ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನ್ನ ತಿಳಿದು ತಾ ನಿರ್ಲಿಪ್ತನಾದವಗೆ ಇನ್ನೇನಿನ್ನೇನುತನ್ನ ತನ್ನೊಳು ಕಂಡು ತಾನಾದ ಮಹಾತ್ಮಗೆ ಇನ್ನೇನಿನ್ನೇನು ಪ ನಾನು ನೀನೆಂಬ ಹಮ್ಮುಳಿದುಳಿದಾತಗೆ ಇನ್ನೇನಿನ್ನೇನುನಾನು ನೀನೇ ನಿಶ್ಚಯವೆಂದು ನಿಶ್ಚಲನಾದವಗೆ ಇನ್ನೇನಿನ್ನೇನು1 ಸರ್ವವನರಿತು ಸರ್ವವೆ ತಾನಾದವಗೆ ಇನ್ನೇನಿನ್ನೇನುಸರ್ವ ಸರ್ವವು ಆದ ಸರ್ವಾತ್ಮಗೆ ಇನ್ನೇನಿನ್ನೇನು 2 ಮನದ ಮಾಟಗಳಿಗೆ ಮರುಳಾದವಗೆ ಇನ್ನೇನಿನ್ನೇನುಮನವು ತಾನಾದವಗೆ ಮನಕೆ ನಿಲುಕದವಗೆ ಇನ್ನೇನಿನ್ನೇನು 3 ಸುಖ ದುಃಖಗಳಿಗೆ ತಾ ಸಾಕ್ಷಿಯಾದವಗೆ ಇನ್ನೇನಿನ್ನೇನುಸುಖ ದುಃಖ ತೋರದೆ ಸಮಮನನಾದವಗೆ ಇನ್ನೇನಿನ್ನೇನು 4 ಅಗಣಿತ ಮಹಿಮಗೆ ಇನ್ನೇನಿನ್ನೇನು 5 ಎರಡನುಳಿದು ಮತ್ತೆರಡನು ಮರೆತವಗೆ ಇನ್ನೇನಿನ್ನೇನುಎರಡರೊಳು ತಾನೆಡಬಿಡದಿಪ್ಪಗೆ ಇನ್ನೇನಿನ್ನೇನು6 ಮುಟ್ಟು ಚಟ್ಟುಗಳ ಮುಗಿಸಿದಾತಗೆ ಇನ್ನೇನಿನ್ನೇನುಮುಟ್ಟು ಚಟ್ಟಲಿ ಅಡಗಿರುವಾತಗೆ ಇನ್ನೇನಿನ್ನೇನು7 ಸಕಲ ವಿಧವ ನೋಡಿ ಸಂತುಷ್ಟನಾದವಗೆ ಇನ್ನೇನಿನ್ನೇನುಸಕಲದಿ ಬೆರೆತು ಸಂಶಯವಳಿದಿಪ್ಪವಗೆ ಇನ್ನೇನಿನ್ನೇನು 8 ಚಿದಾನಂದ ಗುರುವಿನ ಚಿತ್ತದಿ ಪಿಡಿದಾತಗೆ ಇನ್ನೇನಿನ್ನೇನುಚಿದಾನಂದ ಗುರುವಿನ ಚಿತ್ಸುಖಭರಿತಗೆ ಇನ್ನೇನಿನ್ನೇನು 9
--------------
ಚಿದಾನಂದ ಅವಧೂತರು