ಹೂವ ಕೊಡೆ ದೇವಿ ಹೂವ ಕೊಡೆಯಾವಾಗಲೂ ನಿಮ್ಮ ಸಿರಿಮುಡಿಯೊಳಗಿರ್ಪ ಪ ವರಮಹಾಲಕ್ಷ್ಮಿ ನಿಮ್ಮ ಸಿರಿಮುಡಿಯನೆ ಕಟ್ಟಿಪರಿ ಪರಿ ಧೂಪ ಧೂಮಗಳನಿಕ್ಕಿಪರಿಮಳಿಸುವ ಸಂಪಿಗೆಯ ಪೂಸರವ ಸಿಂ-ಗರಿಸಿರಲಾಮಾಳಿಕೆಯೊಳು ಸಂಪಿಗೆ ಹೂವ 1 ಮರುಗ ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸರಸಿಜ ಮೊದಲಾದ ಕುಸುಮದಿಂದಪರಿಮಳಿಸುವ ನಿಮ್ಮ ಸಿರಿಮುಡಿಯೊಳಗಿರ್ಪಅರಳಿದ ಮಲ್ಲಿಗೆ ಹೂವ ಕಂಡೆ ಹೂವ 2 ವ್ಯೋಮಗಂಗೆಯೊಳಿಂದ ಹೇಮಕಾಮರಸವಕಾಮಿನಿಯರು ಕೊಯ್‍ತಂದದನುಶ್ರೀ ಮಹಾದೇವಿ ನಿಮ್ಮ ತುರುಬಿಗೆ ಮುಡಿಸಿರ-ಲಾ ಮಹಾಕುಸುಮ ಮಾಲಿಕೆಯೊಳು ತಾವರೆ ಹೂವ 3 ಮುತ್ತಿನ ಲಹರಿಯ ರತ್ನದ ರಾಗಟೆಯಸುತ್ತ ಮುತ್ತಲೂ ರಾರಾಜಿಸುವಪುತ್ಥಳಿಯ ಚಿನ್ನದಂತೆ ಘಮಘಮಿಸುವಉತ್ತಮವಾದ ಸುವರ್ಣದ ಕೇದಗೆ ಹೂವ 4 ಜಾತಿ ರತ್ನದ ನಡುವೆ ಜ್ಯೋತಿಯ ತೆರನಂತೆನೂತನವೆನಿಸಿ ಪ್ರಜ್ವಲಿಸುತಿಹಶಾತಕುಂಭದ ಚೌರಿಯ ಮೇಲೆ ಮುಡಿಸಿದಜಾತಿಮಲ್ಲಿಗೆ ಸಂಪಿಗೆ ಸೇವಂತಿಗೆ ಹೂವ 5 ಇಂದೀವರದಳನಯನೆ ಶುಭಪ್ರದೆಇಂದು ನಿಭಾನನೆ ಹೂವ ಕೊಡೆಮಂದಗಮನೆ ನಿಮ್ಮ ತುರುಬಿನೊಳೊಪ್ಪುವಮಂದಾರದ ಮೋಹನ ಮಾಲಿಕೆಯೆಂಬ ಹೂವ 6 ಚಂದ್ರಗಾವಿಯ ಸೀರೆ ಚೆಲುವ ಮುತ್ತಿನಸರದಿಂದಲೆಸೆವ ದೇವಿಹೂವ ಕೊಡೆಮುಂದಲೆ ಮುತ್ತಿನ ಸರದ ಮೇಲೊಪ್ಪುವಬಂಧುರಪೂಗಪುನ್ನಾಗ ಪಾರಿಜಾತದ ಹೂವ 7 ದೇವಿ ನಿಮ್ಮನು ಪೂಜೆಗೈದು ಮೆಚ್ಚಿಸಬಲ್ಲನಾವನೀ ಧರೆಯೊಳುಹೂವ ಕೊಡೆಪಾವನಾತ್ಮಕಿಯ ಪರಾಕ ಮಾಡದೆ ವರ-ವೀವ ಸಮಯವಿದು ಹೂವ ಕೊಡೆ ಹೂವ 8 ಮುತ್ತೈದೆತನವನು ನಿತ್ಯ ಸೌಭಾಗ್ಯವಉತ್ತಮ ಧನಕನಕಾಂಬರವಪುತ್ರ ಸಂತಾನವ ಕೊಡುವೆನೆನುತ ಕರ-ವೆತ್ತಿ ಅಭಯವಿತ್ತು ಹೂವ ಕೊಡೆ ಹೂವ 9 ಎಂದೆಂದೂ ಈ ಮನೆಗೆ ಕುಂದದ ಭಾಗ್ಯವಚಂದವಾಗಿಹ ಛತ್ರಚಾಮರವಚಂದ್ರ ಸೂರ್ಯರ ಪೋಲ್ವ ನಂದನರನುದಯ-ದಿಂದಲಿ ಕೊಟ್ಟು ರಕ್ಷಿಪನೆಂದು ಸೂಡಿದ ಹೂವ10 ವರದಾನದಿಯ ತೀರವಾಸ ಶ್ರೀ ಕೆಳದಿಯಪುರವರಾಧೀಶ ರಾಮೇಶ್ವರನಪರಮ ಪಟ್ಟದ ರಾಣಿ ಪಾರ್ವತಿ ನಿಮ್ಮಯಸಿರಿಮುಡಿಯೊಳಗಿರ್ಪ ಹೂವ ಕೊಡೆ ಹೂವ 11