ನಂಬುಗೆ ಪಡಿಯಿರೋ ದೇವರ ದೇವನಾ ಪ
ಧಾಮ ಸಾರ್ವಭೌಮ
ತಾಮರಸ ಸಖ ಆ ಮಹಾಕುಲೋದ್ದಾಮ ಆಹವ ಭೀಮ|
ಸ್ವಾಮಿ ಸಕಲರ ಕಾಮಿತಾರ್ಥವ ನೇನಿ ಮುನಿಜನ ಪ್ರೇಮಿ|
ಚರಿತ ನಿಸ್ಸೀಮಿಯಾ1
ಧಾಟಿಯಲಿ ನರನಾಟಕ ವಿಡಿದ ಆಟವಾಡಲು ನೀಟಾ|
ಕೋಟಿ ಕೋಟಿ ನಿಶಾಟ ದರ್ಪೋಚ್ಚಾಟ ಮಾಡಿದ ಸ್ಪೋಟಾ|
ನೀಟ ಶರಣ ಮುಕುಟಿಗಿತ್ತನು ಪೀಠಾ|
ಧೀಟ ಶ್ರೀ ಜಟೆ ಜೂಟ ವಂದಿತ ಪಾಟರಹಿತ ಸ್ಪರಾಟನಾ 2
ಅಂದು ಇಂದೇ-ನೆಂದಿಗಾದರ ವಂದೇ ದಯದಿಂದ|
ಛಂದ ಛಂದದ-ಲಿಂದ ಭೋಕ್ತರ ಬಂಧು ಭಕ್ತರ ವೃಂದ|
ಸುಂದರಾನನ ಕುಂದರದನ ಸುಮಂದ ಹಾಸಾನಂದ|
ಇಂದಿರೈರಸ ತಂದೆ ಮಹಿಪತಿ ಕಂದ ಪ್ರೀಯ ಮುಕುಂದನಾ 3