ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರ ಮಗನೆಂದರಿಯೆವೆ ಇವ ನಮ್ಮಕೇರಿಯೊಳು ಸುಳಿದು ಪೋದ ಪ. ನೀಲವರ್ಣನ ಮೈಯ್ಯವ ತುಲಸಿ ವನ-ಮಾಲೆ ಕೊರಳೊಳು ಕೌಸ್ತುಭಬಾಲಪ್ರಾಯದ ಚೆನ್ನಿಗ ಬಂದು ಪೋ-[ಗ]ಲು ಸನ್ನೆಯ ಮಾಡಿದ1 ಚಿಕ್ಕಪ್ರಾಯದ ಚೆನ್ನಿಗ ಯೌವನದಲುಕ್ಕುವ ಕಡುಚೆಲುವನೆಚೊಕ್ಕಟಾದ ಚದುರನೊಬ್ಬ ಕುಚಕೆ ಕೈ-ಯಿಕ್ಕಿ ಕಸ್ತೂರಿ ಪೂಸಿದ 2 ಪೀತಾಂಬರನುಡಿಸಿದ ವಿನಯ ಸವಿ-ಮಾತುಮಾತಿಗೆ ನಗಿಸಿದಪ್ರೀತಿಯಿಂದಲಿ ತನ್ನ ಚೆಂದುಟಿಯ ಅಧರಾ-ಮೃತವನುಣಿಸಿದ3 ಪಾರಿಜಾತವ ಸೂಡಿದ ಕಸ್ತೂರಿಯಗೀರುನಾಮವ ತಿದ್ದಿದದೂರದಲಿ ನಿಂತು ಎನ್ನ ಸೋಗೆಗಣ್ಣಓರೆನೋಟದಿ ನೋಡಿದ4 ಆಗ ಮೊದಲಾಗಿ ತನುವಾ ಮದನಶರತಾಗಿ ಕಟ್ಟುಡುಗಿದಾವೆಬೇಗದಲಿ ಹಯವದನ ಬಂದೆನ್ನಮೋಹದಿಂದಲಿ ಕೂಡಿದ5
--------------
ವಾದಿರಾಜ
ಏನು ಮಾಡಲಯ್ಯ ಬಯಲಾಸೆ ಬಿಡದು ಪ ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ಅ ಜ್ಯೋತಿರ್ಮಯವಾದ ದೀಪದ ಬೆಳಕಿಗೆ ತಾನುಕಾತರಿಸಿ ಬೀಳುವ ಪತಂಗದಂದದಲಿಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ 1 ಅಂದವಹ ಸಂಪಗೆಯ ಅರಳ ಪರಿಮಳವುಂಡುಮುಂದುವರಿಯದೆ ಬೀಳ್ವ ಮಧುಪನಂತೆಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂಗಂಧ ವಾಸಿಸುವ ಘ್ರಾಣೇಂದ್ರಿಯಕೆ 2 ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡುಪ್ರಾಣಾಹುತಿಯೆಂದು ಸವಿವ ಮೀನಿನಂತೆಏಣಾಕ್ಷಿಯರ ಚೆಂದುಟಿಯ ಸವಿಯ ಸವಿಸವಿದುಜಾಣತನದಲಿ ನಲಿವ ಜಿಹ್ವೇಂದ್ರಿಯಕೆ 3 ದಿಮಿದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ-ಣಮವೆಂದು ತೋಷಿಸುವ ಕರ್ಣೇಂದ್ರಿಯಕೆ 4 ತ್ವಕ್ಕು ಮೊದಲಾದ ಪಂಚೇಂದ್ರಿಯಗಳೊಳು ಸಿಕ್ಕಿಕಕ್ಕುಲಿತೆಗೊಂಬುದಿದ ನೀನು ಬಿಡಿಸೊಸಿಕ್ಕಿಸದಿರು ಸಿಕ್ಕಿಗೆ ಆದಿಕೇಶವರಾಯದಿಕ್ಕಾಗಿ ನಿನ್ನಂಘ್ರಿಯೊಳೆನ್ನ ಮನವನಿರಿಸೊ 5
--------------
ಕನಕದಾಸ
ಕನಸು ಕಂಡೆನು ಕೇಳೇ ಪ್ರಾಣ ಸಖೀ ಒಳ್ಳೆ ಪ ಕನಸು ಕಂಡೆನು ಕೇಳು ಘನತರ ಸುಖದೊಳೂ ಮನದೊಳಗನುದಿನ ನೆನೆಸೇ ಸಖಿಅ.ಪ ಎಳೆಯ ಚಂದ್ರನ ಚೆಲ್ವ ಪೊಳೆವ ಬೆಳಕಿನೊಳು ಝಳಿಪಾ ಚೆಂದುಟಿಯಂ ತಿಳಿವೇ ಸಖಿ 1 ವಾಸವಾರ್ಚಿತ ಹರಿದಾಸ ತುಲಸಿರಾಮಾ ದೇಶಿಕನಾದಾನು ತಾನಹುದೇ ಸಖಿ ಅಸ್ಮದ್ದೇಶಿಕನಾದಾನು 2 ಯಾತರ ಸುಖ ಬರಿ ಮಾತಿನೊಳಿಗೆ ಜಾಣೆ ಪ್ರಿತಿಯಿಲ್ಲದೆಲೇ ತಾಮಾತರಮಳಿವುದೇನೇ 3 ಬರಿಯ ಮಾತಿನೊಳೆನ್ನಾ ಬೆರಗು ಮಾಡಲಿಬೇಡಾ ಸುರತಕೇಳಿಗೆ ಬಂದೂ ಸರಸವನಾಡೆಲೆ 4 ವಾಸವನುತ ಹರಿ ದಾಸತುಲಸಿರಾಮಾ ಆಸೆಯ ತೋರಿಯೀಪರಿಯೋಳ್ ಮೋಸಗೈವುದು ಸರಿಯೆ 5
--------------
ಚನ್ನಪಟ್ಟಣದ ಅಹೋಬಲದಾಸರು
ಗಿಣಿಯೆ ನಿನಗೇನು ಬೇಕದನೀವೆ ಹಯವದನ-ನೆನಿಪ ಹರಿಯನು ಕರೆತಾರೆ ಗಿಣಿಯೆಮುನಿ ವಾದಿರಾಜನಿಗೆ ವರವೀವ ದೇವನವನೆನೆವವರ ಬಿಡನೆಲೆ ಗಿಣಿಯೆ ಪ. ವೃಂದಾವನದಿ ಚಂದ್ರನಂತೆಸೆವ ಗೋವಿಂದಚಂದದಿ ನಿನ್ನ ಮಾತ ಮನ್ನಿಸುವನಂದಗೋಪಿಯ ಮುದ್ದುಕಂದನೆನಿಪ ಮುಕುಂದನ-ನಿಂದಿರುಳು ತಂದು ತೋರು ಗಿಣಿಯೆ 1 ಮೂರು ಬಣ್ಣದ ಕೊರಳ ತಿರಿಯುಳ್ಳ ಗಿಣಿ ನೀನುಮೂರು ಬಣ್ಣದ ಚಾರುನಯನಮಾರನನುಚರ ನೀನು ಮಾರನ ಜನಕನವನುಮೀರ ನಿನ್ನ ಬಿನ್ನಪವ ಗಿಣಿಯೆ 2 ಸತತ ಸಿರಿದೇವಿಯರ ಸುತನೆನಿಪ ಕಾಮನಿಗೆರಥವಾಗಿ ಮೆರೆವೆ ನೀ ಗಿಣಿಯೆಕೃತಕೃತ್ಯನಾದರೂ ಅದರಿಂದ ನಿನ್ನ ಮಾತಪ್ರತಿಪಾಲಿಸುವನೆÉಲೆ ಗಿಣಿಯೆ 3 ಎಲ್ಲರು ಭುಂಜಿಸುವ ಮೊದಲೆ ಭುಂಜಿಸುವ ನಮ್ಮಿನಿಯಬಲ್ಲಿದಾತನ ಬಿರುದ ನಿನಗಿತ್ತಚೆಲುವ ಸಸಿಗಳ ತೆನೆಯ ತಂದು ತಂದು ಮೆಲುವೆ ಗಡಸಲುವುದು ಮೋಹನದ ಗಿಣಿಯೆ 4 ಪಚ್ಚೆಯ ಬಣ್ಣದ ಗರಿಯ ಸಿರಿಯುಳ್ಳ ಗಿಣಿ ನೀನುಪಚ್ಚೆಯ ಬಣ್ಣದ ವ್ಯಾಸನವನುಎಚ್ಚರಿಸಿ ಕೊಡುತಿದೆ ನಿನ್ನ ಕಂಡರಾ ಮುನಿಯಮೆಚ್ಚಿದೆ ನಾನವನ ತಂದು ತೋರು ಗಿಣಿಯೆ 5 ಕೆಂದಾವರೆಯ ಪೋಲ್ವ ನಿನ್ನ ಚರಣ ಹರಿಯ ಪದದÀಂದವನು[ತಂದುತೋರು]ಗಿಣಿಯೆಚೆಂದದ ಅವನ ಚೆಂದುಟಿಯಂತೆ ನಿನ್ನ ಚೆಲುವ ಮುಖ ಕೆಂಪುತÀಂದು ಮುಂದಿರಿಸು ನೀ ಗಿಣಿಯೆ6 ಅವನ ವಾಹನನೆನಿಪ ಗರುಡನ ಕುಲದಲುದ್ಭವಿಸಿ-ದವ ನೀನೆಲೆ ಗಿಣಿಯೆಅವನ ಮುದ್ದು ನುಡಿಯ ಬಲ್ಲರೆ ನೀನು ಜಗದೊಳಗೆಸವಿಮಾತುಗಳ ನುಡಿವೆ ಗಿಣಿಯೆ 7 ಗಮನ ನಿನಗೆಸೊಗಸುನುಡಿಯಿಂದವನ ಪದಕೆ ಬಿನ್ನಹ ಮಾಡಿಸುಗುಣನ ಕರೆತಾರೆ ಗಿಣಿಯೆ8 ತಮ್ಮ ತಮ್ಮ ಮನೆಗಳಲ್ಲಿ ರಮೆಯರಸ ಕೃಷ್ಣನ-ನು ಮನದಲ್ಲಿ ಅರ್ಚಿಸಿ [ಪೂಜಿಸುವರು]ಸುಮುಖನೆಂದು ನಿನ್ನ ಮನೆಯ ಚಾವಡಿಯಲಿ ಇಹ-ನ ಮನ್ನಿಪರೆಲೆ ಗಿಣಿಯೆ 9 ಉರದಲ್ಲಿ ಸಿರಿವತ್ಸಯೆಂಬ ಕುರುಹುಂಟವಗೆಕರಗಳಲಿ ಶಂಖಚಕ್ರಗಳು ಕೊರಳಲ್ಲಿ ಕೌಸ್ತುಭಮಣಿಯಿಹ ಹಯವದನ ನ-ಮ್ಮರಸನೆಂದರಿತುಕೊ ಗಿಣಿಯೆ 10
--------------
ವಾದಿರಾಜ
ನಿನಗೆ ನಾ ಬಯ್ಯಲಿಲ್ಲೊ ಕೃಷ್ಣಯ್ಯಅಣುಗರು ಹುಯ್ಯಲಿಡುವರನು ಬಯ್ದೆ ಪ.ಮರುಳು ಮಗನೆ ನಿನಗೆ ಗೋಗಾಯ್ವದುರುಳರ ಸಂಗ ಸೊಬಗೆತರಳನಿನಗೆ ಕಳ್ಳ ಹರಳಿಗನೆಂದರೆಬೆರಳಿಟ್ಟೆ ಕಿವಿಯೊಳಗೆ ಹರಿಹರಿ 1ಠವಳಿಕಾರರು ನಾರೇರು ನಿನ್ನೊಳು ಕಂದಹವ್ವಳಿಸುತಿಹ ಜಾರೇರುಗೋವಳರಾಯನೆ ನಿನಗವರ ಸಂಗತಿ ಹೀನಪವಳ ಚೆಂದುಟಿಯ ಕೂಸೆ ಹರಿಹರಿ 2ಹುಸಿನುಡಿದರು ತಾರೊ ನನ್ನ ಕಂದಕೃಶನಾದೆ ಮುದ್ದು ತಾರೊನಸುನಗೆಯಲಿ ಮುನಿಯದೆ ಮನೆಯೊಳಗಿರೊಪ್ರಸನ್ವೆಂಕಟ ಕೃಷ್ಣಯ್ಯ ಹರಿಹರಿ 3
--------------
ಪ್ರಸನ್ನವೆಂಕಟದಾಸರು