ಕೋಲ ಕೋಲೆನ್ನ ಕೋಲ ಕೋಲ ಕೋಲೆನ್ನ ಕೋಲಕೋಲೆಂದು ಪಾಡುವರೆಷ್ಟು ಕೇಳ ವಯ್ಯಾರಿ ಪ.
ಚಿತ್ರ ವಿಚಿತ್ರದ ಮುತ್ತು ಮಾಣಿಕ ಎಸವೋಛತ್ರÀ ಹಿಡಿದವರೆಷ್ಟ ಕೇಳ ವೈಯಾರಿ 1
ಶ್ವೇತ ಛತ್ರವುಕೋಟಿ ಪ್ರೀತಿಲಿ ಹಿಡಿದವರೆಷ್ಟ ಕೇಳವಯ್ಯಾರಿ2
ಸೂರ್ಯ ಪಾನವುಕೋಟಿಸಾರೆ ಹಿಡಿದವರೆಷ್ಟ ಕೇಳ ವಯ್ಯಾರಿ3
ಎಡಬಲ ಚಾಮರ ಹಿಡಿಕೆ ನವರತ್ನ ಹೊಳೆವ ಹಿಡಿದು ಬೀಸುವರವರೆಷ್ಟ ಕೇಳ ವಯ್ಯಾರಿ 4
ರತ್ನ ಮಾಣಿಕ ಬಿಗಿದ ಬೀಸಣಿಕೆಯ ಹಿಡಿದುಚೆನ್ನಾಗಿ ಬೀಸುವವರೆಷ್ಟ ಕೇಳ ವಯ್ಯಾರಿ 5
ಚಲುವ ರಂಗನ ಮುಂದೆ ನಲಿಯುತ ನವಿಲಗÀರಿಯಸುಳಿಸುವವರೆಷ್ಟ ಕೇಳ ವಯ್ಯಾರಿ 6
ಅಚ್ಚ ಜರತಾರಿ ವಸ್ತ್ರ ಜತ್ತಾಗಿ ನಿರಿ ಹೊಯ್ದುಬಿಚ್ಚಿಹಾರಿಸುವರೆಷ್ಟ ಕೇಳ ವೈಯ್ಯಾರಿ 7
ಫುಲ್ಲನಾಭನ ಮುಂದೆ ಮಲ್ಲ ಮುಷ್ಠಿಕರುತಮ್ಮೆಲ್ಲವಿದ್ಯೆಯನು ತೋರಿಸುವರೆಷ್ಟ ಕೇಳ ವೈಯಾರಿ 8
ಬಂದಿಗಳು ರಾಮೇಶನ ಒಂದೊಂದು ಗುಣ ರಚಿಸಿಚಂದಾಗಿ ಹೊಗಳುವರೆಷ್ಟ ಕೇಳ ವೈಯ್ಯಾರಿ9