ಒಟ್ಟು 4 ಕಡೆಗಳಲ್ಲಿ , 1 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಗನೆಂದಾಡಿಸುವಳು ಮೊಗ ನೋಡಿ ನಗುವಳು ಪ ಜಗದುದ್ಧಾರನ ಮೊಗ ಮೊಗದೊಳಿರಿಸಿಕೊಂಡು ಅ ಕಾಲಲಂದುಗೆ ಗೆಜ್ಜೆ ತೋಳ ಮಣಿಯ ದಂಡೆಫಾಲದ ಅರಳೆಲೆಯು ಕುಣಿಯೆನೀಲದುಡುಗೆಯುಟ್ಟ ಬಾಲನೆ ಬಾರೆಂದುಪಾಲುಣಿಸುವ ಪುಣ್ಯವೆಂತು ಪಡೆದಳಯ್ಯ 1 ಬಣ್ಣ ಸರವಲ್ಲಾಡೆ ವರ ರನ್ನ ನೇವಳದಹೊನ್ನ ಗಂಟೆಯು ಘಣ ಘಣರೆನಲುಪನ್ನಗಶಯನನೆ ಕುಣಿಯೊಮ್ಮೆ ಕುಣಿಯೆಂದುಕುಣಿಸಿ ನಗುವ ಪುಣ್ಯವೆಂತು ಪಡೆದಳಯ್ಯ 2 ಪೊಡವಿಯ ಈರಡಿ ಮಾಡಿದ ದೇವನಕುಡಿಬೆರಳನೆ ಕರದಲಿ ಪಿಡಿದುಅಡಿಯಿಡು ಮಗನೆ ಮೆಲ್ಲಡಿಯಿಡು ಎನುತಲಿನಡೆಗಲಿಸುವ ಪುಣ್ಯವೆಂತು ಪಡೆದಳಯ್ಯ 3 ಕುಕ್ಷಿಯೊಳು ಈರೇಳು ಜಗವನ್ನು ಸಲಹುವನರಕ್ಷಿಪರು ಉಂಟೆ ತ್ರೈಜಗದೊಳಗೆಪಕ್ಷಿವಾಹನ ನೀನು ಅಂಜಬೇಡ ಎನುತಲಿರಕ್ಷೆ ಇಡುವ ಪುಣ್ಯವನೆಂತು ಪಡೆದಳಯ್ಯ 4 ಶಂಖ ಚಕ್ರ ಗದಾ ಪದುಮಧಾರಕನಪಂಕಜ ಮಿತ್ರ ಶತಕೋಟಿ ತೇಜನಸಂಖ್ಯೆಯಿಲ್ಲದಾಭರಣಗಳ ತೊಡಿಸಿಯಲಂಕರಿಸುವ ಪುಣ್ಯವೆಂತು ಪಡೆದಳಯ್ಯ 5 ಸಾಗರಶಯನನ ಭೋಗೀಶನ ಮೇಲೆಯೋಗ ನಿದ್ರೆಯೊಳಿಪ್ಪ ದೇವನನುಆಗಮ ನಿಗಮಗಳರಸಿ ಕಾಣದ ವಸ್ತುವನುತೂಗಿ ಪಾಡುವ ಪುಣ್ಯವೆಂತು ಪಡೆದಳಯ್ಯ 6 ವಾಹನ ದೇವರ ದೇವನಹಚೆನ್ನಾದಿಕೇಶವನನೆಂತು ಪಡೆದಳಯ್ಯ7
--------------
ಕನಕದಾಸ
ಮರೆಯದಿರು ಮರೆಯದಿರು ಮನುಜಾನಾರಾಯಣನ ಸ್ಮರಣೆಯನು ಮಾಡು ಮನುಜಾ ಪ ಸತಿ ಬಣಗು ಹೆಣ್ಣುಗಳೇಕೆಮಂಗಳಾತ್ಮಕನಿರಲಿಕ್ಕೆ ಪರದೈವವೇಕೆ 1 ಹಾಲು ಹಳ್ಳವಿರಲಿಕ್ಕೆ ವಾಳಿಯವ ತರಲೇಕೆಮೇಲು ನಾಮವಿರಲಿಕ್ಕೆ ಕಟುಕು ಇನ್ನೇಕೆಬಾಲ ಹನುಮನಿರಲಿಕ್ಕೆ ಹುಲು ಕಪಿಗಳೇಕೆಒಳ್ಳೆ ತುಳಸಿ ಇರಲಿಕ್ಕೆ ಕಗ್ಗೊರಲೆಯೇಕೆ 2 ಚಿನ್ನದ ಗಿರಿಯಿರಲಿಕ್ಕೆ ಕಬ್ಬಿಣದ ಮೊರಡಿಯೇಕೆರನ್ನ ಮಾಣಿಕವಿರಲಿಕ್ಕೆ ಕಾಜಿನ ಹರಳೇಕೆಅನ್ನ ತುಪ್ಪವಿರಲಿಕ್ಕೆ ಮದ್ಯಪಾನಗಳೇಕೆಚೆನ್ನಾದಿಕೇಶವನಿರೆ ಬಿನುಗು ದೈವಗಳೇಕೆ3
--------------
ಕನಕದಾಸ
ರಾಜವದನೆ ಸುರರಾಜನ ಪುರದೊಳುರಾಜಿಸುತಿಹ ಕುಜವ ಪ ರಾಜೀವ ಮುಖಿಯೆನಿಸುವ ಸಖಿಗೊಲಿದಿತ್ತರಾಜನ ತೋರೆನಗೆ ಅ ನೆತ್ತಿಯಿಂದಿಳಿದಳ ಹೆತ್ತ ಮಗನ ಮೊಮ್ಮನೆತ್ತಿದಾತನ ಪಿತನ ತುತ್ತು ಮಾಡುವನ ವೈರಿಯನೇರಿ ಜಗವನು ಸುತ್ತು ಬರುತಲಿಪ್ಪನಕತ್ತಲೆಯೊಳು ಕಾದಿ ಅಳಿದಯ್ಯನ ಶಿರವಕತ್ತರಿಸಿದ ಧೀರನಸತ್ತ ಮಗನ ತಂದಿತ್ತವನನು ಎ-ನ್ನೊತ್ತಿಗೆ ಕರೆದು ತಾರೆ 1 ವರುಷವೈದರ ಪೆಸರವನ ತಾಯನುಜನಧರಿಸಿದಾತನ ಸಖನಧುರದೊಳು ತನಗೆ ಬೆಂಬಲ ಮಾಡಿಕೊಂಡು ಭೂವರಗೆ ತಾನೊಲಿದವನಸುರಗಿರಿಯನು ಸುತ್ತಿ ಬಾಹನ ಸುತನ ಕೈಯಲಿಹರಸಿ ದಾನವ ಕೊಂಡನಧರಣಿಜಾತನ ಶಿರವರಿದು ನಾರಿಯರನುಪುರಕೆ ತಂದವನ ತೋರೆ 2 ಹನ್ನೆರಡನೆಯ ತಾರೆಯ ಪೆಸರಾಕೆಯಕನ್ನೆಯಯ್ಯನ ಮನೆಯತನ್ನ ತಾ ಮರೆ ಮಾಡಿಕೊಂಡಿಪ್ಪರಸಿಯಬಣ್ಣವ ಕಾಯ್ದಿಹನಪನ್ನಗಶಯನ ಬೇಲಾಪುರದರಸನುತನ್ನ ನೆನೆವ ಭಕ್ತನಮನ್ನಿಸಿ ಕಾಯುವ ಚೆನ್ನಾದಿಕೇಶವ ಪ್ರ-ಸನ್ನನ ತೋರೆನಗೆ 3
--------------
ಕನಕದಾಸ
ಸಾರಿ ದೂರಿ ಹೇಳುತೇನೆ ಕೆಟ್ಟಿ ಕಂಡ್ಯ ಬಡ್ಡಿ ಮನವೆ ಪ ದೂರೋ ಬುದ್ಧಿ ಮಾಡಬೇಡ ಕೈಯೊಳಿಕೋ ಕಡ್ಡಿನಿನ್ನ ಕೈಯೊಳಿಕೋ ಕಡ್ಡಿ ಅ ಕೋಪವನ್ನೆ ಮಾಡದಿರು ಪಾಪಕೆ ಗುರಿಯಾಗದಿರುಶ್ರೀಪತಿಯ ನಾಮವನು ನೀ ಪಠಿಸುತಲಿರು ಮನವೆ 1 ಅಷ್ಟಮದದಿ ಮೆರೆಯದಿರು ನಷ್ಟಕೆ ಗುರಿಯಾಗದಿರುದುಷ್ಟಸಂಗವನ್ನು ಮಾಡಿ ಭ್ರಷ್ಟನಾಗಬೇಡ ಮನವೆ 2 ಸಿರಿಯ ಮೆಚ್ಚಿ ಮೆರೆಯದಿರು ಬರಿದೆ ಹೊತ್ತ ಕಳೆಯದಿರುಪರರ ನಿಂದೆಯನ್ನು ಮಾಡಿ ನರಕಿಯಾಗಬೇಡ ಮನವೆ 3 ಕಾಯವನ್ನು ನಂಬದಿರು ಮಾಯಕೆ ಮರುಳಾಗದಿರುಸ್ತ್ರೀಯರನ್ನು ಕಂಡು ನೀನು ಬಯಸದಿರು ಮರುಳು ಮನವೆ 4 ನಿನ್ನ ನಿಜವ ನಂಬದಿರು ಉನ್ನತಾಸೆ ಮಾಡದಿರುಚೆನ್ನಾದಿಕೇಶವನ ಪಾದವನ್ನು ನೀನು ನಂಬು ಮನವೆ 5
--------------
ಕನಕದಾಸ