ಚಂಡನಾಡಿದ ಹರಿ ಚಂಡನಾಡಿದ ಪ
ಪುಂಡರೀಕ ಕುಸುಮಮಯದ ಅ.ಪ.
ಸಾರ ಸೊಬಗಿನಿಂದ ನೋಡಿ
ಕರವ ನೀಡಿ ಪಾರಿಜಾತ ಕುಸುಮಮಯದ 1
ಸೊಂಪಿನಿಂದ ಮಂದಹಾಸ ಪೆಂಪುದೋರೆ ಸಿರಿಯಮ್ಮೆ
ಗಂಪಿನಿಂದ ರಮೆಯು ಸಹಿತ ಚಂಪಕದ ಕುಸುಮಮಯದ 2
ಪುಲ್ಲನಯನ ಪರಿಮಳವ ಚೆಲ್ವ ಚಂದ್ರ ಕಿರಣದಂತೆ
ಚೆಲ್ವನಾಂತ ಸರಸಮಾನ ಮಲ್ಲಿಗೆಯ ಕುಸುಮಮಯದ 3
ದಿವ್ಯ ಮಾಧುಪ ಝೇಂಕೃತಿಯು ಭವ್ಯಮಾಗೆ ದಿವಿಜರೆಲ್ಲ
ದಿವ್ಯಮೆಂದು ಪೊಗಳೆ ಸುಖದಿ ನವ್ಯ ಜಾಜಿ ಕುಸುಮಮಯದ 4
ಶ್ರೀನಿವಾಸ ಸಕಲ ಹೃದಯ ಶ್ರೀನಿವಾಸ ಧೇನುನಗರಶ್ರೀನಿವಾಸ ವೆಂಕಟೇಶ ಶ್ರೀನಿವಾಸ ಕುಸುಮಮಯದ 5