ಒಟ್ಟು 5 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಧ್ಯಾತ್ಮ ಹೆಚ್ಚೇನು ಅವಿದ್ಯೆ ಕಡಿಮೆಯೇನುಆಧ್ಯಾತ್ಮ ವಿದ್ಯೆಯದು ಅನುಭವಿಸಲರಿಯದವಗೆ ಪ ಪುಸ್ತಕಂಗಳ ಪಿಡಿದು ಪುಸ್ತಕದೊಳಿದ್ದುದನುವಿಸ್ತಿರಿಸಿ ಎಲ್ಲರಿಗೆ ಹೇಳುತಿಹನುಪುಸ್ತಕದ ಅರ್ಥವನು ಮನಕೆ ತಾರದಲೆಪುಸ್ತಕದ ಅಕ್ಷರವ ಪೇಳುವವಗೆ1 ಜ್ಞಾನವನು ಹೇಳುತಿಹ ಜ್ಞಾನವನು ತಾನರಿಯಜ್ಞಾನಿಗಳ ನಡೆಯನು ಮೊದಲೆ ತಿಳಿಯಜ್ಞಾನಿಗಳನೇ ಕಂಡು ಜ್ಞಾನವಿಲ್ಲೆಂದೆಂಬಜ್ಞಾನಿ ತಾನೆಂತೆಂದು ಬರಿ ಬಣ್ಣಿಸುವಗೆ 2 ಸುಳಿ ಸುಳಿದಾಡುತಸಾಧಿಸದೆ ಪುಣ್ಯ ಪುರುಷರ ನೆಲೆಯ ತಿಳಿಯದಲೆದೇವ ತಾನೆಂದು ಬರಿ ಬೋಧಿಸುವವಗೆ 3 ಯೋಗೀಶ್ವರರ ಕಂಡು ಯೋಗದಿಂದೇನೆಂಬಯೋಗವಳವಟ್ಟ ತೆರನಂತೆ ನುಡಿದಯೋಗಾಮೃತದ ಪೂರ್ಣರಸವ ಸವಿದುಣ್ಣದೆಲೆಯೋಗಿ ತಾನೆಂದು ಬರಿ ತೋರುತಿರುವವಗೆ 4 ಮಾಡಿದಡೆ ಬಹದಲ್ಲ ಕೇಳಿದಡೆ ಬಹದಲ್ಲಆದರಿಸಿ ಒಬ್ಬರಿಗೆ ಹೇಳಿದಡೆ ತಾ ಬರದುಸಾಧಿಸಿಯೆ ಮನನದಭ್ಯಾಸದಿಂ ದೃಢವಾಗಿವಾದಹರ ಚಿದಾನಂದ ತಾನಾದರಲ್ಲದೆ5
--------------
ಚಿದಾನಂದ ಅವಧೂತರು
ಏಳು ಚೆನ್ನಿಗರಾಯ ನನ್ನೀನಾಗರ ಏಳು ಪ. ಏಳೆನ್ನ ಕಣ್ಮಣಿಯೇ ಕಾಳಿಮರ್ಧನಕೃಷ್ಣ ಅ.ಪ. ಮಾರನೆಯ ದಿನದಲ್ಲಿ ನೀ ಹಾರುತ್ಯಾರುತ ಬಂದು ಸೀರೆ ಸೆರಗನು ಪಿಡಿದು ಬೆಲ್ಲವನು ಬೇಡಲು ಕೇಳಿಕೊಳ್ಳವುದೇಕೆ ಹಗಲುಗಳ್ಳನೆ ಹೋಗು ಒಳಿತು ಚೋರರಿಗೆಲ್ಲ ಕೇಳಿ ಕೊಳಲೆಂದೆ 1 ಚೋರ ನೀನೆಂದುದಕ್ಕೆ ಈ ಸೀರೆಯನು ಜರಿವರೇ ಚೋರನಲ್ಲವೇ ನೀನು ಮಧ್ವರ ಹೃದಯ ಕದ್ದ 2 ಜಾರ ನೀನೆಂದುದಕೆ ಕರೆಕರೆಗೊಳಿಸುವರೆ ಜಾರೆಯಾಸಹುದು ನೀನಲ್ಲ ಜಾರರಮಣ 3 ಕಂಡದನು ಆಡಿದರೆ ಕಡುಕೋಪವ್ಯಾತಕೆ ಹಿಂಡು ಗೋವಳಲೊಡೆಯ ಪುಂಡನೀನಹುದು 4 ಮಜ್ಜನವ ಮಾಡಿಸುವೆ ಸುಳಿಗುರುಳ ತಿದ್ದುವೆ ಸಜ್ಜಾದ ಚಂದನದ ಚಂದ್ರಮನ ಫಣಿಯಲಿಡುವೆ 5 ಗೊಲ್ಲಬಾಲರು ಈಗ ಕರೆಯಲು ಬರುವರು ಮೆಲ್ಲಗೆ ಎದ್ದು ನೀ ಬೆಲ್ಲವನು ಮೆಲ್ವ ಬಾಲಕೃಷ್ಣ 6 ಮಧ್ವೇಶ ನೀನೇಳು ಮುದ್ದು ಮೊಗದವನೆ ಏಳು ಹದ್ದುವಾಹನ ಏಳೂ ಹಾಲಕುಡಿಯೇಳು 7 ಹಾಲು ಬೆಲ್ಲವ ಸವೆದು ಸುಧೆಯನು ಸುರಿಸೇಳೋ ಪಾಲಗಡಲ ಶಯನ ಶಯನದಿಂದೇಳೋ 8 ಮುನಿಸು ಏಕೇಕೆ ರಮಣ ಮುಸುಕನು ತೆಗೆದೇಳು ತಿನಿಸು ತಿಂಡಿಯ ಕೊಡುವೆ ತನಿವಣ್ಣ ಕೊಡುವೆ 9 ಚಿನ್ನದಾ ಒಂಟೆಳೆಯ ರನ್ನಧಾಭರಣ ಭಿನ್ನ ಭಿನ್ನವಾದ ಆಭರಣಗಳಿಡುವೆ ಕೃಷ್ಣ 10 ಹೆಚ್ಚೇನು ಪೇಳಲಿ ಮಗಸಾಮ್ರಾಜ್ಯದ ದೊರೆತನವು ನಿನ್ನದೊ ಸ್ವಚ್ಚಾಗಿ ಹೇಳುವೆನು ಫಲಿಸೇಳು ಕೃಷ್ಣಾ 11 ಬಾಧಿಸದೆ ಜಾಗವನು ಬಿಟ್ಟೇಳೊ 12 ಏನು ಬಯಸಿದ ಕೊಡುವೆ ಮನಬಯಕೆ ಪೂರೈಸೊ ಮನದನ್ನನೇ ಎನ್ನ ಕಾಳಿಮರ್ಧನಕೃಷ್ಣ 13
--------------
ಕಳಸದ ಸುಂದರಮ್ಮ
ಏಳೇಳೇಳೆಲೆ ಮಾಮ | ಆರೋ ರೇಳೋದು ಸುಳ್ಳು ಬಂತು ಕ್ಷಾಮ ಪ ಹಾಳಾಗಿ ಹೋಯ್ತು ಮಳೆಬಳೆ ಕಾಳೆಲ್ಲ ಕಸವಾಯಿತು ಅ.ಪ ಭೂಮಿ ಒಕ್ಕಲಮಗನದು ಭೂಮೆಮ್ಮನ ಮಕ್ಕಳು ಒಕ್ಕಲಿಗರು ಭೂಮಿ ಬೆಳೆದರೆ ಅರ್ಧವನ್ನು ಬ್ರಾಹ್ಮಣರಿಗೇಕೆ ಕೊಡಬೇಕು 1 ಆರೋರು ಹೊಲ ಮಾಡಬಾರದು ಮಾಡಿದರೆ ಬಲು ಪಾಪ ಮಾರಲಿ ನಮಗೆ ಮೂರಕ್ಕೆ ನಾಲ್ಕಕ್ಕೊ ಏನಲಾ ಯೀರ್ಕೆಂಪ 2 ಎರವು ಇಸ್ತೆ ಚೇಸ್ತಾನು ಒದ್ದಂಟೆ ವಾಡೆ ಪೋನಿ ವಲ್ಲ ಬಾ ಪ್ನೋಳ್ ಚೇನು 3 ಹೊಲಕುಯಿದು ಕಟ್ಟುವಾಗ ಛಲದಿ ಹಾರುವೈಯ ಬೇಗ ಒಕ್ಕಲಿಗನ ಕಾಯಬೇಕಂತಾನೆ ಬಲು ಭ್ರಾಂತನು ತಾನೆ4 ಕೊಳಗ ಕೊಡÀುವೆವೇಳು ನಮ್ಮಲ್ಲಿ ನಡೆಯದು 5 ಕಂದಾಯ ಕೊಡುವಮಟ್ಟಿಗೆ ಕಾಳುಕೊಟ್ಟರೆ ಸಾಕು ಮುಂದಲು ಬಾರಿಗೆ ಸಾವೇ ಹಾಕಿ ಮೂಗಳಕ್ಕೆ ಗುತ್ತಿಗೆಬೇಕು 6 ನಾವು ತಿಂದು ಮಿಕ್ಕದರೊಳಗೆ ಹಾರೋರಿಗೆ ಸರಿಪಾಲು ಕಾಲ ಕಳ್ವೋದೆ ಮೇಲು 7 ಹೆಂಡಿರು ಹಿಟ್ಟು ಹೊರಲಿಲ್ಲ ಈ ಪುಂಡುತನ ನಮ್ಮಲಿ ಸಲ್ಲಾ ಭಂಡಿಸೌದೆ ಬೇಕೆಂದು ಬರುತಾನೆ ಭಲೆ ಭಲೆ ಹಾರೋನೆ 8 ನಮ್ಮದುಕೇಳಲೆ ಇನ್ನು ಉಳುಮೆಯಿಲ್ಲ ಹಾರುವೈಯಂಗೆ ರಾಜಿನಾಮೆ ಕೊಡಲಿ ಬಿಡಲೆ 9 ಎಷ್ಟು ಧರ್ಮದೊಳಿದ್ದುರು ರೈತರು ಕಷ್ಟಪಡುವರು ನಾವೆ ಬಿಟ್ಟಿ ಹಾರುವಯ್ಯ ಬಲ್ಲೆನೆ ಗುರುರಾಮವಿಠಲಗಾಗಲಿ ಸೇವೆ 10
--------------
ಗುರುರಾಮವಿಠಲ
ಸಂಪ್ರದಾಯದ ಹಾಡು ವೆಂಕಟೇಶನ ಉರುಟಣೆಯ ಹಾಡು ಭಾರ್ಗವಿ ರಮಣಾ | ಜಗದಾಭಿ ರಮಣಾ ಪ ಲೋಕನಾಯಕ ಸ್ವಾಮಿ | ವೈಕುಂಠಾದಿಂದ ಬಂದೂಏಕಾಂತವಾನಾಡಿದಾ | ಲಕ್ಷೀಯರೊಡನೆ 1 ಧರೆಗೆ ವೈಕುಂಠಾದ | ಚರ್ಯವ ತೋರುವೆನೆಂದುಶಿರಿ ಮಹಾಲಕ್ಷೀಯೊಡನೆ | ಸಂಧಿಸಿದಾನೂ 2 ಸ್ವಾಮಿ ಕಾಸಾರದಲೀ | ಧಾಮಾವ ರಚಿಸೂವೆಆ ಮಹಾ ವೈಕುಂಠಾವ | ಅಗಲೀ ಬಂದೂ 3 ವತ್ಸರ ಕಾಲದಲೊಂದು | ಉತ್ಸವ ಮಾಡುವೆನೆಂದುಇಚ್ಛೆ ಮಾಡಿದನೂ ವೆಂಕಟ ಇಂದಿರೆಗೂಡಿ 4 ನವರಾತ್ರಿ ದಿವಸದಲೀ | ವಿವಾಹ ಲಗ್ನವ ರಚಿಸೀಅವನಿಯೊಳು ಡಂಗುರವನ್ನು ಹೊಯಿಸೀದ ಸ್ವಾಮೀ 5 ಕಾಶಿ ಕರ್ನಾಟಕದ | ದೇಶಾ ದೇಶದ ಜನರುಶ್ರೀಶಾನುತ್ಸವಕೇ ಜನರು ಒದಗೀದರಾಗಾ 6 ಹದಿನಾಲ್ಕು ಲೋಕಾದ | ಪದುಮಜಾದಿಗಳೆಲ್ಲಾ ಮದುವೆಯಾ ದಿಬ್ಬಣದಾ | ಜನರು ಬಂದರಾಗಾ 7 ಗರುಡಾ ಕಂಬದ ಸುತ್ತಾ | ಪರಿಪರಿ ವೈಭವದಿಂದಗಿರಿಯಾ ವೆಂಕಟಗೇ | ಕಂಕಣ ಕಟ್ಟಿದರಾಗಾ 8 ಆಗಮಾ ಪುರಾಣ | ರಾಗ ಮದ್ದಳೆ ತಾಳಭಾಗವತರೂ ಸುತ್ತ ಮಾಡುತಿರಲೂ 9 ತಾಳ ತಮ್ಮಟೆ ಕಾಳೆ | ಭೋರೆಂಬೋ ವಾದ್ಯಗಳೂವರ ನಾರಿಯರು ಸುತ್ತಾಗ್ಹಾಡುತಿರಲೂ 10 ಚಿನ್ನದ ಕರಿಮಣಿ | ರನ್ನ ಮಂಗಳಸೂತ್ರಹಿರಿಯಾ ವೆಂಕಟನೂ ಲಕ್ಷ್ಮೀಗೆ ಕಟ್ಟಿದ ನಗುತಾ 11 ಮುತ್ತಿನಾ ಕರಿಮಣಿ | ರತ್ನ ಮಂಗಳಸೂತ್ರಾಸ್ವಾಮಿ ವೆಂಕಟ ಲಕ್ಷ್ಮೀಗೆ ಕಟ್ಟಿದ ನಗುತಾ 12 ಅಂತರಾ ಮಾರ್ಗದೊಳೂ | ನಿಂತು ದೇವತೆಗಾಳು ಸಂತೋಷದಿಂದಲಿ ಜಯ ಜಯವೆಂದು ಪಾಡಿದರಾಗ 13 ಅಂಗಾನೆ ಶ್ರೀ ಭೂಮಿ | ರಂಗಾಮಂಟಪದೊಳಗೆಬಂಗಾರ ಗಿರಿಯಾ ವೆಂಕಟ ಒಪ್ಪಿದ ಸ್ವಾಮೀ 14 ಅತಿರಸಾ ಮನೋಹರ | ಮಿತಿಯಿಲ್ಲದ ಪದಾರ್ಥಗಳೂಸತಿಯರೆಲ್ಲರು ಭೂಮಕೆ ತಂದು ಬಡಿಸಿದರಾಗ 15 ಬೆರದ ನಾರಿಯರೆಲ್ಲ | ಹರಿಭೂಮಾ ನಂತರದೀಭರದಿ ಉರುಟಣಿಗೆ ಅಣಿ ಮಾಡಿದರಾಗಾ 16 ಮಿತ್ರೆ ಲಕ್ಷ್ಮೀಗೆ ತಕ್ಕ | ಹಿರಿಯರು ಪೇಳಲುಛಂದದಿಂದಲಿ ಅರಿಷಿನ ಕಲಸಿ ನಿಂತಳಾಗ 17 ಪನ್ನಗ ನಗವಾ | ಸೇರಿದ ಮಹರಾಯದುಡ್ಡು ದುಡ್ಡಿಗೆ ಬಡ್ಡಿಯನ್ನು ದುಡಿವಾ ಲೋಭಿ 18 ವಂಚಿಸಿ ಜನರನ್ನು | ಲಂಚಾ ಲಾವಣಿ ತೆಗೆದುಹಿಂಚಾಸಿ ವರ ಕೊಡುವಾ ಹಿತದಾ ದೇವಾ 19 ಬಡವಾ ಬಲ್ಲಿದರೆಂದು | ಬಿಡದಾಲೆ ಅವರಿಂದಮುಡುಪು ಹಾಕಿಸಿಕೊಂಡು (ಮುಂದಕೆ) ಬಿಡುವೋ ದೇವಾ 20 ಅನ್ನವೆಲ್ಲವ ಮಾರಿ | ಹೊನ್ನು ಕಟ್ಟುವೆಯಲ್ಲೊಅನ್ನದಾನವ ಮಾಡಲೊಲ್ಲಿ ಅನ್ಯಾಕಾರಿ 21 ಹೊನ್ನು ಸಾಲವ ತೆಗೆದು | ಎನ್ನಾ ಕಟ್ಟಿಕೊಂಡುಮನೆ ಮನೆಗೆ ಭಿಕ್ಷವ ಬೇಡುವ ಮಾನವಂತಾ 22 ಹೊನ್ನು ಸಾಲದು ಎಂದು | ಎನ್ನ ಸಾಕುವೆ ಹೇಗೋನಿನ್ನಾ ಕೃಪಣತನಕೆ ನಾನು ಎಣೆಗಾಣೆನೋ 23 ಇಪ್ಪತ್ತು ದುಡ್ಡೀಗೆ | ಸೇರು ತೀರ್ಥವ ಮಾರಿದುಡ್ಡು ಕಟ್ಟಿ ಜಾಳಿಗೆ ಗಳಿಸುವ ಜಾಣ ನೀನೂ 24 ಅಟ್ಟಾ ಮಡಿಕೆಯಲ್ಲಾ | ಕುಟ್ಟಿ ನಾಮವ ಮಾಡಿಗಟ್ಟಿಯಾಗಿ ಗಂಟು ಗಳಿಸುವ ಘನವಂತಾ 25 ದೇಶದೊಳು ನಿಮ್ಮಂಥಾ | ಆಸೆ ಉಳ್ಳವರಿಲ್ಲಕಾಸು ಕಟ್ಟಿ ಕವಡೆ ಗಂಟು ದುಡಿವ ಲೋಭಿ 26 ಮಡದಿ ನಾನಿರಲಿಕ್ಕೆ | ಕಡಿಮೆ ಏನಾಗೋದುಬಡತನ ನಿನಗೆ ಯಾತಕೆ ಬಂತೂ ಸ್ವಾಮೀ 27 ನಾರೀಯಾ ನುಡಿ ಕೇಳಿ | ವಾರೆ ನೋಟದಿ ನೋಡಿಮೋರೆ ತಗ್ಗಿಸಿ ವೆಂಕಟ ಮುನಿದು ನಿಂತಾ 28 ಕಡುಕೋಪಾ ಮಾಡುವರೆ | ಹುಡುಗನಂತಾಡುವರೆಕೊಡಲೀಯ ಪಿಡಿವಾರೆ ನಾನು ನುಡಿದಾ ನುಡಿಗೇ 29 ಕಣ್ಣಾನೆ ಬಿಡಬ್ಯಾಡ | ಬೆನ್ನ ತೋರಲಿ ಬ್ಯಾಡಾಇನ್ನು ಮುಖವಾ | ತಗ್ಗಿಸಬ್ಯಾಡ ಇತ್ತ ನೋಡೂ 30 ಎನ್ನರಸಾ ಹೊನ್ನರಸಾ | ಚೆನ್ನಿಗ ವೆಂಕಟರಾಯಾನಿನ್ನ ಪೋಲುವರ್ಯಾರೊ | ಜಗದೊಳು ನೀಲಗಾತ್ರಾ 31 ಎನ್ನರಸಾ ಚೆನ್ನರಸಾ | ಚೆನ್ನಿಗ ವೆಂಕಟರಮಣಾನಿನ್ನ ಮುದ್ದು ಮುಖವ ತೋರೊ ಅರಿಷಿಣ ಹಚ್ಚೇನು 31 ಎನ್ನುತ ಅರಿಷಿಣ | ಹಚ್ಚಿ ಕುಂಕುಮವಿಟ್ಟುರನ್ನ ಹಾರವ ಹಾಕಿ ತಾನು ಕುಳಿತಾಳಾಗ 33 ಮಂದರಧರ ತಾನೂ | ಛಂದದರಿಶಿನ ಪಿಡಿದೂಇಂದಿರಾದೇವಿಯನ್ನು ಮಾತನಾಡಿಸಿದಾ 34 ಎನ್ನರಸಿ ಹೊನ್ನರಸಿ | ಚೆನ್ನಿಗ ಮಾಯಾದೇವಿನಿನ್ನ ಮುದ್ದು ಮೊಗವಾನೆ ತೋರು ಅರಿಷಿನ ಹಚ್ಚೇನು 35 ಭಿಡೆಯಾ ನೋಡದೆ ಇಂಥಾ | ನುಡಿಗಳಾಡಿದ ಮ್ಯಾಲೆನಡುಗಿ ಮೋರೆಯ ತಗ್ಗಿಸಲಿಹುದೆ ನಾಚಿಕೆ ಯಾಕೆ 36 ಭಾಗ್ಯಾದ ಮೊಬ್ಬಿಲಿ | ಬಾಗಿ ನೀ ನಡೆಯಾದೇಅಗ್ಗಳಿಕೆ ಮಾತುಗಳನ್ನು ಆಡಿದೆಯಲ್ಲೇ 37 ಮಿಂಚಿನಂದದಿ ಬಹಳಾ | ಚಂಚಲ ಬುದ್ಧ್ಯವಳೇವಂಚಿಸೂವಳೆ ಜಗವಾ ವಾರಿಜಾಕ್ಷೀ 38 ಬಂಗಾರಾ ಮುಡುಪಿಗೆ | ಎನ್ನ ಕಂಗೊಳಿಸೀಗಾ ಹಿಂಗಾದೆ ಮಂಕು ಮಾನವರ ಮಾಡುವುದರಿದೇ 39 ಕಂಚುಕ ವೆಂಕಟ ಬಿಗಿದಾ ನಗುತಾ 40 ತಾಂಬೂಲವನೆ ಮೆದ್ದು | ಮಡದಿಯಾ ಮುಖ ಸೂಸೆಇಂಬೀಲ್ಹಚ್ಚೆ ಬರೆದರಾಗ ಅತಿ ಸಂಭ್ರಮದೀ 41 ತಿರುಮಲೇಶನು ತನ್ನ | ಮಡದೀಯನು ಎತ್ತಿಭರದಿಂದಾ ತನ್ನರಮನೆಗಾಗಿ ತೆರಳಿದಾನು 42 ದ್ವಾರದಾದಡಿಯಲ್ಲಿ | ನಾರೇರೆಲ್ಲರು ನಿಂತುವಾರಿಜಾಕ್ಷಿ ಪತಿಯ ಹೆಸರಾ ಹೇಳೆಂದರು 43 ಕಿರುನಗೆಯಿಂದ ಲಕ್ಷ್ಮೀ | ಗಿರಿಯಾ ವೆಂಕಟನೆನಲೂಹರಿಯೆ ನಿನ್ನ ರಮಣಿ ಹೆಸರಾ ಹೇಳೆಂದರೂ 44 ಜಾತಿ ನಾಚಿಕೆ ತೊರೆದು | ಶ್ರೀ ತರುಣಿ ಎನುತಾಲೆಪ್ರೀತಿಯಿಂದಲಿ ಸಿಂಹಾಸನದಿ ಕುಳಿತರಾಗಾ 45 ಮತ್ತೆ ನಾರಿಯರೆಲ್ಲಾ | ಮುತ್ತಿನಾರತಿ ಪಿಡಿದೂಸತ್ಯಾಭಾಮೆಗೆ ಜಯ ಜಯವೆಂದರಾಗ 46 ವಿಭುವಿನ ಗುಣವನ್ನು ವಿಸ್ತರ ಪೇಳಿದ ಜನಕೆಸಮಯದಂಥ ಭಾಗ್ಯವನಿತ್ತು ಸಲಹುವ ಸ್ವಾಮಿ 47 ಮಂಗಳ ವೆಂಕಟರಾಯಾ | ಮಂಗಳ ಮಾಧವರಾಯಾಮಂಗಳ ಮಾನಸಗೇಯಾ | ಮಂಗಳ ಮಾಧವರಾಯಾ 48 ಧರೆಯೊಳಧಿಕನಾದ | ದೊರೆ ವ್ಯಾಸವಿಠಲಾನುಪರಮ ಭಕ್ತಿ ಸುಜ್ಞಾನವನು ಪಾಲಿಸೂವಾ 49
--------------
ವ್ಯಾಸವಿಠ್ಠಲರು