಅಣ್ಣನಾಸಿಕಾಗ್ರವು ಎಂಬ ನೊಣನ ದಿಟ್ಟಿಸಿ ನೋಡಿಸೂಸದೆ ಏರಿಸಿ ನಿಲ್ಲಣ್ಣ ಸಾಧಿಸು ಅಣ್ಣ4
ಬರಿಯ ಪ್ರಣವವೆ ಎಂಬ ಬೆರಳ ಬೊಬ್ಬೆಯನಿಟ್ಟುಭರದಿ ಭೀತಿಯನಳಿಯಣ್ಣಾ ಸಾಧಿಸು ಅಣ್ಣಗುರು ಚಿದಾನಂದನು ಎಂಬ ಗುರಿ ಭ್ರೂಮಧ್ಯವೆ ಇರೆಗುರಿಯ ತಾಗುವಂತೆ ಇಡಣ್ಣ ಸಾಧಿಸು ಅಣ್ಣ5