ನಾದನಾದ ಸುನಾದವ ತಿಳಿದವ ನಾದ ಮೂರುತಿ ನಿಜನಾದ ಪ
ಆರು ಅರಿಗಳು ಅವರನು ಗೆಲುವೊಡೆ ಆಶ್ರಯ ತಾನಿದೆ ನಾದಧೀರತನದಲಿಹ ನಾಲ್ವರ ಸಾಧಿಸೆ ದಿಟವು ತಾನಿದೆ ನಾದ 1
ಅಷ್ಟಮದಂಗಳನೆಲ್ಲವ ತಿಳಿವೊಡೆ ಆದಿಯಹುದು ಈ ನಾದದುಷ್ಟರು ಐವರ ದೃಢವನು ಕೆಡಿಸಲು ದೃಷ್ಟಿಗೆ ತಾನಿದೆ ನಾದ 2
ಮೂರು ಮೂರು ಮೂರೆನಿಸುವ ತ್ರಿಪುಟಿಯ ಮೂಲನಾಶವಿದೆ ನಾದಚೋರರು ಸಪ್ತಾ ಸಪ್ತರು ಎಂಬರ ಭೇದಿಸೆ ತಾನಿದೆ ನಾದ3
ಎರಡರ ಭೇದವನೆಲ್ಲವನಳಿವೊಡೆ ಎಡೆದೆರಪಿಲ್ಲದ ನಾದಭರಿತವನಂದಾನಂದವ ತುಳುಕುವ ಭಾಗ್ಯವು ತಾನಿದೆ ನಾದ 4
ನಾದದಿ ನಿತ್ಯವು ಬೆರೆತಿಹ ಪುರುಷನೆ ನಾದ ಚತುರ್ಮಖನಾದವಾದರಹಿತ ಚಿದಾನಂದ ಗುರುವಿನ ಪಾದದೊಳಗೆ ಅವನಾದ 5